Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾವಿನ ಮನೆಯಲ್ಲಿ ಸಂಭ್ರಮ ಬೇಕಾ?: ರಾಜ್ಯ...

ಸಾವಿನ ಮನೆಯಲ್ಲಿ ಸಂಭ್ರಮ ಬೇಕಾ?: ರಾಜ್ಯ ಸರಕಾರಕ್ಕೆ ಕುಮಾರಸ್ವಾಮಿ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ27 July 2022 8:27 PM IST
share
ಸಾವಿನ ಮನೆಯಲ್ಲಿ ಸಂಭ್ರಮ ಬೇಕಾ?: ರಾಜ್ಯ ಸರಕಾರಕ್ಕೆ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು, ಜು.27: ರಾಜ್ಯ ಸಾವಿನ ಮನೆಯಾಗಿದೆ. ಇಂಥ ಸಂದರ್ಭದಲ್ಲಿ ಸರಕಾರಕ್ಕೆ ಸಂಭ್ರಮ ಯಾಕೆ? ಸಂಭ್ರಮಾಚರಣೆ ಮಾಡಲು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಿರಬೇಕಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಬುಧವಾರ ನಗರದಲ್ಲಿರುವ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಕ್ತ ಮತ್ತು ಸುರಕ್ಷತೆ ವಾತಾವರಣ ಇಲ್ಲದೇ ಹೋದರೆ ಯಾವ ಗ್ಯಾರಂಟಿ ಮೇಲೆ ಜನರು ಮನೆಯಿಂದ ಆಚೆ ಬರುತ್ತಾರೆ. ಯಾರಿಗೆ ಬೇಕಿದೆ ಇವರ ಸಂಭ್ರಮ? ಎಂದು ಕಿಡಿಕಾರಿದರು.

ಇದನ್ನೂ ಓದಿ: ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂತಹ ಗಲಾಟೆಗಳಲ್ಲಿ ಕಾಣಿಸುವುದೇ ಇಲ್ಲ: ಕುಮಾರಸ್ವಾಮಿ ವಾಗ್ದಾಳಿ

ಕಾಂಗ್ರೆಸ್, ಬಿಜೆಪಿ ಅಧಿಕಾರಕ್ಕೆ ಬಂದರೆ ಸಾವುಗಳು: ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರಗಳು ಇದ್ದಾಗ ಎಷ್ಟು ಸಾವುಗಳು ಆಗಿವೆ? ಮೈತ್ರಿ ಸರಕಾರವನ್ನು ತೆಗೆದು ಬಿಜೆಪಿ ಸರಕಾರ ಬಂದ ಮೇಲೆ ಎಷ್ಟು ಸಾವುಗಳು ಆಗಿವೆ? ಎನ್ನುವುದು ಜನರಿಗೆ ಗೊತ್ತಿದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಈ ರೀತಿಯ ಸಾವುಗಳು ಆಗಿರಲಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಶಾಂತಿ ಸುವ್ಯವಸ್ಥೆ ಹಾಳಾಗಿ ಎಷ್ಟೆಲ್ಲಾ ಜನರು ಸತ್ತರು? ಇದನ್ನೆಲ್ಲವನ್ನು ಲೆಕ್ಕಾಚಾರ ಮಾಡಬೇಕಿದೆ ಎಂದು ಅವರು ಹೇಳಿದರು.

ಪೆÇಲೀಸ್ ಇಲಾಖೆಗೆ ಶಕ್ತಿ ತುಂಬಿ: ಬಿಜೆಪಿ ಸರಕಾರಕ್ಕೆ ನಾನು ಹೇಳುವುದು ಇಷ್ಟೇ, ಮೊದಲು ಪೊಲೀಸ್ ಇಲಾಖೆಯನ್ನು ಭದ್ರಗೊಳಿಸಿ. ಅಧಿಕಾರಿಗಳಿಗೆ ಶಕ್ತಿ ಕೊಡಿ. ಆದರೆ, ಒಂದು ಕೆಲಸಕ್ಕೆ ರೇಟ್ ಫಿಕ್ಸ್ ಮಾಡಿದರೆ ಅಥವಾ ಹಣ ಕೊಟ್ಟ ಅಧಿಕಾರಿ ನ್ಯಾಯಯುತವಾಗಿ ಕೆಲಸ ಮಾಡುತ್ತಾನಾ? ಕಂದಾಯ, ಪೊಲೀಸ್ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲಿ ಈ ರೀತಿ ಆಗುವುದನ್ನು ನಿಲ್ಲಿಸಿ, ಒಂದು ಕೋಟಿ ಕೊಟ್ಟು ಬರುವ ಅಧಿಕಾರಿ ಜನರ ಕೆಲಸ ಮಾಡುತ್ತಾರಾ? ಸಂಭ್ರಮಾಚರಣೆ ಜನರ ರಕ್ಷಣೆಯಲ್ಲಿರಬೇಕು. ಪ್ರಚಾರ ಕೊಟ್ಟು ಸಂಭ್ರಮಿಸುವುದಲ್ಲ ಎಂದು ಅವರು ಕಟುವಾಗಿ ಟೀಕಿಸಿದರು.

ಸತ್ತ ಮೇಲೆ ಕೃತಕ ಸಂತಾಪ ಏಕೆ?: ರಾಜ್ಯದ ಪುತ್ತೂರು ತಾಲೂಕಿನಲ್ಲಿ ಯುವಕನ ಹತ್ಯೆಯಾಗಿದೆ, ಇದು ಅತ್ಯಂತ ಖಂಡನೀಯ. ಯಾಕೆ ಇಂಥ ಘಟನೆಗಳು ಆಗುತ್ತಿವೆ ಎಂಬ ಬಗ್ಗೆ ಎಲ್ಲ ಪಕ್ಷಗಳೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಮಗನನ್ನು ಕಳೆದುಕೊಂಡ ಆ ತಾಯಿಯ ದುಃಖವನ್ನು ಒಮ್ಮೆ ಗಮನಿಸಿ. ನಾವು ಆ ಕುಟುಂಬದ ಭಾವನೆ ಅರ್ಥ ಮಾಡಿಕೊಳ್ಳಬೇಕು. ಜೀವ ಹೋದ ಮೇಲೆ ಕೇವಲ ‘ಕೃತಕ' ಸಂತಾಪ ಅಥವಾ ‘ಕೃತಕ' ಸಾಂತ್ವನ ಹೇಳುವುದರಿಂದ ಉಪಯೋಗವಿಲ್ಲ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ರಾಜಕಾರಣಿಗಳು ಸಾವಿನ ನಂತರ ಸಾಂತ್ವಾನ, ಪರಿಹಾರ ಕೊಡುವುದರಿಂದ ಹೋದ ಜೀವ ಮತ್ತೆ ವಾಪಸ್ ತರಲು ಆಗಲ್ಲ. ಬಿಜೆಪಿ ಸರಕಾರ ಇದ್ದಾಗ ಈ ಘಟನೆ ಕಾಣುತ್ತಿದ್ದೇವೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗಲೂ ಹೀಗೆ ಆಗಿತ್ತು. ಎಲ್ಲಿಯೂ ರಾಜಕಾರಣಿಗಳು, ಶ್ರೀಮಂತರ ಸಾವು ಆಗಲ್ಲ. ಆದರೆ, ಅಮಾಯಕರು ಬಲಿ ಆಗುತ್ತಿದ್ದಾರೆ ಎಂದು ಅವರು ಹೇಳಿದರು. 

ಶಿವಮೊಗ್ಗದಲ್ಲಿ ಹರ್ಷ ಎಂಬ ಯುವಕನ ಹತ್ಯೆ ಆದಾಗ ಸರಕಾರವೇ ಹೋಗಿತ್ತು. ಆಗ ಮಂತ್ರಿಗಳೂ, ನಾಯಕರು ಎಲ್ಲರೂ ಆ ಕೊಲೆಯ ವಿರುದ್ಧ ಅಬ್ಬರಿಸಿದ್ದರು. ಅದಾದ ನಂತರ ಸರಣಿ ಸಾವುಗಳು ಆಗುತ್ತಿವೆ. ಹತ್ಯೆಗಳನ್ನು ನಿಲ್ಲಿಸಲು ಎಲ್ಲ ಪಕ್ಷಗಳು ರಾಜ್ಯದ ಎಲ್ಲ ಮಠಾಧಿಪತಿಗಳ ಮಾರ್ಗದರ್ಶನದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಅವರು ಹೇಳಿದರು.

ಹತ್ಯೆಯಾದ ಯುವಕನ ಊರಿನಲ್ಲಿ ಲಾಠಿ ಚಾರ್ಜ್ ಆಗುತ್ತಿದೆ. ಆ ಯುವಕ ಸಣ್ಣ ಅಂಗಡಿ ಇಟ್ಟುಕೊಂಡು ಜೀವನ ಮಾಡಿಕೊಂಡಿದ್ದ. ಈ ನಾಡಿನ ಒಬ್ಬ ಯುವಕ, ತಂದೆ ತಾಯಿ ಸಾಕುವ ಒಬ್ಬ ಜವಾಬ್ದಾರಿ ಇದ್ದ ಯುವಕ. ಇದನ್ನೆಲ್ಲಾ ಸರಕಾರ, ರಾಜಕೀಯ ಪಕ್ಷಗಳು ಗಮನಿಸಬೇಕು. ಕೃತಕ ಸಂತಾಪ ಸೂಚಿಸುವ ಅವಶ್ಯಕತೆ ಇಲ್ಲ. ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕವನ್ನು ರಕ್ಷಣೆ ಮಾಡಬೇಕು ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದರು.

ಭಾವನಾತ್ಮಕ ವಿಚಾರಗಳನ್ನು ಹಾಗೂ ಇಂಥ ಸಾವುಗಳನ್ನು ರಾಜಕೀಯ ಪಕ್ಷಗಳು ಸ್ವಾರ್ಥಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿವೆ. ರಾಜಕೀಯಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿವೆ. ಸಾವಿನ ಮೇಲೆ ರಾಜಕೀಯ ಸಿಂಹಾಸನ ಮಾಡಿಕೊಳ್ಳುವುದು ಸರಿಯಲ್ಲ. ಈ ರೀತಿ ಸಾವು ನೋವು ನೋಡಲು ಅಧಿಕಾರ ಬೇಕಾ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಮೊನ್ನೆ ಇನ್ನೊಂದು ಧರ್ಮದ ಹತ್ಯೆಯಾಗಿದೆ. ಈ ಘಟನೆಗಳಾದಾಗ ಮುಂಜಾಗ್ರತಾ ಕ್ರಮ ವಹಿಸಬೇಕು. ಹತ್ಯೆಯಾದಾಗ ಸಂತಾಪ ಸೂಚಿಸುವುದಕ್ಕಿಂತ ಹತ್ಯೆ ಆಗುವುದಕ್ಕೂ ಮುನ್ನ ಎಚ್ಚೆತ್ತುಕೊಳ್ಳಬೇಕು. ಇಲ್ಲಿ ಎಲ್ಲರ ಜವಾಬ್ದಾರಿ ಮುಖ್ಯ ಆಗುತ್ತದೆ. ಎಲ್ಲ ಧರ್ಮದ ಸಂಘಟನೆ, ಧಾರ್ಮಿಕ ಗುರುಗಳ ಸಭೆ ಮಾಡಿ, ಶಾಂತಿಯ ತೋಟ ಕಾಪಾಡಬೇಕಾಗಿದೆ ಎಂದು ಅವರು ಸಲಹೆ ನೀಡಿದರು. 

ಈ ಸಂದರ್ಭದಲ್ಲಿ ಶಾಸಕರಾದ ವೆಂಕಟರಾವ್ ನಾಡಗೌಡ, ರಾಜಾ ವೆಂಕಟಪ್ಪ ನಾಯಕ ಹಾಗೂ ಮಾಜಿ ಶಾಸಕ ಚೌಡರೆಡ್ಡಿ ತೂಪಲ್ಲಿ ಹಾಜರಿದ್ದರು.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸಂಭ್ರಮ, ಉತ್ಸವ ಮಾಡಲು ಹೊರಟಿವೆ. ಇದರಿಂದ ಹತ್ಯೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಇವುಗಳನ್ನು ನಿಲ್ಲಿಸಿದರೆ ಅದಕ್ಕಿಂತ ಮತ್ತೊಂದು ಉತ್ಸವ ಬೇರೆ ಇಲ್ಲ. ಈಗ ಕಾಂಗ್ರೆಸ್ ಭ್ರಷ್ಟೋತ್ಸವ ಎನ್ನುತ್ತಿದೆ. ಹಾಗೆಯೇ, ಕಾಂಗ್ರೆಸ್ ಬಗ್ಗೆ ಬಿಜೆಪಿ ಕೂಡ ಇದೇ ಮಾತು ಹೇಳುತ್ತಿದೆ. ಈ ರಾಷ್ಟ್ರೀಯ ಪಕ್ಷಗಳ ಹಣೆಬರಹ ಏನೆಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ.

ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X