Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ತವರು...

ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ತವರು ಜಿಲ್ಲೆಯ 60 ಜನರಿಗೆ ರಾಷ್ಟ್ರಪತಿ ಭವನದಲ್ಲಿ ಭರ್ಜರಿ ಔತಣಕೂಟ

ವಾರ್ತಾಭಾರತಿವಾರ್ತಾಭಾರತಿ27 July 2022 10:14 PM IST
share
ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ತವರು ಜಿಲ್ಲೆಯ 60 ಜನರಿಗೆ ರಾಷ್ಟ್ರಪತಿ ಭವನದಲ್ಲಿ ಭರ್ಜರಿ ಔತಣಕೂಟ

ಭುವನೇಶ್ವರ,ಜು.27: ಒಡಿಶಾದ ಬುಡಕಟ್ಟು ಪ್ರಾಬಲ್ಯದ ಮಯೂರಭಂಜ್ ಜಿಲ್ಲೆಯ 60 ಜನರಿಗೆ ಅದು ಕನಸು ನನಸಾದ ಘಳಿಗೆಯಾಗಿತ್ತು. ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ರಾಷ್ಟ್ರಪತಿ ಭವನದಲ್ಲಿ ಔತಣವನ್ನು ಸವಿಯುವ ಅದೃಷ್ಟ ಅವರದಾಗಿತ್ತು.

ದೇಶದ ಮೊದಲ ಆದಿವಾಸಿ ರಾಷ್ಟ್ರಪತಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ದಿಲ್ಲಿಗೆ ಆಹ್ವಾನಿಸಲ್ಪಟ್ಟಿದ್ದ ಈ 60 ಜನರಿಗೆ ತಮ್ಮ ‘ನೆಲದ ಪುತ್ರಿ’ ಆಯೋಜಿಸಿರುವ ಔತಣ ಕೂಟದಲ್ಲಿ ಭಾಗಿಯಾಗುವಂತೆ ಅಧಿಕಾರಿಗಳು ಆಗ್ರಹಿಸಿದಾಗ ಸಂಭ್ರಮದ ಅಚ್ಚರಿಯುಂಟಾಗಿತ್ತು.

‘ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ರಾಷ್ಟ್ರಪತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದು ನಮಗೆ ತುಂಬ ಹರ್ಷವನ್ನುಂಟು ಮಾಡಿತ್ತು,ಆದರೆ ರಾಷ್ಟ್ರಪತಿ ಭವನದಲ್ಲಿ ಔತಣಕೂಟಕ್ಕಾಗಿ ನಮ್ಮನ್ನು ಆಹ್ವಾನಿಸಲಾಗುತ್ತದೆ ಎಂಬ ಕಲ್ಪನೆಯನ್ನೂ ನಾವು ಮಾಡಿರಲಿಲ್ಲ ’ ಮಯೂರಭಂಜ್ ಜಿಲ್ಲಾ ಪರಿಷದ್‌ನ ಮಾಜಿ ಅಧ್ಯಕ್ಷೆ ಸುಜಾತಾ ಮುರ್ಮು ಹೇಳಿದರು.

ಸುಜಾತಾ ಮತ್ತು ಇತರ ಕೆಲವು ಮಹಿಳಾ ಅತಿಥಿಗಳು ಸಂತಾಲ್ ಸಾಂಪ್ರದಾಯಿಕ ಸೀರೆಯನ್ನು ಧರಿಸಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.ಗಯಾಮಣಿ ಬೆಶ್ರಾ ಮತ್ತು ಡಾಂಗಿ ಮುರ್ಮು ಅವರೂ ಇಂತಹುದೇ ಅನುಭವವನ್ನು ಹಂಚಿಕೊಂಡರು. ಅವರಿಬ್ಬರೂ ಸುದೀರ್ಘ ಸಮಯದಿಂದ ರಾಷ್ಟ್ರಪತಿಗಳ ಆಪ್ತರಾಗಿದ್ದು,ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿತರಾಗಿದ್ದರು. ರಾಷ್ಟ್ರಪತಿಗಳು ತಮ್ಮನ್ನು ಔತಣ ಕೂಟಕ್ಕೆ ಆಹ್ವಾನಿಸುತ್ತಾರೆ ಎಂದು ಅವರೂ ನಿರೀಕ್ಷಿಸಿರಲಿಲ್ಲ.

ಮುರ್ಮು ಅವರ ತವರು ಜಿಲ್ಲೆಯ ಅತಿಥಿಗಳಿಗೆ ರಾಷ್ಟ್ರಪತಿ ಭವನದ ಸಂಪೂರ್ಣ ದರ್ಶನವನ್ನು ಮಾಡಿಸುವುದರ ಜೊತೆಗೆ ರಾಷ್ಟ್ರಪತಿಗಳ ಕಚೇರಿಯನ್ನೂ ತೋರಿಸಲಾಗಿತ್ತು.ರಾಷ್ಟ್ರಪತಿ ಭವನದಿಂದ ನಿರ್ಗಮಿಸುವಾಗ ಎಲ್ಲ ಅತಿಥಿಗಳಿಗೆ ಸಿಹಿ ಪೊಟ್ಟಣಗಳನ್ನು ನೀಡಲಾಗಿತ್ತು ಎಂದು ಹೇಳಿದ ಸುಜಾತಾ ಮುರ್ಮು, ಅದೊಂದು ಸ್ಮರಣೀಯ ಅನುಭವವಾಗಿತ್ತು ಎಂದು ತಿಳಿಸಿದರು.
 
ಊಟದ ಮೆನು ಕುರಿತಂತೆ ಈ ಅತಿಥಿಗಳು,ರಾಷ್ಟ್ರಪತಿಗಳು ಮಾಂಸಾಹಾರವನ್ನು,ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಸಹ ತಿನ್ನುವುದಿಲ್ಲ, ಹೀಗಾಗಿ ಅದು ಶುದ್ಧ ಸಸ್ಯಾಹಾರಿ ಔತಣಕೂಟವಾಗಿತ್ತು ಎಂದು ತಿಳಿಸಿದರು.

ರಾಷ್ಟ್ರಪತಿ ಭವನದಲ್ಲಿ ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳನ್ನು ಒಯ್ಯಲು ಅವಕಾಶವಿಲ್ಲದ್ದರಿಂದ ತಮಗೆ ರಾಷ್ಟ್ರಪತಿಗಳೊಂದಿಗೆ ಸೆಲ್ಫಿಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಕೆಲವರು ಬೇಸರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X