ದ.ಕ. ಜಿಲ್ಲೆ: ಕೊರೋನಾ ಸೋಂಕಿಗೆ ಓರ್ವ ಬಲಿ

ಮಂಗಳೂರು, ಜು.27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 20 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇದೇ ವೇಳೆ ಓರ್ವ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
29 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇ. 2.78 ದಾಖಲಾಗಿದೆ. ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 136177ಕ್ಕೆ ಏರಿಕೆಯಾಗಿದೆ. ಈ ಪೈಕಿ 77 ಸಕ್ರಿಯ ಪ್ರಕರಣಗಳು. 134247 ಮಂದಿ ಗುಣಮುಖರಾಗಿದ್ದಾರೆ. 1853 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story