Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡ ಮರೆತ ಐಸಿಸಿಆರ್ ಕ್ರಮಕ್ಕೆ ಕಸಾಪ...

ಕನ್ನಡ ಮರೆತ ಐಸಿಸಿಆರ್ ಕ್ರಮಕ್ಕೆ ಕಸಾಪ ಖಂಡನೆ

ವಾರ್ತಾಭಾರತಿವಾರ್ತಾಭಾರತಿ27 July 2022 10:58 PM IST
share
ಕನ್ನಡ ಮರೆತ ಐಸಿಸಿಆರ್ ಕ್ರಮಕ್ಕೆ ಕಸಾಪ ಖಂಡನೆ

ಬೆಂಗಳೂರು, ಜು.27: ಕನ್ನಡ ಭಾಷೆಯನ್ನು ಕಡೆಗಣಿಸಿದ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್(ಐಸಿಸಿಆರ್) ಸಂಸ್ಥೆಯ ನಡೆ ಖಂಡನಿಯ. 

ಸಂಸ್ಥೆಯು ಇತ್ತೀಚೆಗೆ ನೀಡಿರುವ ಪತ್ರಿಕಾ ಜಾಹೀರಾತಿನಲ್ಲಿ ಹಿಂದಿ, ಉರ್ದು, ಸಂಸ್ಕøತ ಮತ್ತು ತಮಿಳು ಮತ್ತು ಇತರ ವಿಷಯಗಳ ಪ್ರಾಧ್ಯಾಪಕರ ಹುದ್ದೆಗಳ ನೇಮಕ ಕುರಿತು ಪ್ರಕಟನೆ ನೀಡಿದ್ದು ಕನ್ನಡ ವಿಷಯದ ಪ್ರಾಧ್ಯಾಪಕರ ಹುದ್ದೆ ಕುರಿತು ಪ್ರಸ್ತಾವನೆ ನೀಡಿಲ್ಲ. 

ದೇಶದ ಎಲ್ಲಾ ಭಾಷೆ ಸಂಸ್ಕೃತಿಗಳನ್ನು ಗೌರವಿಸಬೇಕಿದ್ದ ಕೇಂದ್ರ ಸರಕಾರದ ಅಧೀನದಲ್ಲಿ ಇರುವ ಸಂಸ್ಥೆಯು ತಮಗೆ ಬೇಕಾದ ಕೆಲವೇ ಭಾಷೆಗಳಿಗೆ ಮಣೆ ಹಾಕುತ್ತಿರುವ ಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ತೀವ್ರವಾಗಿ ಖಂಡಿಸುವುದರ ಜೊತೆ ತಕ್ಷಣದಲ್ಲಿ ಕನ್ನಡ ಭಾಷೆಗೆ ಸೂಕ್ತ ಗೌರವ ನೀಡಬೇಕು ಎಂದು ಎಚ್ಚರಿಸುತ್ತಿದ್ದೇವೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಭಾರತದ ಎಲ್ಲಾ ರಾಜ್ಯಗಳ ಸಂಸ್ಕೃತಿ, ಎಲ್ಲಾ ಭಾಷೆಗಳನ್ನು ಸಮಾನವಾಗಿ ಗೌರವಿಸಬೇಕಿದ್ದ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ ಸಂಸ್ಥೆಯು ಕನ್ನಡ ಭಾಷೆಯನ್ನು ಕಡೆಗಣಿಸಿದೆ. ಕನ್ನಡ ಭಾಷೆಯು ಶಾಸ್ತ್ರೀಯ ಸ್ಥಾನಮಾನ ಹೊಂದಿದ್ದು, ಕನ್ನಡ ಭಾಷೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೂಕ್ತ ಪೀಠವನ್ನು ಸ್ಥಾಪಿಸುವ ಹೊಣೆಯನ್ನೂ ಸಂಸ್ಥೆಯು ನಿರ್ವಹಿಸಬೇಕಿದೆ. ಐಸಿಸಿಆರ್ ಸಂಸ್ಥೆ ಈ ರೀತಿಯ ಮಹತ್ವಪೂರ್ಣ ಮತ್ತು ಘನತೆಯ ಜವಾಬ್ದಾರಿಯನ್ನು ಮರೆತಿದೆ. 

ವಿಶ್ವದಾದ್ಯಂತ 40ಕ್ಕೂ ಹೆಚ್ಚು ದೇಶಗಳಲ್ಲಿ ಸಂಸ್ಥೆಯು ತನ್ನ ಶಾಖೆಗಳನ್ನು ಹೊಂದಿದೆ. ಬಹುತೇಕ ಎಲ್ಲಾ ಶಾಖೆಗಳಲ್ಲಿ ಭಾರತೀಯ ಭಾಷೆ ಮತ್ತು ಸಂಸ್ಕೃತಿಯ ಪಂಡಿತರನ್ನೊಳಗೊಂಡ ತಂಡದಿಂದ ಭಾರತಿಯ ಪರಂಪರೆಯನ್ನು ಪರಿಚಯಿಸುವ ಕೆಲಸ ಮಾಡುತ್ತದೆ. ಅದಕ್ಕೆ  ತಜ್ಞ ಪ್ರಾಧ್ಯಾಪಕರ ಆಯ್ಕೆಗಾಗಿ ಮಾಧ್ಯಮಗಳಲ್ಲಿ ಪ್ರಕಟಣೆ ನೀಡಿದ್ದಾರೆ. ಅದರಲ್ಲಿ ಕನ್ನಡ ಪ್ರಾಧ್ಯಾಪಕರ ಆಯ್ಕೆಯ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ. ಜೊತೆಗೆ ಅವರ ಸಂಸ್ಥೆಯಲ್ಲಿ ಕನ್ನಡ ಭಾಷೆ ಸಂಸ್ಕೃತಿಯ ಅಧ್ಯಯನ ಕುರಿತು ಯಾವುದೇ ಮಾಹಿತಿಯನ್ನೂ ನೀಡಿರುವುದಿಲ್ಲ. ಇವರ ಧೋರಣೆ ಗಮನಿಸಿದಾಗ ಕನ್ನಡವನ್ನು ಕಡೆಗಣಿಸಿರುವುದು ಸ್ಪಷ್ಟವಾಗಿ ತೋರುತ್ತದೆ.

2000 ಸಾವಿರ ವರ್ಷಗಳ ಘನ ವೈಭವ ಹೊಂದಿರುವ ಕನ್ನಡ ಭಾಷೆ ಹಾಗೂ ಪರಂಪರೆಯನ್ನು ಕಡೆಗಣಿಸಿದ ಐಸಿಸಿಆರ್ ಕ್ರಮ ಖಂಡನಿಯ. ಕನ್ನಡ ಸಾಹಿತ್ಯ ಪರಿಷತ್ತು ಏಳು ಕೋಟಿ ಕನ್ನಡಿಗರ ಅಸ್ಮಿತೆಯ ಈ ಸಂಸ್ಥೆ ಕನ್ನಡ-ಕನ್ನಡಿಗ-ಕರ್ನಾಟಕದ ಆಶಯವನ್ನು ಪ್ರತಿಬಿಂಬಿಸುತ್ತಿದೆ. ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ ಸಂಸ್ಥೆಯು ಕನ್ನಡ ಭಾಷೆಯ ಗಟ್ಟಿತನ, ಪರಂಪರೆ, ವೈಭವವನ್ನು ಮರೆಯಬಾರದು. ಕನ್ನಡದ ಘನತೆಯನ್ನು ಕಾಪಾಡುವುದರೊಂದಿಗೆ, ಇತಿಹಾಸವನ್ನು ತಿಳಿಸುವುದರೊಂದಿಗೆ ಸಮೃದ್ಧತೆಯನ್ನು ಪ್ರಕಟಪಡಿಸಬೇಕು ಎಂದು ಪತ್ರ ಬರೆಯಲಾಗಿದೆ. 

ಜತೆಗೆ, ಕೇಂದ್ರ ಸಚಿವರಿಗೆ ಹಾಗೂ ಮುಖ್ಯಮಂತ್ರಿಯವರಿಗೆ ಹಾಗೂ ಕನ್ನಡ ಮತ್ತು ಸಂಸ್ಖೃತಿ ಇಲಾಖೆ ಸಚಿವರಿಗೆ ಪತ್ರ ಬರೆದು ಐಸಿಸಿಆರ್ ಸಂಸ್ಥೆಗೆ ಕನ್ನಡ ಭಾಷೆಗೆ ಸೂಕ್ತ ಗೌರವಯುತ ಸ್ಥಾನಮಾನ ನೀಡಲು ಸೂಚಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ ಕೋರುತ್ತದೆ. 

ದೇಶದ ಕೆಲವೇ ಕೆಲವು ಆಯ್ದ ಭಾಷೆಗಳ ಪರಿಣತರನ್ನು ಆಯ್ಕೆ ಮಾಡುವ ಮೂಲಕ ಕನ್ನಡವನ್ನು ಕಡೆಗಣಿಸಿದ ಮಾಡಿದ ತಪ್ಪನ್ನು ತಕ್ಷಣದಲ್ಲಿ ಸರಿಪಡಿಸಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X