Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಇ-ಟೆಂಡರ್ ಕರೆಯದೇ 4(ಜಿ) ವಿನಾಯಿತಿ ಆದೇಶ

ಇ-ಟೆಂಡರ್ ಕರೆಯದೇ 4(ಜಿ) ವಿನಾಯಿತಿ ಆದೇಶ

ಸಚಿವ ಬಿ.ಸಿ.ನಾಗೇಶ್ ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ಸೇವೆ

ಜಿ.ಮಹಾಂತೇಶ್ಜಿ.ಮಹಾಂತೇಶ್28 July 2022 8:43 AM IST
share
ಇ-ಟೆಂಡರ್ ಕರೆಯದೇ 4(ಜಿ) ವಿನಾಯಿತಿ ಆದೇಶ

ಬೆಂಗಳೂರು, ಜು.27: ಸಚಿವ ಬಿ.ಸಿ.ನಾಗೇಶ್ ಅವರ ಸಾಮಾಜಿಕ ಜಾಲತಾಣವನ್ನು ನಿರ್ವಹಿಸಲು   ಪಿ-ಪೋಲ್ ಅನಾಲಿಟಿಕ್ಸ್ ಕಂಪೆನಿಗೆ 3 ತಿಂಗಳು ಅವಧಿಗೆ ಮುಂದುವರಿಸಬೇಕಾದಲ್ಲಿ 5 ಲಕ್ಷ ರೂ. ಮಿತಿ ದಾಟುವ ಕಾರಣ ಇ-ಟೆಂಡರ್ ಕರೆಯಬೇಕು ಎಂದು ಅಧಿಕಾರಿಗಳು ಹೇಳಿದ್ದನ್ನು ಬದಿಗಿರಿಸಿ ಸಚಿವರ ಅಧಿಕಾರ ಅವಧಿವರೆಗೆ (2023ರ ಮಾರ್ಚ್‌ವರೆಗೂ) ಯಾವುದೇ ಇ-ಟೆಂಡರ್ ಕರೆಯದೇ 4(ಜಿ) ವಿನಾಯಿತಿ ಆದೇಶ ಪಡೆದಿರುವುದು ಆರ್‌ಟಿಐ ದಾಖಲೆಗಳಿಂದ ಬಹಿರಂಗವಾಗಿದೆ.

ದರಪಟ್ಟಿ ಕರೆಯದೇ ಈಗಾಗಲೇ ಪಿ-ಪೋಲ್ ಅನಾಲಿಟಿಕ್ಸ್ ಕಂಪೆನಿಗೆ ಸಚಿವ ಬಿ.ಸಿ.ನಾಗೇಶ್ ಅವರ ಸಾಮಾಜಿಕ ಜಾಲತಾಣ ನಿರ್ವಹಿಸಲು ಆದೇಶ ಹೊರಡಿಸಿದ್ದರ ಬೆನ್ನಲ್ಲೇ ಇ-ಟೆಂಡರ್ ಆಹ್ವಾನಿಸದೆಯೇ 4(ಜಿ) ವಿನಾಯಿತಿ ನೀಡಿರುವುದು ಮುನ್ನೆಲೆಗೆ ಬಂದಿದೆ. ಈ ಸಂಬಂಧ 'the-file.in' ಆರ್‌ಟಿಐ ಅಡಿಯಲ್ಲಿ ಕಡತವನ್ನು ಪಡೆದುಕೊಂಡಿದೆ.

‘ಸಚಿವರ ಟ್ವಿಟರ್, ಫೇಸ್‌ಬುಕ್, ಯೂಟ್ಯೂಬ್ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ಸೇವೆಯನ್ನು ಕೆಟಿಪಿಪಿ ಕಾಯ್ದೆಯಡಿ 3 ತಿಂಗಳು ಮುಂದುವರಿಸಿದ್ದಲ್ಲಿ 5 ಲಕ್ಷ ರೂ. ಮಿತಿ ದಾಟಲಿದ್ದು, ನಿಯಮಾನುಸಾರ ಇ-ಟೆಂಡರ್ ಕರೆಯಬೇಕಾಗಿದೆ,’ ಎಂದು ಅಧಿಕಾರಿಗಳು ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಿದ್ದಾರೆ.

ಆದರೆ, ಇದನ್ನು ಬದಿಗಿರಿಸಿರುವ ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆಯು ಪಿ-ಪೋಲ್ ಅನಾಲಿಟಿಕ್ಸ್ ಕಂಪೆನಿಯ ಸೇವೆಯನ್ನು ಪಡೆಯಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ (ಜೆ) ವಿನಾಯಿತಿಯನ್ನು 2022ರ ಜೂನ್ 20ರಂದು  ಆರ್ಥಿಕ ಇಲಾಖೆಯಿಂದ ಪಡೆದಿದೆ. ಈ ಸಂಬಂಧ 2022ರ ಜೂನ್ 21ರಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರಿಗೆ 2022ರ ಜೂನ್ 21ರಂದು ಪತ್ರ ಬರೆದಿರುವುದು ಆರ್‌ಟಿಐ ದಾಖಲೆಗಳಿಂದ ಗೊತ್ತಾಗಿದೆ.

‘ಸಚಿವರ ಸಾಮಾಜಿಕ ಜಾಲತಾಣಗಳ ನಿರ್ವಹಣೆ ಕಾರ್ಯಕ್ಕೆ ಪ್ರತಿ ತಿಂಗಳು 94,400 ರೂ.ನಂತೆ 2022ರ ಏಪ್ರಿಲ್ನಿಂದ 2023ರ ಮಾರ್ಚ್‌ವರೆಗೆ ಒಂದು ವರ್ಷದ ಅವಧಿಗೆ ಒಟ್ಟು 11,32,800 ರೂ.ಗಳ ವೆಚ್ಚದಲ್ಲಿ ಪಿ-ಪೋಲ್ ಅನಾಲಿಟಿಕ್ಸ್ ಕಂಪೆನಿಯ ಸೇವೆ ಪಡೆಯಲು 4(ಜಿ) ವಿನಾಯಿತಿ ನೀಡಲಾಗಿದೆ. ಆದ್ದರಿಂದ ಸಚಿವರ ಸಾಮಾಜಿಕ ಜಾಲತಾಣಗಳ ನಿರ್ವಹಣೆ ಕಾರ್ಯಕ್ಕೆ ಈ ಸಂಸ್ಥೆಯಿಂದ ಪಡೆಯಬೇಕು,’ ಎಂದು ಶಿಕ್ಷಣ ಇಲಾಖೆಯು 2022ರ ಜೂನ್ 21ರಂದು ಬರೆದಿರುವ ಪತ್ರದಲ್ಲಿ ನಿರ್ದೇಶಿಸಿದ್ದಾರೆ.

ಅಲ್ಲದೆ ಪಿ-ಪೋಲ್ ಅನಾಲಿಟಿಕ್ಸ್ ಕಂಪೆನಿಗೆ 2022 ಫೆಬ್ರವರಿಯಿಂದ ಎಪ್ರಿಲ್ 2022ರವರೆಗೆ 3 ತಿಂಗಳ ಅವಧಿಗೆ ವಿಸ್ತರಿಸಬೇಕು ಎಂದು ಸಚಿವರ ಆಪ್ತ ಕಾರ್ಯದರ್ಶಿ 2022ರ ಮಾರ್ಚ್ 15ರಂದು ಪತ್ರ ಬರೆದಿದ್ದರು.

ಪಿ-ಪೋಲ್ ಅನಾಲಿಟಿಕ್ಸ್‌ಗೆ ಪ್ರಾಥಮಿಕ, ಪ್ರೌಢಶಿಕ್ಷಣ, ಸಕಾಲ ಸಚಿವರ ಸಾಮಾಜಿಕ ಜಾಲತಾಣವಾದ ಟ್ವಿಟರ್, ಯೂಟ್ಯೂಬ್, ಫೇಸ್‌ಬುಕ್ ಹಾಗೂ ಇನ್ನಿತರ ಖಾತೆಗಳನ್ನು 3 ತಿಂಗಳ ಅವಧಿಗೆ 2021ರ ಅಕ್ಟೊಬರ್ 26ರಂದು ಕಾರ್ಯಾದೇಶ ನೀಡಿದ್ದು ಈ ಆದೇಶವು 2022ರ ಜನವರಿಗೆ ಮುಕ್ತಾಯಗೊಂಡಿದೆ. ಆದ್ದರಿಂದ ಸದರಿ ಆದೇಶವನ್ನು 2022ರ ಫೆಬ್ರುವರಿಯಿಂದ ಏಪ್ರಿಲ್ 2022ರವರೆಗೆ 3 ತಿಂಗಳ ಅವಧಿಗೆ ವಿಸ್ತರಿಸಬೇಕು,’ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ಪತ್ರದಲ್ಲಿ ನಿರ್ದೇಶಿಸಿದ್ದರು. ಆದರೆ ಮಂಡಳಿ ಮತ್ತು ಶಿಕ್ಷಣ ಇಲಾಖೆಯು ಸಚಿವ ಬಿ.ಸಿ.ನಾಗೇಶ್ ಅವರ ಅಧಿಕಾರಾವಧಿವರೆಗೆ 4(ಜಿ) ವಿನಾಯಿತಿ ಪಡೆದು ಆದೇಶ ಹೊರಡಿಸಿದೆ.

ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯಲ್ಲಿ ಯಾವುದೇ ಅನುದಾನ ನಿಗದಿಪಡಿಸದಿದ್ದರೂ ಇದೇ ಮೊದಲ ಬಾರಿಗೆ ಲಕ್ಷಾಂತರ ರೂ.ವೆಚ್ಚ ಮಾಡಿದೆ. ಸಾಮಾಜಿಕ ಜಾಲತಾಣ ನಿರ್ವಹಣೆ ಸಂಬಂಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಯಾವುದೇ  ದರ ಪಟ್ಟಿಯನ್ನು ಆಹ್ವಾನಿಸಿರಲಿಲ್ಲ ಎಂಬುದನ್ನು ಸ್ಮರಿಸಬಹುದು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X