ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಇಂದು (ಗುರುವಾರ) ಕೊಪ್ಪ ಪಟ್ಟಣ ಬಂದ್ ಗೆ ಕರೆ

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಕೊಪ್ಪ ಪಟ್ಟಣ ಬಂದ್ ಕರೆ ನೀಡಲಾಗಿದ್ದು, ಪಟ್ಟಣದಲ್ಲಿ ಅಂಗಡಿ, ಹೋಟೆಲ್, ಮಳಿಗೆಗಳು ಮುಚ್ಚಿವೆ.
ಪ್ರವೀಣ್ ಹತ್ಯೆ ಖಂಡಿಸಿ, ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿ ಕೊಪ್ಪ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಹಿಂದುತ್ವ ಸಂಘಟನೆಗಳು ನಿರ್ಧರಿಸಿದ್ದು, ತಾಲೂಕಿನ ಜಯಪುರ, ಹರಿಹರಪುರ ಸೇರಿದಂತೆ ಹಲವು ಹೋಬಳಿ ಕೇಂದ್ರಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
ಬುಧವಾರ ಮೂಡಿಗೆರೆ, ಕೊಪ್ಪ, ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಯುವ ಮೋರ್ಚಾದ ಅಧ್ಯಕ್ಷ, ಕಾರ್ಯದರ್ಶಿ ಸ್ಥಾನಕ್ಕೆ ಯುವ ಮುಖಂಡರು ರಾಜೀನಾಮೆ ಸಲ್ಲಿಸಿ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.
Next Story





