Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರಾಜ್ಯದ ಶಿಕ್ಷಣ ಕ್ಷೇತ್ರದ ಗೊಂದಲಕ್ಕೆ...

ರಾಜ್ಯದ ಶಿಕ್ಷಣ ಕ್ಷೇತ್ರದ ಗೊಂದಲಕ್ಕೆ ಯಾರು ಕಾರಣ?

ದಿವಾಕರ್ ಡಿ.ದಿವಾಕರ್ ಡಿ.28 July 2022 11:36 AM IST
share
ರಾಜ್ಯದ ಶಿಕ್ಷಣ ಕ್ಷೇತ್ರದ ಗೊಂದಲಕ್ಕೆ ಯಾರು ಕಾರಣ?

ಕರ್ನಾಟಕದಲ್ಲೀಗ ಅಧಿಕಾರ ನಡೆಸುತ್ತಿರುವ ಬಿಜೆಪಿಯ ಇಬ್ಬರು ಶಿಕ್ಷಣ ಸಚಿವರು ಶೈಕ್ಷಣಿಕ ರಂಗದಲ್ಲಿ ಕೈಗೊಂಡಂತಹ ನಿರ್ಧಾರಗಳಿಂದಾಗಿ ಇಂದು ಕರ್ನಾಟಕದಲ್ಲ್ಲಿ ಒಂದು ರೀತಿಯ ಶೈಕ್ಷಣಿಕ ಅಶಾಂತಿಯ ವಾತಾವರಣವನ್ನು ಕಾಣಬಹುದಾಗಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್‌ರವರು ಒಂದು ಮತ್ತು ಎರಡನೇ ತರಗತಿಗಳನ್ನು ಸಂಯೋಜಿಸಿ ಶಾಲಾ ಸಾಂಸ್ಥಿಕ ರೂಪ ನೀಡಲು ನಿರ್ಧರಿಸಿ ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಿ ಅವರನ್ನು ಶಾಲಾ ಹಂತಕ್ಕೆ ತರುವುದೆನ್ನುತ್ತಿದ್ದಾರೆ. ಇವರ ಪ್ರಕಾರ ಇದರಿಂದಾಗಿ ಅಂಗನವಾಡಿ ಕಾರ್ಯಕರ್ತೆಯರನ್ನು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಶಿಕ್ಷಕರೆಂದು ಪರಿಗಣಿಸಿ ಅವರು ಪಡೆಯುತ್ತಿರುವ ಹತ್ತು ಸಾವಿರ ಗೌರವ ಧನವು ವೇತನ ಎಂದು ಬದಲಾಗುತ್ತದೆ ಹಾಗೂ ಅವರಿಗೆ ಸೇವಾ ಭದ್ರತೆಯು ದೊರಕುತ್ತದೆೆ. ಇಂತಹ ನಿರ್ಧಾರ ಒಂದು ದೃಷ್ಟಿಯಲ್ಲಿ ನೋಡುವುದಾದರೆ ಒಳ್ಳೆಯದೇ ಆದರೂ ಇದರಿಂದ ಉದ್ಭವವಾಗುವ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕಾದ ಅನಿವಾರ್ಯತೆ ಇದೆ. ಪ್ರಸ್ತುತ ಕರ್ನಾಟಕದಲ್ಲಿರುವ ಅಂಗನವಾಡಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪ್ರಾಥಮಿಕ ಶಾಲೆಗಳ ಬಗ್ಗೆ ಗಮನಿಸುವುದಾದರೆ, ಕರ್ನಾಟಕ ಆರ್ಥಿಕ ಸಮೀಕ್ಷೆ 2020-21ರ ಪ್ರಕಾರ ಕರ್ನಾಟಕದಾದ್ಯಂತ ಸುಮಾರು 62,580 ಅಂಗನವಾಡಿ ಕೇಂದ್ರಗಳು, 3,331 ಮಿನಿ ಅಂಗನವಾಡಿ ಕೇಂದ್ರಗಳು ಕಾರ್ಯಾಚರಿಸುತ್ತಿದ್ದು ಸಹಸ್ರಾರು ಅಂಗನವಾಡಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಅದರಂತೆಯೇ ಕರ್ನಾಟಕದಲ್ಲಿ 24,391 ಕಿರಿಯ ಪ್ರಾಥಮಿಕ ಶಾಲೆಗಳು, 38,040 ಹಿರಿಯ ಪ್ರಾಥಮಿಕ ಶಾಲೆಗಳಿದ್ದು ಒಟ್ಟು 62,431 ಶಾಲೆಗಳ ಜೊತೆಗೆ 16,850 ಪ್ರೌಢಶಾಲೆಗಳಿವೆ.

ಪ್ರಸ್ತುತ ಕರ್ನಾಟಕ ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಮಂಜೂರಾಗಿರುವ 3,15,557 ಶಿಕ್ಷಕರಲ್ಲಿ 3,04,097 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು 11,460 ಶಿಕ್ಷಕರ ಹುದ್ದೆಗಳು ಮಾತ್ರ ಭರ್ತಿಯಾಗದೆ ಉಳಿದಿವೆ. ಈಗ 11,460 ಶಿಕ್ಷಕರ ಉಳಿದಿರುವ ಹುದ್ದೆಗಳಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಪದೋನ್ನತಿ ನೀಡಿದರೆ ಪ್ರಾಥಮಿಕ ಶಾಲಾ ಶಿಕ್ಷಕರಾಗಬೇಕೆಂಬ ಉದ್ದೇಶದಿಂದಲೇ ಡಿಎಡ್ ಅಥವಾ ಬಿಎಡ್ ಶಿಕ್ಷಕ ತರಬೇತಿಯನ್ನು ಪಡೆದ ಸಾವಿರಾರು ವಿದ್ಯಾರ್ಥಿಗಳು ಉದ್ಯೋಗಾವಕಾಶಗಳ ಕೊರತೆಯಿಂದಾಗಿ ಅತಂತ್ರರಾಗಿ ಅವರೆಲ್ಲರೂ ಮುಂದಿನ ದಿನಗಳಲ್ಲಿ ನಿರುದ್ಯೋಗದ ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ. ಅಲ್ಲದೆ ಶಾಲೆಗಳ ಮೂಲ ಸೌಲಭ್ಯಗಳನ್ನು ಹೊಂದಿಲ್ಲದ ಕಾರಣವನ್ನು ನೆಪವಾಗಿಟ್ಟುಕೊಂಡು ಈಗ ಶಾಲೆಗಳ ವಿಲೀನ ಪ್ರಕ್ರಿಯೆಯ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿರುವ ಸಣ್ಣ ಶಾಲೆಗಳನ್ನು ಸಂಪೂರ್ಣವಾಗಿ ಮುಚ್ಚುವುದರಿಂದ ಮುಂದಿನ ದಿನಗಳಲ್ಲಿ ಶಾಲೆಗಳ ಸಂಖ್ಯೆ ಕ್ರಮೇಣವಾಗಿ ಕಡಿಮೆಯಾಗುತ್ತಾ ಹೋದಂತೆ ಶಿಕ್ಷಕರ ಹುದ್ದೆಗಳು ಸಹ ಕಡಿಮೆಯಾಗುತ್ತಾ ಹೋಗುತ್ತದೆ. ಈ ಕಾರಣದಿಂದಾಗಿ ಸರಕಾರವು ಶಾಲೆಗಳ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಶಿಕ್ಷಕರ ಹುದ್ದೆಗಳಿಗಾಗಿಯೇ ಶಿಕ್ಷಣ ಪಡೆದ ಯುವಜನಾಂಗ ಉದ್ಯೋಗವಿಲ್ಲದೆ ನಿರುದ್ಯೋಗಕ್ಕೆ ಒಳಗಾಗುವ ಸನ್ನಿವೇಶ ಉಂಟಾಗುತ್ತದೆ.

ದೇಶದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಉದ್ದೇಶ, ಗುರಿ ಮತ್ತು ನೀತಿಗಳು ಸದಾ ಜನಪರವಾಗಿದ್ದು ಸಮಾಜ ಮತ್ತು ಆರ್ಥಿಕತೆಯಲ್ಲಿ ಉದ್ಯೋಗಾವಕಾಶಗಳನ್ನು ನಿರ್ಮಿಸುವಂತಹ ಮನೋಸ್ಥಿತಿಯನ್ನು ಹೊಂದಿರಬೇಕೇ ವಿನಃ ಇರುವಂತಹ ಉದ್ಯೋಗಾವಕಾಶಗಳನ್ನು ಕಿತ್ತುಕೊಳ್ಳುವ, ವಿಲೀನ ಮಾಡುವಂತಹ ಯೋಜನೆಗಳಿಗೆ ಮುಂದಾಗಬಾರದು. ಇದರಿಂದಾಗಿ ಯುವ ಜನತೆ ಶಿಕ್ಷಣದತ್ತ ನಕಾರಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳುವಂತಹ ಅನಿವಾರ್ಯ ಪರಿಸ್ಥಿತಿಯನ್ನು ಉಂಟು ಮಾಡುತ್ತದೆ. ಇದು ಒಂದು ರಾಜ್ಯಕ್ಕೆ ಮಾರಕ.

ಈ ಶಾಲೆಗಳ ವಿಲೀನದ ಜೊತೆಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವಂತೆ ಪದವಿ ಹಂತದ ಶಿಕ್ಷಣವನ್ನು ಮೂರು ವರ್ಷದಿಂದ ನಾಲ್ಕು ವರ್ಷಗಳಿಗೆ ವಿಸ್ತರಿಸಿದ್ದು ಜೊತೆಗೆ ಈ ಪದವಿಯ ಹಂತದಲ್ಲೇ ಶಿಕ್ಷಕರ ತರಬೇತಿಯನ್ನು ಸಹ ಸೇರಿಸಲಾಗಿದೆ. ಈ ನಾಲ್ಕು ವರ್ಷಗಳ ನಂತರ ಒಂದು ವರ್ಷದ ಶಿಕ್ಷಕರ ತರಬೇತಿಯನ್ನು ಪಡೆದುಕೊಂಡರೆ ಅವರು ಶಿಕ್ಷಕ ಹುದ್ದೆಗಳಿಗೆ ಬೇಕಾದ ಅರ್ಹತೆಯನ್ನು ಗಳಿಸಿಕೊಳ್ಳುತ್ತಾರೆ. ಇದರಿಂದಾಗಿ ಯುವಜನತೆ ತಮ್ಮ ಪದವಿ ಹಂತದ ನಂತರ ಎಲ್ಲರೂ ಗರಿಷ್ಠ ಸಂಖ್ಯೆಯಲ್ಲಿ ಶಿಕ್ಷಕರ ತರಬೇತಿಯನ್ನು ಪಡೆದುಕೊಂಡು ಅವರು ಶಿಕ್ಷಕರ ಹುದ್ದೆಗಳ ಆಕಾಂಕ್ಷಿಗಳಾದರೆ ಶಿಕ್ಷಕರ ಹುದ್ದೆಗಳು ಕಡಿಮೆಯಿರುವುದರಿಂದ ಅವರು ಸರಕಾರಿ ಶಾಲೆ ಶಿಕ್ಷಕರಾಗಲು ಸಾಧ್ಯವಿಲ್ಲದಂತಾಗುತ್ತದೆ. ಇದರ ಜೊತೆಗೆ ಸಾಮಾನ್ಯವಾಗಿ ಈ ಪದವಿ ಹಂತದ ನಂತರ ಶಿಕ್ಷಕರ ತರಬೇತಿಯ ಶಿಕ್ಷಣವನ್ನು ಗ್ರಾಮೀಣ ಯುವಜನತೆಯೇ ಹೆಚ್ಚಾಗಿ ಪಡೆಯುವುದರಿಂದ ಅವರಿಗೆ ಉದ್ಯೋಗಾವಕಾಶಗಳ ಕೊರತೆಯುಂಟಾಗುತ್ತದೆ. ಈ ಮೇಲಿನ ಎಲ್ಲಾ ಕಾರಣಗಳನ್ನು ಪರಿಶೀಲಿಸಿದರೆ ಅಂಗನವಾಡಿ ಕಾರ್ಯಕರ್ತೆಯರ ಪದೋನ್ನತಿ ಹಾಗೂ ಶಾಲೆಗಳ ವಿಲೀನ ಪ್ರಕ್ರಿಯೆ ಶೈಕ್ಷಣಿಕ ವಲಯದಲ್ಲಿ ಹಲವಾರು ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

ಆದ್ದರಿಂದ ಸರಕಾರ ಈಗ ತೆಗೆದುಕೊಂಡಿರುವ ನಿರ್ಧಾರವು ಅಷ್ಟು ಸಮಂಜಸವಾಗಿಲ್ಲದ ಕಾರಣದಿಂದ ಈ ಪ್ರಕ್ರಿಯೆಯನ್ನು ಕೈ ಬಿಟ್ಟು ಅಂಗನವಾಡಿ ಕಾರ್ಯಕರ್ತೆಯರಿಗಾಗಿಯೇ ಬೇರೆ ಯೋಜನೆಗಳನ್ನು ಜಾರಿಗೆ ತಂದರೆ ಒಳ್ಳೆಯ ಪರಿಣಾಮವನ್ನು ಉಂಟುಮಾಡಬಹುದು. ಇಲ್ಲದಿದ್ದರೆ ಈ ನೀತಿಯಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು ಕೂಡಾ ಅಡಕತ್ತರಿಯಲ್ಲಿ ಸಿಕ್ಕಿ ಬೀಳುವ ಸಂಭವ ಎದುರಾಗುತ್ತದೆ. ಅಂದರೆ ಕೆಲವೇ ಕೆಲವು ಶಿಕ್ಷಕ ಹುದ್ದೆಗಳು ಖಾಲಿಯಿರುವುದರಿಂದ ಸಂಪೂರ್ಣವಾಗಿ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರನ್ನೂ ಶಿಕ್ಷಕರಾಗಿ ನೇಮಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದರಿಂದ ಕೆಲವು ಅಂಗನವಾಡಿಗಳ ಕಾರ್ಯಕರ್ತೆಯರು ಅದೇ ಉದ್ಯೋಗದಲ್ಲಿ ನಿರತರಾದರೆ ಕೆಲವರು ಮಾತ್ರವೇ ಶಿಕ್ಷಕರಾಗಲು ಸಾಧ್ಯವಾಗುತ್ತದೆ. ಇದು ಅಂಗನವಾಡಿ ಕಾರ್ಯಕರ್ತೆಯರ ಭಿನ್ನ ವಿಭಿನ್ನವಾದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಸಾಮಾನ್ಯವಾಗಿ ಶಿಕ್ಷಕರಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಾಮಾನ್ಯ ಅಂಗನವಾಡಿ ಕಾರ್ಯಕರ್ತೆಯರಿಗೂ ಸಿಗುವ ಸೌಲಭ್ಯಗಳು, ವೇತನ ಹಾಗೂ ಇನ್ನಿತರ ಅಂಶಗಳಲ್ಲಿ ವಿಭಿನ್ನತೆಯು ಕಂಡುಬರುತ್ತದೆ.

 ಸರಕಾರ ಕೈಗೊಂಡ ನಿರ್ಧಾರಗಳ ಹಿಂದಿನ ಎಲ್ಲಾ ಘಟನೆಗಳನ್ನು ಮೆಲುಕು ಹಾಕಿ ನೋಡಿದರೆ ಯಾವುದೇ ಯೋಜನೆಯು ಸಾಮಾನ್ಯ ಜನವರ್ಗಕ್ಕೆ ಅನುಕೂಲವಾಗುವುದಿಲ್ಲ. ಇದಕ್ಕೆ ಉದಾಹರಣೆ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ತಂದ ಬದಲಾವಣೆೆ. ಇದರಿಂದಾಗಿ ಎಷ್ಟೋ ಅತಿಥಿ ಉಪನ್ಯಾಸಕರು ತಮ್ಮ ಕೆಲಸವನ್ನು ಕಳೆದುಕೊಂಡರು. ಈಗ ಅವರೆಲ್ಲ ನಿರುದ್ಯೋಗಿಗಳೇ..!!

ಈ ಮೇಲಿನ ಉದ್ದೇಶದಂತೆಯೇ ಉನ್ನತ ಶಿಕ್ಷಣ ಸಚಿವರಾದ ಡಾ. ಸಿ.ಎನ್. ಅಶ್ವತ್ಥ ನಾರಾಯಣರವರು ರಾಜ್ಯದ ಪ್ರಥಮ ದರ್ಜೆ ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳ ಪ್ರಾಂಶುಪಾಲರಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ‘‘ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರತೀ ಕಾಲೇಜಿನಲ್ಲೂ 1,500ರಿಂದ 2,000 ವಿದ್ಯಾರ್ಥಿಗಳು ಇರುವಂತೆ ನೋಡಿಕೊಳ್ಳುವುದು ಪ್ರಾಂಶುಪಾಲರ ಹೊಣೆ’’ ಎಂದು ಹೇಳುತ್ತಾ ‘‘84 ಸರಕಾರಿ ಕಾಲೇಜುಗಳಲ್ಲಿ ಶೇ. ನೂರರಷ್ಟು, 115 ಕಾಲೇಜುಗಳಲ್ಲಿ ಶೇ. ನಲವತ್ತರಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ’’ ಎಂದು ಹೇಳಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಕರ್ನಾಟಕದಲ್ಲಿ 2022-2021ರ ವರದಿಯ ಪ್ರಕಾರ 134 ಸರಕಾರಿ ಹಾಗೂ 407 ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿವೆ. ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆಯನ್ನು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಹೋಲಿಕೆ ಮಾಡಿ ನೋಡಿದರೆ ಶೇ. 300ರಷ್ಟು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಹೆಚ್ಚಾಗಿರುವುದು ಕಂಡುಬರುತ್ತದೆ. ಒಂದು ಇಂಜಿನಿಯರಿಂಗ್ ಕಾಲೇಜಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಒದಗಿಸದೆ ದನದ ತೊಟ್ಟಿಯಂತೆ ಮಾಡುವುದರ ಜೊತೆಗೆ ಖಾಸಗಿ ಕಾಲೇಜುಗಳಿಗೆ ಸೇರುವಂತೆ ಮಾಡುವ ವ್ಯವಸ್ಥೆ ನಿರ್ಮಿಸಿದವರು ಯಾರು? ಸರಕಾರವಲ್ಲವೇ. ನಾಯಿಕೊಡೆಯಂತೆ ರಾಜ್ಯದಾದ್ಯಂತ ಹಬ್ಬಿಕೊಂಡಿರುವ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಮೇಲೆ ನಿಯಂತ್ರಣ ಹೇರದೆ ಸರಕಾರಿ ಕಾಲೇಜುಗಳ ಮೇಲೆ ಹಿಡಿತ ಸಾಧಿಸಲು ಸರಕಾರಕ್ಕೆ ಯಾವ ನೈತಿಕತೆ ಇದೆ?

ಪ್ರತಿಯೊಂದು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅಲ್ಲಿನ ರಾಜಕಾರಣಿಗಳದ್ದೇ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸಲು ಅವಕಾಶ ನೀಡಲಾಗುತ್ತಿದೆ. ಅದರಿಂದ ಬಡವರ ರಕ್ತ ಹೀರಲಾಗುತ್ತಿದೆ. ಅದೇ ಖಾಸಗಿ ಕಾಲೇಜುಗಳಿಗೆ ಎಷ್ಟು ಬೇಕಾದರೂ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಅನುಮತಿ ನೀಡಲಾಗುತ್ತಿದೆ. ಅದರ ಬದಲು ಖಾಸಗಿ ಕಾಲೇಜುಗಳ ಮೇಲೆ ವಿದ್ಯಾರ್ಥಿಗಳ ಪ್ರವೇಶಕ್ಕೆ ನಿಯಂತ್ರಣ ಹೇರಿದ್ದರೆ ಆಗ ಎಲ್ಲಾ ವಿದ್ಯಾರ್ಥಿಗಳು ಸರಕಾರಿ ಕಾಲೇಜಿಗೆ ಸೇರುತ್ತಿದ್ದರು. ಇಂತಹ ದ್ವಂದ್ವ ನೀತಿಯಿಂದಾಗಿ ಇಂದು ಕೇವಲ ಇಂಜಿನಿಯರಿಂಗ್ ಕಾಲೇಜುಗಳಲ್ಲದೆ ಎಲ್ಲಾ ರೀತಿಯ ಶೈಕ್ಷಣಿಕ ಸರಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ.

ಮೊದಲು ಸರಕಾರಿ ಕಾಲೇಜುಗಳಿಗೆ ಬೇಕಾದ ಮೂಲಭೂತ ಅವಶ್ಯಕತೆಗಳನ್ನು ದೊರಕಿಸಿ, ಆನಂತರ ವಿದ್ಯಾರ್ಥಿಗಳನ್ನು ಸರಕಾರಿ ಕಾಲೇಜುಗಳಿಗೆ ಸೇರುವಂತೆ ಮನವೊಲಿಸದೆ ಕೇವಲ ಬೋಧಕರ ಮೇಲೆ ಒತ್ತಡ ಹೇರುವುದು ಯಾರ ಸಾಮರ್ಥ್ಯವನ್ನು ಬಿಂಬಿಸುತ್ತದೆ?.

ಪ್ರಸ್ತುತ ಕರ್ನಾಟಕದ ಶೈಕ್ಷಣಿಕ ರಂಗವು ಅಡಕತ್ತರಿಯಲ್ಲಿ ಸಿಕ್ಕಿಕೊಂಡಿದ್ದು ತನ್ನ ಕಾಯಕಲ್ಪಕ್ಕಾಗಿ ಕಾಯುತ್ತಿದೆ. ಪ್ರಜ್ಞಾವಂತ ಶೈಕ್ಷಣಿಕ ತಜ್ಞರು ಇಂದಿನ ಶಿಕ್ಷಣ ಸಚಿವರಿಗೆ ಹಾಗೂ ಸರಕಾರಕ್ಕೆ ಕಿವಿ ಹಿಂಡಬೇಕಾದ ಕೆಲಸವನ್ನು ಅತ್ಯಂತ ಜರೂರಾಗಿ ಮಾಡಬೇಕಾದ ಅನಿವಾರ್ಯತೆ ಇದೆ. ಈಗಾಗಲೇ ಕೊರೋನ ಹಾವಳಿಯಿಂದ ಹಲವು ವಿದ್ಯಾವಂತ ವರ್ಗ ನಿರುದ್ಯೋಗದ ಸಮಸ್ಯೆಯನ್ನು ಎದುರಿಸುತ್ತಿದೆ. ಇಂತಹ ಸಂಧರ್ಭದಲ್ಲಿ ರಾಜಕೀಯ ಹಾಗೂ ಸ್ವಜನಪಕ್ಷಪಾತ ಭೇದವಿಲ್ಲದೆ ಒಕ್ಕೊರಲಿನಿಂದ ಸರಕಾರಕ್ಕೆ ತಿಳಿಸಬೇಕಾದ ಪರಿಸ್ಥಿತಿಯಿದ್ದು, ಈಗ ಏನಾದರೂ ಅಸಡ್ಡೆ ತೋರಿದರೆ ಇನ್ನು ಮುಂದಿನ ದಿನಗಳಲ್ಲಿ ರಾಜ್ಯದ ಶೈಕ್ಷಣಿಕ ಕ್ಷೇತ್ರ ಸಮಸ್ಯೆಯ ಆಗರವಾಗುತ್ತದೆ ಎಂಬುವುದರಲ್ಲಿ ಸಂಶಯವಿಲ್ಲ.

share
ದಿವಾಕರ್ ಡಿ.
ದಿವಾಕರ್ ಡಿ.
Next Story
X