Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರ್ಕಾರದಿಂದಲೇ ನೈತಿಕ ಪೊಲೀಸ್ ಗಿರಿಗೆ...

ಸರ್ಕಾರದಿಂದಲೇ ನೈತಿಕ ಪೊಲೀಸ್ ಗಿರಿಗೆ ಪ್ರೋತ್ಸಾಹ: ಡಿ.ಕೆ. ಶಿವಕುಮಾರ್ ಆರೋಪ

ವಾರ್ತಾಭಾರತಿವಾರ್ತಾಭಾರತಿ28 July 2022 3:56 PM IST
share
ಸರ್ಕಾರದಿಂದಲೇ ನೈತಿಕ ಪೊಲೀಸ್ ಗಿರಿಗೆ ಪ್ರೋತ್ಸಾಹ: ಡಿ.ಕೆ. ಶಿವಕುಮಾರ್ ಆರೋಪ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್ ಕೊಲೆ ಪ್ರಕರಣ ಬಹಳ ಅನ್ಯಾಯ, ನಾವು ಇದನ್ನು ಖಂಡಿಸುತ್ತೇವೆ. ರಾಜ್ಯದಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಯಾರಿಗೂ ರಕ್ಷಣೆ ಇಲ್ಲ. ಸರ್ಕಾರವೇ ನೈತಿಕ ಪೊಲೀಸ್ ಗಿರಿಗೆ ಪ್ರೋತ್ಸಾಹ ನೀಡಿದೆ. ಆ ಮೂಲಕ ಪರಿಸ್ಥಿತಿ ಹದಗೆಡಲು ಕಾರಣವಾಗಿದೆ. ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಗುರುವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮಗೆ ಇದರಲ್ಲಿ ರಾಜಕಾರಣ ಬೇಕಿಲ್ಲ. ನಾವು ಸರ್ಕಾರದ ಕ್ರಮಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಕಾನೂನು ತನ್ನ ಕೆಲಸ ಮಾಡಲಿ. ಆದರೆ ಸರ್ಕಾರ ತನ್ನ ತಪ್ಪನ್ನು ತಿದ್ದಿಕೊಳ್ಳಬೇಕು. ನಾವು ಜನರ ಭಾವನೆಗೆ ಗೌರವ ನೀಡುತ್ತೇವೆ. ಜನರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ. ಜನರ ಆಕ್ರೋಶ ಮೊದಲಿನಿಂದಲೇ ಇತ್ತು. ಆದರೆ ಸರ್ಕಾರ ಆರಂಭದಿಂದಲೇ ಪರಿಸ್ಥಿತಿ ನಿಯಂತ್ರಣ ಮಾಡಿದ್ದರೆ ಈ ದುಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. 

ಸರ್ಕಾರ ಯಾವುದೇ ತನಿಖೆ ಮಾಡಲಿ, ಯಾವುದೇ ಸಂಘಟನೆಯನ್ನು ನಿಷೇಧಿಸಲಿ, ಆದರೆ ಮೊದಲು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಲಿ. ರಾಜ್ಯದ ಕರಾವಳಿ ಭಾಗದಲ್ಲಿ ಶಾಂತಿ ಸ್ಥಾಪಿಸುವ ಕೆಲಸ ಮಾಡಲಿ. 

ಎಲ್ಲರೂ ತಮ್ಮ, ತಮ್ಮ ಧರ್ಮ ರಕ್ಷಣೆ ಮಾಡಿಕೊಳ್ಳುತ್ತಾರೆ. ಪೊಲೀಸರು ಸ್ವಾತಂತ್ರ್ಯವಾಗಿ ತನಿಖೆ ಮಾಡಲು ಬಿಡಿ. ಪೊಲೀಸ್ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಪ್ರಕರಣ ದಾರಿ ತಪ್ಪಿಸಬಾರದು.

ನಾನು ನಿನ್ನೆ ಸಂಜೆಯೇ ಬೆಳ್ಳಾರೆಗೆ ತೆರಳಲು ನಿರ್ಧರಿಸಿದ್ದೆ. ಆದರೆ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿ ತಿಳಿಯಾದ ನಂತರ ಭೇಟಿ ನೀಡಿ ಎಂದು ಸಲಹೆ ನೀಡಿದರು. ಇಂತಹ ಘಟನೆಗಳು ಇನ್ನು ಮುಂದೆ ನಡೆಯಬಾರದು. ಜನಾಕ್ರೋಶಕ್ಕೆ ಹೆದರಿ ಸರ್ಕಾರ ಜನೋತ್ಸವ ಕಾರ್ಯಕ್ರಮ ರದ್ದು ಮಾಡಿದೆ ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಇದು ಜನೋತ್ಸವ ಅಲ್ಲ, ಭ್ರಷ್ಟೋತ್ಸವ. ನಾವು ಈ ಪಟ್ಟ ಈಗಾಗಲೇ ನೀಡಿದ್ದೇವೆ. ಸರ್ಕಾರ ಸರಿಯಾಗಿ ಇದ್ದಿದ್ದರೆ ಯಾಕೆ ಹೆದರಬೇಕು? ಕಾರ್ಯಕ್ರಮ ಮಾಡಬೇಕಿತ್ತು. ಅವರು ಸಾಧನೆ ಮಾಡದೇ ಈ ಕಾರ್ಯಕ್ರಮ ಮಾಡಲು ಮುಂದಾಗಿದ್ದೇ ತಪ್ಪು' ಎಂದರು.

ಬಿಜೆಪಿ ನಾಯಕರು ಅನಗತ್ಯವಾಗಿ ಕಾಂಗ್ರೆಸ್ ನಾಯಕರನ್ನು ಎಳೆದು ತಂದು ರಾಜಕಾರಣ ಮಾಡಬಾರದು. ಕಾರ್ಯಕರ್ತರು ಯಾವುದೇ ಪಕ್ಷದವರಾದರೂ ಅವರ ಭಾವನೆಗೆ ಗೌರವ ನೀಡಲೇ ಬೇಕು. ಅವರು ಒಂದು ಸಿದ್ಧಾಂತದ ಮೇಲೆ ಕೆಲಸ ಮಾಡುತ್ತಾರೆ. ಅದನ್ನು ತಪ್ಪು ಎಂದು ಹೇಳಲು ಸಾಧ್ಯವೇ? ಅವರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಾರೆ. ಈ ಸಂದರ್ಭದಲ್ಲಿ ನಾನು ರಾಜಕಾರಣ ಮಾಡಲು ಇಚ್ಛಿಸುವುದಿಲ್ಲ. ಆ ಬಗ್ಗೆ ಬೇರೆ ಸಮಯದಲ್ಲಿ ಮಾತನಾಡುತ್ತೇನೆ ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಎಲ್ಲರಿಗೂ ರಕ್ಷಣೆ ಅಸಾಧ್ಯ ಎಂಬ ತೇಜಸ್ವಿ ಸೂರ್ಯ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ' ಹಾಗಿದ್ದರೆ ಸರ್ಕಾರ ಏಕೆ ಇರಬೇಕು? ಮೈಸೂರಿನಲ್ಲಿ ಅತ್ಯಾಚಾರ ಆದಾಗ ಅಷ್ಟು ಹೊತ್ತಲ್ಲಿ ಆಕೆ ಹೊರಗೆ ಯಾಕೆ ಹೋಗಬೇಕಿತ್ತು? ಎಂದು ಗೃಹ ಸಚಿವರೇ ಕೇಳಿದ್ದರು. ನಾಲ್ಕೈದು ದಿನಗಳ ಹಿಂದೆಯೂ  ಆ ಭಾಗದಲ್ಲಿ ಕೊಲೆಯಾಗಿದ್ದು, ಇವರು ಯಾವ ಕ್ರಮ ಕೈಗೊಂಡಿದ್ದಾರೆ? ನಾನು ನಿನ್ನೆ ರಾತ್ರಿ ಡಿಐಜಿ ಜತೆ ಮಾತನಾಡಿದ್ದು, ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದರು. ಈ ಪ್ರಕರಣದಲ್ಲಿ ಮುಕ್ತ ತನಿಖೆ ಆಗಬೇಕು. ರಾಜಕಾರಣಿಗಳು ಮಾತು ಕಡಿಮೆ ಮಾಡಬೇಕು. ಪೊಲೀಸರು ಕೆಲಸ ಮಾಡಬೇಕು ' ಎಂದರು.

ಕಾಂಗ್ರೆಸ್ ಕಾಲದಲ್ಲಿ 22 ಕೊಲೆಯಾಗಿತ್ತು ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, ' ನಮ್ಮ ಕಾಲದಲ್ಲಿ 25 ಆಗಿತ್ತೋ, ಇವರ ಕಾಲದಲ್ಲಿ 35 ಆಗಿದೆಯೋ, 100 ಆಗಿದೆಯೋ ಎಂಬ ಬಗ್ಗೆ ಮಾಧ್ಯಮಗಳೇ ಪಟ್ಟಿ ಪ್ರಕಟಿಸಿವೆ' ಎಂದರು.

ಕಾಂಗ್ರೆಸ್ ಬೆಂಬಲಿತ ಮತಾಂಧ ಶಕ್ತಿಗಳು ಈ ಕೃತ್ಯದ ಹಿಂದೆ ಇವೆ ಎಂಬ ಆರೋಪಕ್ಕೆ, 'ಅವರು ಕೇವಲ ರಾಜಕೀಯ ಆರೋಪ ಮಾಡುತ್ತಾರೆ. ಆ ರೀತಿ ಇದ್ದರೆ ಅದನ್ನು ಸಾಬೀತುಪಡಿಸಿ, ಶಿಕ್ಷೆ ನೀಡಲಿ. ಯಾರು ಬೇಡ ಎಂದವರು? ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ' ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X