ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಲವರ ವಿಚಾರಣೆ

ಪ್ರವೀಣ್ ನೆಟ್ಟಾರು
ಮಂಗಳೂರು, ಜು. 28: ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರದಲ್ಲಿಯೂ ಹಲವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ ಸುಮಾರು 27 ಜನರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಸೂಚನೆಯಂತೆ ದ.ಕ. ಜಿಲ್ಲಾ ಪೊಲೀಸರ ಸಹಭಾಗಿತ್ವದಲ್ಲಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರು ಹಾಗೂ ತನಿಖೆಗೊಳಪಡಿಸಬೇಕಾದ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
Next Story