ಮಂಗಳೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಮಂಗಳೂರು, ಜು.28: ಕೊಲೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಸಂಜೆ ಆಗಮಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದರಾದ ನಳೀನ್ ಕುಮಾರ್ ಕಟೀಲ್, ಸಿ.ಟಿ ರವಿ, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ಆಯುಕ್ತ ಶಶಿ ಕುಮಾರ್ ಹಾಗೂ ಇತರೆ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
Next Story