Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಮೋದ್ ಮುತಾಲಿಕ್ ದ.ಕ. ಜಿಲ್ಲಾ ಭೇಟಿ...

ಪ್ರಮೋದ್ ಮುತಾಲಿಕ್ ದ.ಕ. ಜಿಲ್ಲಾ ಭೇಟಿ ನಿಷೇಧ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ

ವಾರ್ತಾಭಾರತಿವಾರ್ತಾಭಾರತಿ28 July 2022 6:16 PM IST
share
ಪ್ರಮೋದ್ ಮುತಾಲಿಕ್ ದ.ಕ. ಜಿಲ್ಲಾ ಭೇಟಿ ನಿಷೇಧ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ

ಮಂಗಳೂರು, ಜು. 28: ದ.ಕ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್  ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಕ್ರಮ ತೆಗೆದುಕೊಳ್ಳುವುದಾಗಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಪ್ರವೇಶಕ್ಕೆ  ಜು. 28ರಿಂದ ಮುಂದಿನ ಆದೇಶದವರೆಗೆ ನಿಷೇಧ ಜಾರಿಯಲ್ಲಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆಯು ಕೋಮು ದ್ವೇಷದಿಂದ ಮುಸ್ಲಿಂ ಸಮುದಾಯದವರು ಎಸಗಿರುವುದಾಗಿ ಗಾಳಿ ಸುದ್ದಿ ಹಬ್ಬಿರುತ್ತದೆ. ಅಲ್ಲದೆ ಪ್ರವೀಣ್‌ರವರ ಶವ ಮೆರವಣಿಗೆಯ ಸಂದರ್ಭ ಅಲ್ಲಲ್ಲಿ ಘರ್ಷಣೆ ಉಂಟಾಗಿ ಸಾರ್ವಜನಿಕ ಆಸ್ತಿಪಾಸ್ತಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿರುತ್ತದೆ. ಈ ಪರಿಸ್ಥಿತಿಯಲ್ಲಿ ಪ್ರಮೋದ್ ಮುತಾಲಿಕ್‌ರವರು ಬೆಳ್ಳಾರೆ ಮತ್ತು ಮೃತ ಪ್ರವೀಣ್‌ರವರ ಮನೆ ಹಾಗೂ ಇತರ ಕಡೆಗಳಿಗೆ ಭೇಟಿಯಾಗುವ ಮಾಹಿತಿ ದೊರಕಿದೆ. ಮುತಾಲಿಕ್ ಅವರು ಈ ಹಿಂದೆ ಭೇಟಿ ಮಾಡಿದ ಸ್ಥಳಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಹಿಂದೂ ಸಮುದಾಯದ ಜನರ ಕೋಮು ಭಾವನೆ ಕೆರಳಿಸುತ್ತಾ ಬಂದಿದ್ದಾರೆ ಹಾಗೂ ಕೋಮು ಸೌಹಾರ್ದತೆ ಹದಗೆಡಿಸಿದ ಪ್ರಕರಣಗಳು ವರದಿಯಾಗಿವೆ.

ಇದೀಗ ಅವರು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಪ್ರವೇಶಿಸಿದ್ದಲ್ಲಿ ಪ್ರಚೋದನಕಾರಿ ಹೇಳಿಕೆಯನ್ನು ನೀಡಿ ಮತ್ತಷ್ಟು ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿ ಎರಡು ಕೋಮುಗಳ ನಡುವೆ ಸಂಷರ್ಷ ಉಂಟಾಗಿ ಕೋಮು ಸಾಹೌರ್ದತೆ ಹದಗೆಟ್ಟು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಅವರಿಗೆ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144ರ ಅನ್ವಯ ಆದೇಶ ಹೊರಡಿಸುವಂತೆ ಪೊಲೀಸ್ ಅಧೀಕ್ಷಕರು ಮಾಡಿರುವ ಮನವಿ ಮೇರೆಗೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X