ಜು.29ರಂದು ರಾಜ್ಯಮಟ್ಟದ ಕಬ್, ಬುಲ್‌ಬುಲ್ ಗೋಲ್ಡನ್ ಆ್ಯರೋ ಪ್ರಶಸ್ತಿ ಪ್ರದಾನ

ಉಡುಪಿ, ಜು.28: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮತ್ತು ಉಡುಪಿ ಮುಕುಂದ ಕೃಪಾ ಆಂಗ್ಲ ಮಾಧ್ಯಮ ಶಾಲೆಗಳ ಸಹಯೋಗದಲ್ಲಿ ರಾಜ್ಯಮಟ್ಟದ ಕಬ್, ಬುಲ್‌ಬುಲ್ ಮಕ್ಕಳ ಗೋಲ್ಡನ್ ಆ್ಯರೋ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜು.೨೯ರಂದು ಬೆಳಗ್ಗೆ ೧೧ಗಂಟೆಗೆ ಉಡುಪಿಯ ರಾಜಾಂಗಣದಲ್ಲಿ ಹಮ್ಮಿಕೊಳ್ಳ ಲಾಗಿದೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸ್ಕೌಟ್ಸ್ ಆಯುಕ್ತ ಡಾ.ವಿಜಯೇಂದ್ರ ವಸಂತ್ ರಾವ್, ೨೦೨೧-೨೨ನೆ ಸಾಲಿನ ಈ ಪ್ರಶಸ್ತಿಯನ್ನು ಉಡುಪಿ ಜಿಲ್ಲೆಯ ೧೫ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳ ೧೫೭ ಕಬ್ಸ್ ಹಾಗೂ ೨೦೪ ಬುಲ್‌ಬುಲ್ಸ್ ಸಹಿತ ಒಟ್ಟು ೩೬೧ ಮಂದಿ ಪಡೆದಿ ದ್ದಾರೆ ಎಂದು ತಿಳಿಸಿದರು.
ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಭಾಗವಹಿಸಲಿರುವರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗೈಡ್ಸ್ ಆಯುಕ್ತೆ ಜ್ಯೋತಿ ಜೆ.ಪೈ, ಸಾವಿತ್ರಿ, ಡಾ.ಉದಯ್, ಸುಮನಾ ಶೇಖರ್ ಉಪಸ್ಥಿತರಿದ್ದರು.







