Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಲೆಯಾದ ಪ್ರವೀಣ್ ಕುಟುಂಬಕ್ಕೆ...

ಕೊಲೆಯಾದ ಪ್ರವೀಣ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರ: ಸಿಎಂ ಬಸವರಾಜ ಬೊಮ್ಮಾಯಿ

ʼಪ್ರಕರಣ ಬೇಧಿಸುವವರೆಗೆ ದಣಿವಿಲ್ಲದೇ ಕ್ರಮʼ

ವಾರ್ತಾಭಾರತಿವಾರ್ತಾಭಾರತಿ28 July 2022 8:19 PM IST
share
ಕೊಲೆಯಾದ ಪ್ರವೀಣ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರ: ಸಿಎಂ ಬಸವರಾಜ ಬೊಮ್ಮಾಯಿ

ಮಂಗಳೂರು, ಜು. 28 : ಕೊಲೆಯಾದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆ ಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಅವರು ಇಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರವೀಣ್ ತಮ್ಮ ಕುಟುಂಬಕ್ಕೆ ಆಧಾರವಾಗಿದ್ದು, ಚಿಕ್ಕ ಅಂಗಡಿಯೇ ಆದಾಯದ ಮೂಲವಾಗಿತ್ತು. ಸರ್ಕಾರದ ವತಿಯಿಂದ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ಹಾಗೂ ಭಾರತೀಯ ಜನತಾ ಪಕ್ಷದ ವತಿಯಿಂದ 25 ಲಕ್ಷ ಗಳನ್ನು ಪರಿಹಾರವಾಗಿ ನೀಡಲಾಗಿದೆ. ಪ್ರವೀಣ್ ಕುಟುಂಬದವರಿಗೆ ಪಕ್ಷ ಮತ್ತು ಸರ್ಕಾರದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಅವರ ಜೀವನದ ಮುಂದಿನ ಭವಿಷ್ಯಕ್ಕೆ ಸಹಕಾರ ನೀಡಲಾಗುವುದು. ಪ್ರವೀಣ್ ಆತ್ಮಕ್ಕೆ ಕೊಲೆಗೈದವರ ಶಿಕ್ಷೆಯಾದಾಗ ಮಾತ್ರ ಶಾಂತಿ ದೊರಕಲಿದೆ. ಪ್ರವೀಣ್ ಕುಟುಂಬದವರು ಇದೇ ಮಾತನ್ನು ಹೇಳಿದ್ದಾರೆ. ಇನ್ನೆಂದೂ ಈ ರೀತಿ ಯಾರಿಗೂ ಆಗಬಾರದು, ಇದರ ಹಿಂದಿರುವ ಸಂಘಟನೆಗಳ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.  ಕಟುಕರಿಗೆ ಶಿಕ್ಷೆ ಆಗುವ ಕೆಲಸವನ್ನು ಕಟ್ಟುನಿಟ್ಟಾಗಿ ಮಾಡಲಾಗುವುದು ಎಂದು ಸಿಎಂ ಹೇಳಿದರು.

ಇದೊಂದು ಪೂರ್ವಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ತಿಳಿಯುತ್ತದೆ. ಮೊನ್ನೆ ನಡೆದ ಪ್ರವೀಣ್ ಹತ್ಯೆ ಪ್ರಕರಣ ಖಂಡನೀಯ. ಕಳೆದ ಹತ್ತು ವರ್ಷಗಳಲ್ಲಿ ಈ ಭಾಗದಲ್ಲಿ ಇಂತಹ ಚಟುವಟಿಕೆಗಳು ನಡೆಯುತ್ತಿವೆ. ಸಮಾಜಘಾತುಕ ಶಕ್ತಿಗಳು ಬೆಂಬಲ ನೀಡಿರುವುದರಿಂದ ಈ ಘಟನೆಯನ್ನು ನಡೆಸಲಾಗಿದೆ. ಇದನ್ನು ನಾವು ಕೊಲೆ ಪ್ರಕರಣವಾಗಿ ನೋಡುತ್ತಿಲ್ಲ. ದೇಶವನ್ನು ಛಿದ್ರ ಮಾಡುವ ಯೋಜನಾ ಬದ್ಧವಾದ ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಲಾಗಿದೆ. ತನಿಖೆ ಪ್ರಾರಂಭವಾಗಿದೆ. ಆರೋಪಿಗಳು ರಾಜ್ಯದ ಗಡಿ ದಾಟಿರಬಹುದು. ಈ ಎಲ್ಲ ಆಯಾಮದಲ್ಲಿ ತನಿಖೆ ಮಾಡಲಾಗುತ್ತಿದೆ, ಕೆಲವರನ್ನು ವಶಕ್ಕೆ ತೆಗೆದುಕೊಂಡು, ಅವರಿಂದ ಪಡೆದ ಮಾಹಿತಿಯಿಂದ ತನಿಖೆ ಮುಂದುವರೆಯಲಿದೆ. ಅತಿ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂಬ ವಿಶ್ವಾಸವಿದೆ. ಎಡಿಜಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಕಳೆದ ಹಲವಾರು ವರ್ಷಗಳಿಂದ  ದುಷ್ಕೃತ್ಯಗಳಲ್ಲಿ ತೊಡಗಿಕೊಂಡಿರುವ ಸಮಾಜಘಾತುಕ ಶಕ್ತಿಗಳ ಜಾಡು ಹಿಡಿದು, ಈ ದಿಸೆಯಲ್ಲಿಯೂ ತನಿಖೆ ಕೈಗೊಂಡು ಹಿಂದಿರುವ ಸಂಘಟನೆಗಳನ್ನು ಗಮನಿಸುತ್ತಿದ್ದೇವೆ ಎಂದರು.

ಕರ್ನಾಟಕಕ್ಕೆ ಎನ್ ಐ ಎ ಅಗತ್ಯವಿದೆ

ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ತನಿಖಾ ದಳವನ್ನು ಒದಗಿಸಲು ಕೋರಲಾಗಿದೆ. ವಿಶೇಷವಾಗಿ ಮಂಗಳೂರು ಭಾಗಕ್ಕೆ ಎನ್ ಐ ಎ ಯ ಅವಶ್ಯಕತೆ ಇದೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಪ್ರಾಥಮಿಕ ತನಿಖಾ ವರದಿಯ ಆಧಾರವಾಗಿ ಹೆಚ್ಚುವರಿ ತನಿಖೆಯ ಅವಶ್ಯಕತೆ ಇದ್ದಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗುವುದು. ಈ ಘಟನೆಗೆ ಬೆಂಬಲ ನೀಡಿರುವ ಬಗ್ಗೆಯೂ ತನಿಖೆ ನಡೆಸಿ , ಈ ಕುಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲ ಜಾಲವನ್ನು ಬೇಧಿಸಲಾಗುವುದು.  ಪಿಎಫ್‍ಐ ಬ್ಯಾನ್ ಮಾಡಲು ಕ್ರಮಗಳು ಪ್ರಾರಂಭವಾಗಿದೆ. ಈ ರೀತಿಯ ದುಷ್ಕೃತ್ಯಗಳು ಭಾರತದ ವಿವಿಧ ರಾಜ್ಯಗಳಲ್ಲಿ ನಡೆದಿದ್ದು, ದೇಶದ ಮಟ್ಟದಲ್ಲಿ ಸರಿಯಾದ ಕ್ರಮವನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಮಸೂದ್ ಹತ್ಯೆಗೂ ಹಾಗೂ ಪ್ರವೀಣ್ ಹತ್ಯೆಗೂ ಸಂಬಂಧವಿದೆಯೇ ಎಂಬ ಬಗ್ಗೆ ತನಿಖೆಯಿಂದ ತಿಳಿಯಲಿದೆ. ಪೊಲೀಸ್ ಅಧಿಕಾರಿಗಳ ಕರ್ತವ್ಯ ವೈಫಲ್ಯವಾಗಿದ್ದರೆ ಅದನ್ನೂ ತನಿಖೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X