ಸುರತ್ಕಲ್: ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಮುಹಮ್ಮದ್ ಫಾಝಿಲ್
ಸುರತ್ಕಲ್ : ಮೂಡ ಮಾರುಕಟ್ಟೆ ಸಮೀಪ ಕಾರ್ಯಾಚರಿಸುತ್ತಿರುವ ಬಟ್ಟೆ ಅಂಗಡಿಯಲ್ಲಿದ್ದ ಯುವಕನೋರ್ವನ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಸುರತ್ಕಲ್ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಹಲ್ಲೆಗೊಳಗಾದವರು. ಗಂಭೀರ ಗಾಯಗೊಂಡ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಸುರತ್ಕಲ್ ಬೀಜೆಶ್ ಎಂಬ ಜವಳಿ ಅಂಗಡಿಯ ಮುಂಭಾಗ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮುಹಮ್ಮದ್ ಫಾಝಿಲ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
Next Story