ಸುರತ್ಕಲ್‌ನಲ್ಲಿ ಯುವಕನ ಹತ್ಯೆ; ಶಾಸಕ ಯು.ಟಿ.ಖಾದರ್ ಖಂಡನೆ, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ

ಮಂಗಳೂರು : ಸುರತ್ಕಲ್ ಮಂಗಳಪೇಟೆ ನಿವಾಸಿ ಪಾಝಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಅರೋಪಿಗಳು ಯಾರೇ ಆಗಲಿ ಶೀಘ್ರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಸಂಭವಿಸುತ್ತಿದ್ದು, ಕೋಮು ಸೌಹಾರ್ದತೆ ಹಾಳಾಗುವ ಸೂಚನೆ ದಟ್ಟವಾಗಿದೆ. ಆದುದರಿಂದ ಇದನ್ನು ಸರಕಾರ ಹಾಗೂ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಉಳಿಸಲು ತಕ್ಷಣ ಕಾರ್ಯ ಪ್ರವೃತ್ತರಾಗಿ ಕ್ರಮಕೈಗೊಳ್ಳಬೇಕೆಂದು ಸರಕಾರಕ್ಕೆ ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ.
Next Story





