ದ.ಕ. ಜಿಲ್ಲೆಯ ಐದು ತಾಲೂಕುಗಳಲ್ಲಿ ಆ.6ರವರೆಗೆ ನಿಷೇಧಾಜ್ಞೆ ವಿಸ್ತರಣೆ

ಮಂಗಳೂರು, ಜು.29: ಬೆಳ್ಳಾರೆಯಲ್ಲಿ ಜು.26ರಂದು ರಾತ್ರಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ. ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಬರುವ ಬಂಟ್ವಾಳ, ಸುಳ್ಯ, ಪುತ್ತೂರು, ಬೆಳ್ತಂಗಡಿ ಹಾಗೂ ಕಡಬ ತಾಲೂಕುಗಳಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.
ಈ ಐದು ತಾಲೂಕುಗಳಲ್ಲಿ ಆಗಸ್ಟ್ 6ರ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಈ ಹಿಂದೆ ಜು.27ರಂದು ಹೊರಡಿಸಿದ್ದ ನಿಷೇಧಾಜ್ಞೆಯ ಅವಧಿ ಇಂದು ಮಧ್ಯರಾತ್ರಿ 12ಕ್ಕೆ ಮುಕ್ತಾಯಗೊಳ್ಳಲಿರುವುದರಿಂದ ನಿಷೇಧಾಜ್ಞೆ ಅವಧಿಯನ್ನು ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Next Story