ಪಾಝಿಲ್ ಹತ್ಯೆ: ಮುಸ್ಲಿಮ್ ಜಮಾಅತ್ ಖಂಡನೆ

ಪಾಝಿಲ್
ಉಡುಪಿ: ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಹತ್ಯೆ ತೀವ್ರ ಖಂಡನೀಯ. ಪ್ರಕರಣದ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಇಂತಹ ಕೃತ್ಯಗಳಿಂದ ಕೋಮು ಸೌಹಾರ್ದತೆ ಹಾಳಾಗುವ ಸೂಚನೆ ದಟ್ಟ ವಾಗಿದೆ. ಗೃಹ ಇಲಾಖೆ ಹಾಗೂ ಸರಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಉಳಿಸಲು ತಕ್ಷಣ ಕಾರ್ಯ ಪ್ರವೃತ್ತರಾಗ ಬೇಕೆಂದು ಮುಸ್ಲಿಂ ಜಮಾಅತ್ ಸಂಚಾಲಕ ಕೆ.ಎ.ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story