ಆ. 1ರ ಬೆಳಗ್ಗೆವರೆಗೆ ದ.ಕ.ಜಿಲ್ಲೆಯಲ್ಲಿ ಮದ್ಯದಂಗಡಿಗಳು ಬಂದ್: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ

ಜಿಲ್ಲಾಧಿಕಾರಿ ಡಾ. ರಾಜೇಂದ್ರ
ಮಂಗಳೂರು, ಜು. 29: ದ.ಕ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಜಿಲ್ಲೆಯಾದ್ಯಂತ ಕಾರ್ಯಾಚರಿಸುತ್ತಿರುವ ಎಲ್ಲಾ ವಿಧದ ಮದ್ಯ ಮಾರಾಟದ ಸನ್ನದುಗಳನ್ನು ಜುಲೈ 29ರಿಂದ ಆಗಸ್ಟ್ 1ರ ಬೆಳಗ್ಗೆ 8 ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಬೆಳ್ಳಾರೆ ಠಾಣಾ ವ್ಯಾಪ್ತಿಯ ಪ್ರವೀಣ್ ನೆಟ್ಟಾರ್ ಹತ್ಯೆ ಹಾಗೂ ಸುರತ್ಕಲ್ನಲ್ಲಿ ನಿನ್ನೆ ನಡೆದ ಫಾಝಿಲ್ ಹತ್ಯೆಯ ಹಿನ್ನೆಲೆಯಲ್ಲಿ ಪರಿಸ್ಥಿತಿ ಬಿಗುವಾಗಿದೆ. ಮತೀಯವಾಗಿ ಅತೀ ಸೂಕ್ಷ್ಮ ಪ್ರದೇಶವಾಗಿರುವ ದ.ಕ.ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಇನ್ನೂ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾಗಿರುವುದರಿಂದ ದ.ಕ. ಜಿಲ್ಲಾ ವ್ಯಾಪ್ತಿಯಾದ್ಯಂತ ಮದ್ಯದಂಗಡಿಗಳನ್ನು ಮುಚ್ಚಿಸುವುದು ಅತೀ ಅಗತ್ಯವಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಂಗಳೂರು ಪೊಲೀಸ್ ಆಯುಕ್ತರ ಪ್ರಸ್ತಾವನೆಯನ್ನು ಪರಿಗಣಿಸಿ ಈ ಕ್ರಮ ಕೈಗೊಂಡಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Next Story