ಮಂಗಳೂರು ನಗರಾದ್ಯಂತ ಸೆಕ್ಷನ್ 144 ವಿಸ್ತರಣೆ: ಕಮಿಷನರ್ ಶಶಿಕುಮಾರ್

ಕಮಿಷನರ್ ಶಶಿಕುಮಾರ್
ಮಂಗಳೂರು, ಜು. 29: ನಗರದ ಸುರತ್ಕಲ್ನಲ್ಲಿ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆಯವರೆಗೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 1ರ ಬೆಳಗ್ಗೆ 8 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ನಿಷೇಧಾಜ್ಞೆಯಲ್ಲಿ ಜಾರಿಯಲ್ಲಿರುವ ಎಲ್ಲಾ ನಿಯಮಗಳು ಆಗಸ್ಟ್ 1ರ ಬೆಳಗ್ಗಿನವರೆಗೂ ಮುಂದುವರಿಯಲಿದೆ. ಈ ಅವಧಿಯಲ್ಲಿ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಅನಗತ್ಯ ಸಂಚಾರವನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಶಾಂತಿ ಕಾಪಾಡಲು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
Next Story