ಬೆಂಗಳೂರು | ಪ್ಲಾಸ್ಟಿಕ್ ಘಟಕಗಳ ಮೇಲೆ ದಾಳಿ: 1,631 ಕೆ.ಜಿ ಜಪ್ತಿ, 1.20 ಲಕ್ಷ ರೂ. ದಂಡ

ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.29: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಾಸರಹಳ್ಳಿ ವಲಯ ವ್ಯಾಪ್ತಿಯ ರಾಜಗೋಪಾಲನಗರ ವಾರ್ಡ್ನಲ್ಲಿ ಅಧಿಕಾರಿಗಳು ಪ್ಲಾಸ್ಟಿಕ್ ತಯಾರಿಸುವ ಬಾಲಾಜಿ ಎಂಟರ್ಪ್ರೈಸಸ್ ಕಾರ್ಖಾನೆ ಮೇಲೆ ದಾಳಿ ನಡೆಸಿ ಸುಮಾರು 4,160 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದ್ದು, 25,000 ದಂಡ ವಿಧಿಸಿದ್ದಾರೆ. ನಗರದಲ್ಲಿ ಜುಲೈ ತಿಂಗಳಿನಲ್ಲಿ 4,414 ಕಡೆ 10,961.31 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನ ಜಪ್ತಿ ಮಾಡಿ 21.48 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಗರದಾದ್ಯಂತ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಮಾರಾಟ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ಅನಿರೀಕ್ಷಿತ ತಪಾಸಣೆ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಜೊತೆಗೆ ದಂಡ ವಿಧಿಸಲಾಗುತ್ತಿದೆ. ಅದರಂತೆ, ಇಲ್ಲಿಯವರೆಗೆ 200 ಕಡೆ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನ ಜಪ್ತಿ ಮಾಡಿ 1,20,700 ರೂ. ದಂಡ ವಿಧಿಸಲಾಗಿದೆ.
Next Story





