Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣಾ ಬಾಂಡ್ ಗಳು: ಅಪಾರದರ್ಶಕತೆಯ...

ಚುನಾವಣಾ ಬಾಂಡ್ ಗಳು: ಅಪಾರದರ್ಶಕತೆಯ ಕಳವಳಗಳ ನಡುವೆಯೇ 10,000 ಕೋಟಿ ರೂ.ದಾಟಿದ ದೇಣಿಗೆಗಳು

ವಾರ್ತಾಭಾರತಿವಾರ್ತಾಭಾರತಿ29 July 2022 10:55 PM IST
share
ಚುನಾವಣಾ ಬಾಂಡ್ ಗಳು: ಅಪಾರದರ್ಶಕತೆಯ ಕಳವಳಗಳ ನಡುವೆಯೇ 10,000 ಕೋಟಿ ರೂ.ದಾಟಿದ ದೇಣಿಗೆಗಳು

ಹೊಸದಿಲ್ಲಿ,ಜು.29: ಚುನಾವಣಾ ಬಾಂಡ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯು ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆಗೆ ಇನ್ನೂ ಬಾಕಿಯಿದ್ದರೂ ಕೇಂದ್ರ ವಿತ್ತ ಸಚಿವಾಲಯದ ಅಧೀನದ ಆರ್ಥಿಕ ವ್ಯವಹಾರಗಳ ಇಲಾಖೆ (ಡಿಇಎ)ಯ ಇತ್ತೀಚಿನ ಅಂಕಿಅಂಶಗಳು ಬಾಂಡ್ಗಳ ಮಾರಾಟವು ಈಗ 10,000 ಕೋ.ರೂ.ಗಳ ಗಡಿಯನ್ನು ದಾಟಿದೆ ಎನ್ನುವುದನ್ನು ಬಹಿರಂಗಗೊಳಿಸಿವೆ.

ಬಾಂಡ್ಗಳನ್ನು ಖರೀದಿಸುವ ದಾನಿಗಳ ಗುರುತು ಗೋಪ್ಯವಾಗಿಯೇ ಉಳಿಯುವುದರಿಂದ ಈ ಬಾಂಡ್ಗಳ ಸುತ್ತಲಿನ ‘ಅಪಾರದರ್ಶಕತೆ’ಯ ಬಗ್ಗೆ ಹಲವಾರು ಸಾಮಾಜಿಕ ಕಾರ್ಯಕರ್ತರು,ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ವರ್ಷಗಳಿಂದಲೂ ಕಳವಳಗಳನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ.

ಎಸ್ಬಿಐನ ನಿಯೋಜಿತ ಶಾಖೆಗಳಲ್ಲಿ ಈ ಬಾಂಡ್ಗಳ ಮಾರಾಟ ಮತ್ತು ನಗದೀಕರಣದ ಮೇಲೆ ನಿಗಾಯಿಟ್ಟಿರುವ ಆರ್ಟಿಐ ಕಾರ್ಯಕರ್ತ ನಿವೃತ್ತ ಕಮೊಡೋರ್ ಲೋಕೇಶ ಬಾತ್ರಾ ಅವರ ಪ್ರಕಾರ ಜು.1ರಿಂದ ಜು.10ರವರೆಗಿನ 21ನೇ ಹಂತದ ಅವಧಿಯಲ್ಲಿ ಬಾಂಡ್ಗಳ ಮಾರಾಟವು 10,000 ಕೋ.ರೂ.ಗಳ ಗಡಿಯನ್ನು ದಾಟಿದೆ.

ಡಿಇಎ ಆರ್ಟಿಐ ಕಾಯ್ದೆಯಡಿ ಬಾತ್ರಾಗೆ ನೀಡಿರುವ ಉತ್ತರದಂತೆ ಎಸ್ಬಿಐನ 29 ಅಧಿಕೃತ ಶಾಖೆಗಳ ಪೈಕಿ ಏಳರಲ್ಲಿ ಈ ಬಾಂಡ್ಗಳ ಮಾರಾಟ ಮತ್ತು ನಗದೀಕರಣ ನಡೆದಿತ್ತು. ಈವರೆಗಿನ ಎಲ್ಲ 21 ಹಂತಗಳಲ್ಲಿ ಒಟ್ಟು 10,246 ಕೋ.ಅಥವಾ ನಿಖರವಾಗಿ ಹೇಳಬೇಕೆಂದರೆ 10,246,22,51,000 ರೂ.ಮೌಲ್ಯದ ಬಾಂಡ್ಗಳು ಮಾರಾಟವಾಗಿವೆ.

ಚುನಾವಣಾ ಬಾಂಡ್ಗಳು 1,000 ರೂ.,10,000 ರೂ.,ಒಂದು ಲಕ್ಷ ರೂ.,10 ಲಕ್ಷ ರೂ. ಮತ್ತು ಒಂದು ಕೋಟಿ ರೂ.ಮುಖಬೆಲೆಗಳಲ್ಲಿ ಮಾರಾಟವಾಗುತ್ತವೆ. 2018,ಜನವರಿಯಲ್ಲಿ ಯೋಜನೆಯು ಅಧಿಸೂಚಿತಗೊಂಡಾಗಿನಿಂದ ಒಟ್ಟು 18,779 ಚುನಾವಣಾ ಬಾಂಡ್ಗಳನ್ನು ಮಾರಾಟ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X