Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೃಹ ಸಚಿವರ ಕಚೇರಿಗೆ ರಕ್ಷಣೆ ಇಲ್ಲ ಎಂದರೆ...

ಗೃಹ ಸಚಿವರ ಕಚೇರಿಗೆ ರಕ್ಷಣೆ ಇಲ್ಲ ಎಂದರೆ ಸಾರ್ವಜನಿಕರ ಸ್ಥಿತಿ ಏನು?: ಪ್ರಿಯಾಂಕ್ ಖರ್ಗೆ

''ಸರ್ಕಾರ ಮೊದಲು ಬಿಜೆಪಿ ಕಾರ್ಯಕರ್ತರನ್ನು ನಿಯಂತ್ರಿಸಲಿ''

ವಾರ್ತಾಭಾರತಿವಾರ್ತಾಭಾರತಿ30 July 2022 3:42 PM IST
share
ಗೃಹ ಸಚಿವರ ಕಚೇರಿಗೆ ರಕ್ಷಣೆ ಇಲ್ಲ ಎಂದರೆ ಸಾರ್ವಜನಿಕರ ಸ್ಥಿತಿ ಏನು?: ಪ್ರಿಯಾಂಕ್ ಖರ್ಗೆ

ಬೆಂಗಳೂರು, ಜು.30: 'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಕಾಂಗ್ರೆಸ್ ಪಕ್ಷ ಕಳೆದ ಎರಡು ಮೂರು ದಿನಗಳಿಂದ ಹೇಳುತ್ತಲೆ ಬಂದಿದೆ. ಆದರೆ ಮುಖ್ಯಮಂತ್ರಿಗಳು, ಗೃಹ ಸಚಿವರು, ಬಿಜೆಪಿ ಮಂತ್ರಿಗಳು ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಹೇಳುತ್ತಿದ್ದಾರೆ. ಇಂದು ಬಿಜೆಪಿಯ ಕಾರ್ಯಕರ್ತರೇ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಿ, ಗೇಟ್ ದಾಟಿ ಮನೆಗೆ ನುಗ್ಗಿ ಪ್ರತಿಭಟನೆ ನಡೆಯುತ್ತದೆ ಎಂದರೆ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂದು ತಿಳಿಯುತ್ತದೆ ' ಎಂದು ರಾಜ್ಯ ಸರಕಾರದ ವಿರುದ್ಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. 

ಈ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ' ಹಾದಿ ಬೀದಿಯಲ್ಲಿ ಹೋಗುವವರು ಪ್ರತಿಭಟನೆ ಮಾಡಿಲ್ಲ. ಬಿಜೆಪಿಯ ವಿದ್ಯಾರ್ಥಿ ಸಂಘಟನೆ, ಗೃಹ ಸಚಿವರ ಕಚೇರಿಗೆ ನುಗ್ಗಿ ದಾಳಿ ಮಾಡಿದ್ದಾರೆ. ಗೃಹ ಸಚಿವರಿಗೆ ತಮ್ಮ ಪಕ್ಷದಲ್ಲಿರುವ ಮಾಹಿತಿ ಪಡೆಯಲು ಆಗದಿದ್ದರೆ ಜನರಿಗೆ ಹೇಗೆ ರಕ್ಷಣೆ ನೀಡುತ್ತಾರೆ. ಅವರ ಕಚೇರಿಗೆ ರಕ್ಷಣೆ ಇಲ್ಲ ಎಂದರೆ ಸಾರ್ವಜನಿಕರ ಸ್ಥಿತಿ ಏನು?' ಎಂದು ಪ್ರಶ್ನೆ ಮಾಡಿದರು. 

'ಈ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದ್ದು, ಗೃಹ ಸಚಿವರು, ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು. ಮೊನ್ನೆ ಮಂಗಳೂರಲ್ಲಿ, ಎಂದು ಬೆಂಗಳೂರಲ್ಲಿ ಇಂತಹ ಘಟನೆ ನಡೆದಿದೆ.  ಬಿಜೆಪಿ ಸಂಸದರು ಎಲ್ಲರಿಗೂ ಭದ್ರತೆ ನೀಡಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಇಂದು ಹೇಗೆ ಬಿಜೆಪಿ ಕಚೇರಿಗಳಿಗೆ ಭದ್ರತೆ ಒದಗಿಸಿದ್ದಾರೆ? ಸರ್ಕಾರ ಮೊದಲು ತಮ್ಮ ಕಾರ್ಯಕರ್ತರನ್ನು ನಿಯಂತ್ರಿಸಲಿ' ಎಂದು ಕಿಡಿಗಾರಿದರು. 

'ತೇಜಸ್ವಿ ಸೂರ್ಯ ಅವರು ಎಲ್ಲರಿಗೂ ಭದ್ರತೆ ನೀಡಲು ಆಗುವುದಿಲ್ಲ ಎಂದಾದರೆ ಅವರು ಹೇಗೆ ಭದ್ರತೆ ಪಡೆದಿದ್ದಾರೆ? ಅವರು ಹೇಳಿದ್ದು ಸರಿಯಾಗಿದ್ದರೆ, ಬಿಜೆಪಿ ಯುವ ಮೋರ್ಚಾ ಸದಸ್ಯರು ಅವರ ರಾಷ್ಟ್ರೀಯ ಅಧ್ಯಕ್ಷರ ಮಾತು ಕೇಳುತ್ತಿಲ್ಲ. ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ನೀವು ಕಾರ್ಯಕರ್ತರನ್ನು ಯಾವ ಮಟ್ಟಿಗೆ ದುರುಪಯೋಗ ಮಾಡಿಕೊಂಡಿದ್ದೀರಿ ಎಂಬುದಕ್ಕೆ ಇದೇ ಸಾಕ್ಷಿ. ಪರಿಸ್ಥಿತಿ ಕೈ ಮೀರಲು ತತ್ವ ಸಿದ್ಧಾಂತ ಕಾರಣ. ಈಗಲಾದರೂ ಸರ್ಕಾರ ಎಚ್ಚೆತ್ತು, ಕರ್ನಾಟಕ ರಾಜ್ಯವನ್ನು ಈ ಹಿಂದಿನಂತೆ ಉದ್ಯೋಗ ಸೃಷ್ಟಿಯಲ್ಲಿ ನಂ.1 ಸ್ಥಾನಕ್ಕೆ ತರಬೇಕು. ರಾಜಕೀಯಕ್ಕೆ ಕೋಮು ವಿಷ ಬೀಜ ಬಿತ್ತುವುದನ್ನು ಬಿಟ್ಟು ರಾಜ್ಯವನ್ನು ಶಾಂತಿ ತೋಟವನ್ನಾಗಿ ಮಾಡಿ. ಜನರ ಮೇಲೆ ಗಮನಹರಿಸಿ' ಎಂದು ಸಲಹೆ ನೀಡಿದರು.

ಎಬಿವಿಪಿ ಹೆಸರಲ್ಲಿ ಪ್ರತಿಭಟನೆ ಆಗುತ್ತಿದೆ ಎಂಬ ಬಿಜೆಪಿ ನಾಯಕರ ಮಾತಿನ ಬಗ್ಗೆ ಕೇಳಿದ ಪ್ರಶ್ನೆಗೆ, ' ಗೃಹ ಸಚಿವರ ಕಚೇರಿಗೆ ಜನ ನುಗ್ಗಿದ್ದು, ಗುಪ್ತಚರ ಇಲಾಖೆ ಕತ್ತೆ ಕಾಯುತ್ತಿದೆಯಾ? ಪೊಲೀಸ್ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಇದು ಯಾವುದೋ ಸಣ್ಣ ಕಚೇರಿ ಮೇಲಿನ ದಾಳಿ, ಬಿಜೆಪಿಯವರು ಮೈ ಮೇಲೆ ಪ್ರಜ್ಞೆ ಇಟ್ಟುಕೊಂಡು ಮಾತನಾಡಲಿ. ಗೃಹ ಸಚಿವ ಕಚೇರಿಗೆ ಇಷ್ಟೇನಾ ಭದ್ರತೆ? ಎಬಿವಿಪಿ ಹೆಸರಲ್ಲಿ ಮಾಡಿರುವುದೇ ಆದರೆ ಇದು ಗುಪ್ತಚರ ಇಲಾಖೆ ವೈಫಲ್ಯ ಅಲ್ಲವೇ? ಮುಖ್ಯಮಂತ್ರಿಗಳು ಇದನ್ನು ಸಂಘಟಿತ ಅಪರಾಧ ಎನ್ನುತ್ತಾರೆ. ಹಾಗಾದರೆ ಗುಪ್ತಚರ ಇಲಾಖೆ ಕೆಲಸ ಏನು?  ಇದು ಸರ್ಕಾರದ ವೈಫಲ್ಯ ಅಲ್ಲವೇ? ' ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕೀಯ ಲಾಭ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ' ಅದು ಹೇಗೆ ಎಂದು ಸ್ಪಷ್ಟಪಡಿಸಲಿ. ನಾವು ಇವರಂತೆ  ಶಿವಮೊಗ್ಗದಲ್ಲಿ ಹರ್ಷ ಕೊಲೆ ಆದಾಗ ಬಿಜೆಪಿ ಸಚಿವರು ಸಂಸದರು ಸೆಕ್ಷನ್ 144 ಉಲ್ಲಂಘನೆ ಮಾಡಿದ್ದರು. ಆಳಂದದಲ್ಲಿ ಬಿಜೆಪಿ ಸಂಸದರು ರಾಜಕೀಯ ಲಾಭಕ್ಕೆ ಸೆಕ್ಷನ್ 144 ಉಲ್ಲಂಘನೆ ಮಾಡಿದ್ದರು. ನಾವು ಎಲ್ಲಿ ರಾಜಕೀಯ ಮಾಡುತ್ತಿದ್ದೇವೆ? ಶಿವಮೊಗ್ಗದಲ್ಲಿ ಹರ್ಷನಿಗಾಗಿ ಈಶ್ವರಪ್ಪ ಮೆರವಣಿಗೆ ಮಾಡಿದ್ದರು. ಈಗ ಪ್ರವೀಣ್ ಮೇಲೆ ಯಾಕೆ ಕನಿಕರ ಇಲ್ಲ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಗೂಬೇ ಕೂರಿಸುತ್ತಾರೆ. ನಾವು ಒಂದು ಬಾರಿ ಪ್ರಚೋದನಕಾರಿ ಹೇಳಿಕೆ ನೀಡಿದ್ದೇಯೇ? ಇವರು ಬಿತ್ತಿದ ವಿಷ ಬೀಜ ಈಗ ಹೆಮ್ಮರವಾಗಿ ಬೆಳೆದಿದ್ದು, ಈಗ ಇವರಿಗೆ ನಿಯಂತ್ರಿಸಲು ಆಗುತ್ತಿಲ್ಲ. ಇವರ ಬೆಂಬಲದ ಮೇಲೆ ನಿಂತಿರುವ ಸಂಘಟನೆಗಳು ಇವರ ವಿರದ್ಧ ಪ್ರತಿಭಟನೆ ಮಾಡುತ್ತಿವೆ. ಕಾಂಗ್ರೆಸ್ ನವರಲ್ಲ ಎಂದ ಅವರು,  ಕಟೀಲ್ ಅವರ ಗಾಡಿ ಅಲ್ಲಾಡಿಸಿದ್ದು, ಸಚಿವ ಸುನೀಲ್ ಹಾಗೂ ಅಂಗಾರ ಅವರಿಗೆ ದಿಗ್ಬಂಧನ ಹಾಕಿದ್ದು ಯಾರು? ಕಾಂಗ್ರೆಸ್ ನವರಾ? ಎಂದು ಪ್ರಶ್ನಿಸಿದರು. 

'ಜವಾಬ್ದಾರಿ ಸ್ಥಾನಮಾನದಲ್ಲಿ ಇದ್ದವರು ಸುಮ್ಮನೆ ಉದಾಫೆಯಾಗಿ ಮಾತನಾಡಲು ನಾಚಿಕೆ ಆಗಬೇಕು ' ಎಂದು ಹರಿಹಾಯ್ದರು.

ಜನಪ್ರತಿನಿಧಿಗಳು ಅಂದಮೇಲೆ ಎಲ್ಲರೂ ಕೋಮುವಾದ ಬಿಟ್ಟು ಕೆಲಸ ಮಾಡಬೇಕಲ್ಲವೇ ಎಂಬ ಪ್ರಶ್ನೆಗೆ, ' ಹರ್ಷ ಸೇರಿದಂತೆ ಬೇರೆ ಹತ್ಯೆ ಆದಾಗ ಕಾನೂನು ಅಡಿಯಲ್ಲಿ ಏನೆಲ್ಲಾ ಮಾಡಬಹುದೋ ಅದನ್ನು ಮಾಡಿದ್ದೇವೆ. ಯಾರಿಗೂ ಪ್ರಚೋದನೆ ನೀಡಿಲ್ಲ. ಸುದಾಯಗಳ ಮಧ್ಯೆ ಅಸೂಯೆ ತಂದಿಲ್ಲ. ಇದನ್ನು ಕಾಂಗ್ರೆಸ್ ಈ ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಯಾರು ಯಾವಾಗ ರಾಜಕೀಯ ಲಾಭ ತೆಗೆದುಕೊಂಡಿದ್ದಾರೆ ಎಂದು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಜಗಳ ಹಚ್ಚಿ ರಾಜಕೀಯ ಲಾಭ ಪಡೆಯುವ ವಿಚಾರದಲ್ಲಿ ನಿಮಗೆ ಇತಿಹಾಸವಿದೆ. ಅದೇ ಇಂದು ನಿಮಗೆ ತಿರುಗು ಬಾಣ ಆಗಿದ್ದು, ಅದನ್ನು ಅರಗಿಸಿಕೊಳ್ಳಲು ನಿಮ್ಮಿಂದ ಆಗುತ್ತಿಲ್ಲ ' ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X