ಪರಿಷತ್ ಉಪ ಚುನಾವಣೆ: ಬಾಬುರಾವ್ ಚಿಂಚನಸೂರು ಬಿಜೆಪಿ ಅಭ್ಯರ್ಥಿ

ಬೆಂಗಳೂರು, ಜು.30: ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹೀಂ ರಾಜೀನಾಮೆಯಿಂದ ತೆರವಾಗಿರುವ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಆ.11ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಬಾಬೂರಾವ್ ಚಿಂಚನಸೂರ್ ಅವರನ್ನು ಆಯ್ಕೆ ಮಾಡಲಾಗಿದೆ.
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಈ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಆ.1 ಕೊನೆಯ ದಿನವಾಗಿದ್ದು, ಆ.2ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಆ.4ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದ್ದು, ಆ.11ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಯಿಂದ ಮತಗಳ ಏಣಿಕೆ ಕಾರ್ಯ ನಡೆಸಿ, ಫಲಿತಾಂಶ ಪ್ರಕಟಿಸಲಾಗುವುದು.
ಕಾಂಗ್ರೆಸ್ ಹಾಗೂ ಜೆಡಿಎಸ್‍ನಿಂದ ಈವರೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಯಾವುದೆ ತೀರ್ಮಾನ ಕೈಗೊಳ್ಳಲಾಗಿಲ್ಲ. ವಿಧಾನಸಭೆಯಲ್ಲಿ ಬಿಜೆಪಿ ಅತೀ ಹೆಚ್ಚು ಸದಸ್ಯರನ್ನು ಹೊಂದಿರುವುದರಿಂದ ಬಾಬೂರಾವ್ ಚಿಂಚನಸೂರ್ ಆಯ್ಕೆ ಬಹುತೇಕ ಖಚಿತವಾಗಿದೆ.

Next Story







