Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಇಟಿ ಫಲಿತಾಂಶ: ಬೆಂಗಳೂರು...

ಸಿಇಟಿ ಫಲಿತಾಂಶ: ಬೆಂಗಳೂರು ವಿದ್ಯಾರ್ಥಿಗಳೇ ಮೇಲುಗೈ

ಆ.5ಕ್ಕೆ ದಾಖಲೆಗಳ ಪರಿಶೀಲನೆ, ಸೆಪ್ಟೆಂಬರ್ ಮೊದಲ ವಾರ ಸೀಟು ಹಂಚಿಕೆ

ವಾರ್ತಾಭಾರತಿವಾರ್ತಾಭಾರತಿ30 July 2022 6:07 PM IST
share
ಸಿಇಟಿ ಫಲಿತಾಂಶ: ಬೆಂಗಳೂರು ವಿದ್ಯಾರ್ಥಿಗಳೇ ಮೇಲುಗೈ

 ಬೆಂಗಳೂರು, ಜು.30: ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಬಾಲಕರು ಮೇಲುಗೈ ಸಾಧಿಸಿದ್ದಾರೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಾಖಲೆಗಳ ಪರಿಶೀಲನೆ ಮತ್ತು ಸೀಟು ಹಂಚಿಕೆಯನ್ನು ಮೊದಲಿಗಿಂತ ಸುಲಭಗೊಳಿಸಲಾಗಿದೆ ಎಂದು ಡಾ. ಸಿ.ಎನ್. ಅಶ್ವತ್ ನಾರಾಯಣ್ ಅವರು ತಿಳಿಸಿದರು.

ಶನಿವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜೂ.16, 17 ಮತ್ತು 18ರಂದು ಸಿಇಟಿ ಪರೀಕ್ಷೆಯನ್ನು ನಡೆಸಲಾಯಿತು. 2,16,559 ಅಭ್ಯರ್ಥಿಗಳು ಸಿಇಟಿಗೆ ಅರ್ಜಿ ಸಲ್ಲಿಸಿದ್ದು, 2,10,829 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಿದ್ದರು. ಇಂಜಿನಿಯರ್ ಕೋರ್ಸಿಗೆ 1,71,656 ಅಭ್ಯರ್ಥಿಗಳು, ಕೃಷಿ ಕೋರ್ಸಿಗೆ 1,39,968 ಅಭ್ಯರ್ಥಿಗಳು, ಪಶುಸಂಗೋಪನೆ ಕೋರ್ಸಿಗೆ 1,42,820 ಅಭ್ಯರ್ಥಿಗಳು, ಯೋಗ ಮತ್ತು ನ್ಯಾಚುರೋಪತಿ ಕೋರ್ಸಿಗೆ 1,42,750 ಅಭ್ಯರ್ಥಿಗಳು ಮತ್ತು ಬಿ.ಫಾರ್ಮ ಹಾಗೂ ಫಾರ್ಮ-ಡಿ ಕೋರ್ಸಿಗೆ 1,74,568 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದರು.

ಯಾವುದಾದರೂ ಅಭ್ಯರ್ಥಿಗೆ ರ್‍ಯಾಂಕ್ನೀಡದಿದ್ದಲ್ಲಿ, ಅಭ್ಯರ್ಥಿಯು ತಮ್ಮ ಅರ್ಹತಾ ಪರೀಕ್ಷೆಯ ಅಂಕಪಟ್ಟಿಯ ಯಥಾ ಪ್ರತಿಯನ್ನು ಹಾಗೂ ತನ್ನ ಎರಡನೇ ವರ್ಷದ ಪಿಯುಸಿ ಫೋಟೋ ಪ್ರತಿಯನ್ನು ಕೆಇಎ ಕಚೇರಿಗೆ ಇಮೇಲ್ keauthority-ka@nic.in ಮೂಲಕ ಅಥವಾ ಖುದ್ದಾಗಿ ಸಲ್ಲಿಸಿ ತಮ್ಮ ರ್ಯಾಂಕ್‍ಗಳನ್ನು ಪಡೆಯಬಹುದು ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ:  ಸಿಇಟಿ ಫಲಿತಾಂಶ ಪ್ರಕಟ: ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯ

ಆಗಸ್ಟ್ 5 ರಿಂದ ದಾಖಲೆಗಳ ಪರಿಶೀಲನೆ: ಆ.5ರಿಂದ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗುತ್ತದೆ. ಆ.1ರಂದು ಇದಕ್ಕೆ ಪ್ರತ್ಯೇಕ ಮಾರ್ಗಸೂಚಿಯನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುತ್ತದೆ. ಅಭ್ಯರ್ಥಿಗಳು ದೂರವಾಣಿ ಮೂಲಕವೂ ಕೆಇಎ ಕಚೇರಿಯನ್ನು ಸಂಪರ್ಕಿಸಲು ಅವಕಾಶ ಮಾಡಿಕೊಡಲಾಗಿದೆ. 

ಡಿಫೆನ್ಸ್, ಕ್ರೀಡಾ ಮತ್ತು ಅಂಗವಿಕಲ ಕೋಟದ ಅಭ್ಯರ್ಥಿಗಳು ಹೊರತುಪಡಿಸಿ ಉಳಿದ ಎಲ್ಲಾ ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ದಾಖಲೆಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಆದಾಯ, ಜಾತಿ, ವ್ಯಾಸಂಗ ಪ್ರಮಾಣ ಪತ್ರ, ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡಿದ ಪ್ರಮಾಣ ಪತ್ರ, ಭಾಷಾ ಅಲ್ಪಸಂಖ್ಯಾತರ ಪ್ರಮಾಣ ಪತ್ರ, ಇತ್ಯಾದಿ ಪ್ರಮಾಣ ಪತ್ರಗಳನ್ನು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳಿಂದ ಆನ್‍ಲೈನ್‍ನಲ್ಲಿ ಪಡೆಯುವ ವ್ಯವಸ್ಥೆ ಮಾಡಲಾಗಿದೆ. ಸಿಬಿಎಸ್, ಐಸಿಎಸ್‍ಸಿ ಹೊರತುಪಡಿಸಿ ರಾಜ್ಯ ಪಠ್ಯಕ್ರಮದಲ್ಲಿ ಪಿಯುಸಿ ಮಾಡಿದವರ ಅಂಕಪಟ್ಟಿಗಳನ್ನು ಕೂಡ ಕೆಇಎ ಆನ್‍ಲೈನ್‍ನಲ್ಲಿ ಪಡೆದು, ಸೀಟು ಹಂಚಿಕೆ ಪ್ರಕ್ರಿಯೆಯನ್ನು ಮಾಡಲಾಗುವುದು. ಡಿಫೆನ್ಸ್, ಕ್ರೀಡಾ ಮತ್ತು ಅಂಗವಿಕಲ ಕೋಟದ ಅಭ್ಯರ್ಥಿಗಳು ಕೆಇಎ ಕಚೇರಿಗೆ ಬಂದು ದಾಖಲೆಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು. 

ಸೆಪ್ಟೆಂಬರ್ ಮೊದಲ ವಾರದಲ್ಲಿ ಸೀಟು ಹಂಚಿಕೆ: ಸೆಪ್ಟೆಂಬರ್ ಮೊದಲ ವಾರದಲ್ಲಿ ಸೀಟು ಹಂಚಿಕೆ ಮಾಡಲು ನಿರ್ಧಾರ ಮಾಡಲಾಗಿದೆ. ಈಗಾಗಲೇ ಕಾಮೆಡ್-ಕೆ ಅವರು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ನೀಟ್ ಫಲಿತಾಂಶ ಇನ್ನೂ ಹೊರಬಂದಿಲ್ಲ. ಅದು ಹೊರಬಂದ ಬಳಿಕ ಸೀಟು ಹಂಚಿಕೆ ಪ್ರಕ್ರಿಯೆ ಆರಂಭಿಸಲಾಗುವುದು.

ಮೂರು ವಿಷಯದಲ್ಲಿ 7 ಕೃಪಾಂಕ: ಈ ವರ್ಷ ಸಿಇಟಿ ಪರೀಕ್ಷೆಯಲ್ಲಿ 7 ಗ್ರೇಸ್ ಮಾಕ್ರ್ಸ್ ನೀಡಲಾಗಿದೆ. ಗಣಿತದಲ್ಲಿ 5, ಭೌತಶಾಸ್ತ್ರದಲ್ಲಿ ಹಾಗೂ ರಸಾಯನಶಾಸ್ತ್ರದಲ್ಲಿ ತಲಾ ಒಂದು ಅಂಕವನ್ನು ಗ್ರೇಸ್ ನೀಡಲಾಗಿದೆ. ಗಣಿತಶಾಸ್ತ್ರದಲ್ಲಿ ಐದು ಪ್ರಶ್ನೆಗಳು ತಪ್ಪಾಗಿ ನಮೂದಾಗಿರುತ್ತದೆ. ಹಾಗಾಗಿ ಈ ಪ್ರಶ್ನೆಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗಿದೆ. ಮುಂದಿನ ಬಾರಿ ಇದನ್ನು ಸರಿಪಡಿಸಿಕೊಳ್ಳಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದರು.

ಎಲ್ಲಾ ವಿಭಾಗದಲ್ಲೂ ರ್‍ಯಾಂಕ್ ಪಡೆದ ಒಂಭತ್ತು ಮಂದಿಯ ಪಟ್ಟಿಯನ್ನು ಪ್ರಕಟಿಸಲಾಗಿದೆ. ನ್ಯಾಯಾಲಯದಿಂದ ಆದೇಶ ಹೊರ ಬರುವ ನಿರೀಕ್ಷೆಯಿಂದ 10ನೇ ರ್‍ಯಾಂಕ್ಅನ್ನು ಕಾಯ್ದಿರಿಸಲಾಗಿದೆ. ನ್ಯಾಯಾಲಯದ ಆದೇಶ ಬಂದ ಬಳಿಕ 10ನೇ ರ್‍ಯಾಂಕ್ಅನ್ನು ಪ್ರಕಟಿಸಲಾಗುತ್ತದೆ ಎಂದು ಕೆಇಎ ನಿರ್ದೇಶಕಿ ರಮ್ಯಾ ಸ್ಪಷ್ಟಪಡಿಸಿದರು.


 ರ್‍ಯಾಂಕ್ ಪಟ್ಟಿಯಲ್ಲಿ ಬೆಂಗಳೂರು ವಿದ್ಯಾರ್ಥಿಗಳೇ ಮೇಲುಗೈ [ ಟಾಪರ್ಸ್ ಗಳ ಪಟ್ಟಿ ಇಲ್ಲಿದೆ]

ಮೊದಲ 9 ರ್‍ಯಾಂಕ್ ಪಟ್ಟಿಯಲ್ಲಿ ಬೆಂಗಳೂರಿನ ವಿದ್ಯಾರ್ಥಿಗಳೇ ಹೆಚ್ಚಿನ ರ್‍ಯಾಂಕ್ ಪಡೆದಿದ್ದು, ಉಡುಪಿಯ ಇಬ್ಬರು, ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಹಾಗೂ ತುಮಕೂರಿನ ಒಬ್ಬರು ರ್‍ಯಾಂಕ್ ಪಟ್ಟಿಯಲ್ಲಿದ್ದಾರೆ. ಸಿಬಿಎಸ್‍ಸಿ ವಿದ್ಯಾರ್ಥಿಗಳು ಹೆಚ್ಚಿನ ರ್‍ಯಾಂಕ್ ಗಳಿಸಿದ್ದಾರೆ. ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಟಾಪ್ 10 ರ್‍ಯಾಂಕ್ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಇಂಜಿನಿಯರ್ ವಿಭಾಗದಲ್ಲಿ ಅಪೂರ್ವ್ ತಂಡನ್, ಸಿದ್ಧಾರ್ಥ ಸಿಂಗ್, ಆತ್ಮಕೂರಿ ವೆಂಕಟ ಮಾಧವ ಶ್ರೀರಾಮ್, ಶಿರೀಷ್ ಆರ್.ಕೆ., ವಿಶಾಲ್ ಬೈಸಾನಿ, ಸಾಗರ್ ಆರ್.ವಿ., ಯೋಗ ಮತ್ತು ನ್ಯಾಚುರೋಪತಿ ವಿಭಾಗದಲ್ಲಿ ಎಚ್. ರಿಷಿಕೇಶ್ ನಾಗಭೂಷಣ್ ಗಂಗುಲಿ, ವಿ. ರಾಜೇಶ್ ವೀಣಾಧರ್ ಶೆಟ್ಟಿ, ಕೃಷ್ಣ ಎಸ್.ಆರ್., ವಿ.ರಿಷನ್ ವೀಣಾಧರ್ ಶೆಟ್ಟಿ, ವಿಶಾಲ್ ಬಿ., ಕೃಷಿ ವಿಭಾಗದಲ್ಲಿ ಅರುಣ್ ರವಿಶಂಕರ್, ಸುಮೀತ್ ಎಸ್ ಪಾಟೀಲ್, ಸಂದೀಪ್ ವೈ.ಎಂ.,  ಹಿತೈಶ್ ಲಕ್ಷ್ಮೀಕಾಂತ್, ಮನೋಜ್ ಎನ್. ಕಿಶೋರ್ ಎಂ. ವೆಟರ್ನರಿ ಸೈನ್ಸ್‍ನಲ್ಲಿ ಎಚ್. ರಿಷಿಕೇಶ್ ನಾಗಭೂಷಣ್ ಗಂಗೂಲಿ, ಮನೀಶ್ ಎಸ್.ಎ., ಶುಭ ಕೌಶಿಕ್, ಕೃಷ್ಣ ಎಸ್.ಆರ್., ವಿ.ವಿ.ರಿಷನ್ ವೀಣಾಧರ್ ಶೆಟ್ಟಿ, ವಿ. ರಾಜೇಶ್ ವೀಣಾಧರ್ ಶೆಟ್ಟಿ, ಬಿ-ಫಾರ್ಮದಲ್ಲಿ ಶಿಶಿರ್ ಆರ್.ಕೆ., ಎಚ್. ರಿಷಿಕೇಶ್ ನಾಗಭೂಷಣ್ ಗಂಗುಲಿ, ಅಪೂರ್ವ್ ತಂಡನ್, ಆತ್ಮಕೂರಿ ವೆಂಕಟ ಮಾಧವ ಶ್ರೀರಾಮ್, ಮನೀಶ್ ಎಸ್.ಎ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.

24 ಸಾವಿರ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣನೆಗೆ ಇಲ್ಲ

ಸಾಮಾನ್ಯವಾಗಿ ಕೆಇಎನಲ್ಲಿ ಸಿಇಟಿ ಮತ್ತು ದ್ವಿತೀಯ ಪಿಯುಸಿ-ಎರಡೂ ಪರೀಕ್ಷೆಗಳ ಅಂಕಗಳನ್ನು ಆಧಾರವಾಗಿ ಇಟ್ಟುಕೊಂಡೇ ರ್ಯಾಂಕಿಂಗ್ ನಿರ್ಧರಿಸಲಾಗುತ್ತದೆ. ಆದರೆ ಕಳೆದ ವರ್ಷ ದ್ವಿತೀಯ ಪಿಯುಸಿ ಉತ್ತೀರ್ಣರಾದ 24 ಸಾವಿರ ವಿದ್ಯಾರ್ಥಿಗಳು ಈ ಬಾರಿಯೂ ಸಿಇಟಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಳೆದ ಬಾರಿ ಕೋವಿಡ್ ಇದ್ದ ಕಾರಣ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಿರಲಿಲ್ಲ. ಹಾಗಾಗಿ ಈ ವಿದ್ಯಾರ್ಥಿಗಳ ರ್ಯಾಂಕಿಂಗ್ ಅನ್ನು ಕೇವಲ ಸಿಇಟಿ ಪರೀಕ್ಷೆಯ ಅಂಕಗಳನ್ನು ಆಧರಿಸಿಯೇ ನಿರ್ಧರಿಸಲಾಗಿದೆ. ಆದರೆ ಅವರೆಲ್ಲರೂ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಸಿಇಟಿ ರ್ಯಾಂಕಿಂಗ್ ಪ್ರಕಟಿಸಿ ಎನ್ನುವ ಒತ್ತಾಯ ಮಾಡುತ್ತಿದ್ದು, ಮನವಿಯನ್ನು ಪರಿಗಣಿಸಿದರೆ ಕಳೆದ ಬಾರಿ ಕೇವಲ ಸಿಇಟಿ ಪರೀಕ್ಷೆಯಲ್ಲಿ ರ್ಯಾಂಕಿಂಗ್ ಪಡೆದು ಈಗ ಬೇರೆ ಬೇರೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಅನ್ಯಾಯ ಮಾಡಿದಂತೆ ಆಗುತ್ತದೆ. 

-ರಮ್ಯಾ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X