Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಫಾಝಿಲ್,...

ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಫಾಝಿಲ್, ಮಸೂದ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ಘೋಷಣೆ

ಶಾಂತಿ ಸಭೆಗೆ ಮುಸ್ಲಿಂ ಸಂಘಟನೆಗಳ ಬಹಿಷ್ಕಾರ

ವಾರ್ತಾಭಾರತಿವಾರ್ತಾಭಾರತಿ30 July 2022 6:18 PM IST
share
ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಫಾಝಿಲ್, ಮಸೂದ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ಘೋಷಣೆ

ಮಂಗಳೂರು, ಜು.30: ದ.ಕ.ಜಿಲ್ಲೆಯಲ್ಲಿ ಮೊನ್ನೆ ನಡೆದ ಕೊಲೆ ಪ್ರಕರಣದ ಹಿನ್ನಲೆಯಲ್ಲಿ ದ.ಕ.ಜಿಲ್ಲಾಡಳಿತ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಶಾಂತಿ ಸಭೆಯನ್ನು ಮುಸ್ಲಿಂ ಸಂಘಟನೆಗಳು ಬಹಿಷ್ಕರಿಸಿವೆ. ಈ ಮಧ್ಯೆ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್‌ರ ಸ್ವಗೃಹದಲ್ಲಿ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆದು ಮೃತ ಬೆಳ್ಳಾರೆಯ ಮುಹಮ್ಮದ್ ಮಸೂದ್ ಮತ್ತು ಮಂಗಳಪೇಟೆಯ ಮುಹಮ್ಮದ್ ಫಾಝಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಿತು.

ಜಿಲ್ಲೆಯಲ್ಲಿ ನಡೆದ ಮೂರು ಅಮಾಯಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೇವಲ ಪ್ರವೀಣ್ ನೆಟ್ಟಾರು ಬಿಜೆಪಿ ಕಾರ್ಯಕರ್ತನ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ 25 ಲಕ್ಷ ರೂ. ಪರಿಹಾರ ನೀಡಿರುವುದನ್ನು ಮತ್ತು ಉಳಿದ ಇಬ್ಬರು ಅಮಾಯಕ ಮುಸ್ಲಿಮರ ಮನೆಗೆ ಭೇಟಿ ನೀಡದೆ ಮುಖ್ಯಮಂತ್ರಿಯವರ ಅಮಾನವೀಯ ನಿಲುವಿಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಯಿತು. ಅಲ್ಲದೆ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮಸೂದ್ ಮತ್ತು ಫಾಝಿಲ್‌ನ ಕುಟುಂಬಸ್ಥರಿಗೆ ತಲಾ 30 ಲಕ್ಷ ರೂ. ಸಹಾಯ ಧನ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಲ್ಲದೆ ಪ್ರಕರಣದ ಬಗ್ಗೆ ಕುಟುಂಬಸ್ಥರಿಗೆ ಕಾನೂನಿನ ನೆರವು ನೀಡಲು ನಿರ್ಣಯಿಸಲಾಯಿತು.

ಜಿಲ್ಲೆಯ ಸಮಸ್ತ ನಾಗರಿಕರು ಶಾಂತಿಯನ್ನು ಕಾಪಾಡಬೇಕು ಮತ್ತು ಮೃತಪಟ್ಟ ಮೂವರು ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವನು ಅನುಗ್ರಹಿಸಲೆಂದು ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ಸಭೆಯಲ್ಲಿ ಸಾಂತ್ವನ ನೀಡಿದರು.

ಸಭೆಯಲ್ಲಿ ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಮಾಜಿ ಶಾಸಕ ಮೊಯ್ದಿನ್ ಬಾವಾ, ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ.ಎಂ. ಮುಮ್ತಾಝ್ ಅಲಿ, ಕೆ. ಅಶ್ರಫ್, ಹನೀಫ್ ಹಾಜಿ ಬಂದರ್, ಸೈಯದ್ ಅಹ್ಮದ್ ಬಾಷಾ ತಂಙಳ್ ಮತ್ತಿತರರು ಉಪಸ್ಥಿತರಿದ್ದರು.

ದ.ಕ.ಮತ್ತು ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ದ.ಕ.ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ, ಮುಸ್ಲಿಂ ವರ್ತಕರ ಸಂಘ, ಮುಸ್ಲಿಂ ಜಸ್ಟೀಸ್ ಫೋರಂ ಕರ್ನಾಟಕ ಮತ್ತಿತರ ಸಂಘಟನೆಗಳು ಶಾಂತಿ ಸಭೆಯನ್ನು ಬಹಿಷ್ಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X