ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ

ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಪ್ರಕರಣದ ಇಬ್ಬರು ಆರೋಪಿಗಳಾದ ಝಾಕೀರ್ ಸವಣೂರು ಹಾಗೂ ಶಫೀಕ್ ಬೆಳ್ಳಾರೆಯನ್ನು ಬಂಧಿಸಿ ಗುರುವಾರ ಪುತ್ತೂರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಶುಕ್ರವಾರ ಪೊಲೀಸರು ಬಂಧಿತ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಕೇಳಿದ ಹಿನ್ನಲೆಯಲ್ಲಿ ಹೆಚ್ಚುವರಿ ವಿಚಾರಣೆಗಾಗಿ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
Next Story