ಇಂದಿರಾನಗರ: ವಿಶ್ವ ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆ

ಉಡುಪಿ, ಜು.30: ಚೈಲ್ಡ್ ಲೈನ್-1098 ಉಡುಪಿ ವತಿಯಿಂದ ವಿಶ್ವ ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆಯ ಪ್ರಯುಕ್ತ ಇಂದಿರಾನಗರದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಕ್ಕಳ ಕಳ್ಳ ಸಾಗಾಣಿಕೆಯ ಕುರಿತು ಅರಿವು ಕಾರ್ಯಕ್ರಮವನ್ನು ಹ್ಮುಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ರೈಲ್ವೆ ರಕ್ಷಣಾ ಪಡೆ ಇನ್ಸಪೆಕ್ಟರ್ ಆಗಿರುವ ಪಿ.ಮಧುಸೂದನ್, ವಿದ್ಯಾರ್ಥಿಗಳಿಗೆ ಮಕ್ಕಳ ಕಳ್ಳ ಸಾಗಾಣಿಕೆ ಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವನ್ನು ಮೂಡಿಸಿದರು. ಇದಕ್ಕೆ ಪೂರಕವಾಗಿ ಮಕ್ಕಳು ಕಡ್ಡಾಯವಾಗಿ ಶಿಕ್ಷಣವನ್ನು ಪಡೆಯಬೇಕು.
ತಮ್ಮನ್ನು ತಾವು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ವಿಷಯಗಳಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದರು. ಅಲ್ಲದೇ ಮಕ್ಕಳಿಗೆ ಯಾವುದೇ ರೀತಿಯ ಸಮಸ್ಯೆಯಾದಲ್ಲಿ ಚೈಲ್ಡ್ ಲೈನ್-1098 ಅಥವಾ ಪೋಲಿಸರಿಗೆ ಕರೆ ಮಾಡಿ ಸಹಾಯವನ್ನು ಪಡೆಯಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಇಂದಿರಾನಗರ ಸರಕಾರಿ ಪ್ರೌಢಶಾಲೆ ಮುಖ್ಯೋಪಾ ಧ್ಯಾಯರು ಉಪಸ್ಥಿತರಿದ್ದರು. ಚೈಲ್ಡ್ ಲೈನ್-1098 ಉಡುಪಿಯ ನಿರ್ದೇಶಕ ರಾಮಚಂದ್ರ ಉಪಾಧ್ಯಾಯರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ರೈಲ್ವೆ ರಕ್ಷಣಾ ಪಡೆ ಉಡುಪಿ, ಸರಕಾರಿ ಪ್ರೌಢಶಾಲೆ ಇಂದಿರಾ ನಗರದ ಶಿಕ್ಷಕರು, ಚೈಲ್ಡ್ ಲೈನ್-1098 ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.