ಫಾಝಿಲ್ ಹತ್ಯೆ ಪ್ರಕರಣ: ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್ ಕುಮಾರ್ ನಿಯೋಜನೆ

ಮಂಗಳೂರು, ಜು.31: ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ನಡೆದ ಮುಹಮ್ಮದ್ ಫಾಝಿಲ್ ಅವರ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅವರನ್ನು ನಿಯೋಜಿಸಲಾಗಿದೆ.
ಪ್ರಕರಣದ ತನಿಖೆಯನ್ನು ಉನ್ನತ ಅಧಿಕಾರಿಗಳಿಂದ ನಡೆಸುವಂತೆ ಫಾಝಿಲ್ ಅವರ ತಂದೆ ಮನವಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಎಸಿಪಿಯನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
Next Story