ದ.ಕ.ಜಿಲ್ಲೆಯ ಕೆಲವು ಕಡೆ ಬಿಗಿ ಬಂದೋಬಸ್ತ್

ಫೈಲ್ ಫೋಟೊ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಮೂವರು ಯುವಕರ ಕೊಲೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ನಡೆಸಲಾಗುತ್ತಿರುವ ಪೊಲೀಸ್ ಬಿಗು ಬಂದೋಬಸ್ತ್ ಮುಂದುವರಿಸಲಾಗಿದೆ.
ರವಿವಾರ ಯಾವುದೇ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಕೋಡಿಕೆರೆ, ಕಾಟಿಪಳ್ಳ ಸಹಿತ ಹಲವು ಕಡೆಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.
ರಾತ್ರಿ ನಿರ್ಬಂಧ ಇರುವ ಹಿನ್ನೆಲೆಯಲ್ಲಿ ಸಂಜೆ 6ರ ವೇಳೆಗೆ ಜನರು ಮನೆಗೆ ತೆರಳುತ್ತಿದ್ದುದು ಕಂಡು ಬಂತು. ಬಹುತೇಕ ಕಡೆಗಳಲ್ಲಿ ಸಂಜೆ 6ರ ಬಳಿಕ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಸೂಚಿಸುತ್ತಿದ್ದಾರೆ. ಅವಧಿ ಮೀರಿ ತೆರಳುವ ವಾಹನಿಗರ ತಪಾಸಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story