Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತಾರತಮ್ಯ ಬಿಟ್ಟು ರಾಜ್ಯದ ಆರು ಕೋಟಿ...

ತಾರತಮ್ಯ ಬಿಟ್ಟು ರಾಜ್ಯದ ಆರು ಕೋಟಿ ಜನತೆಯ ಸರಕಾರದಂತೆ ವರ್ತಿಸಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ1 Aug 2022 10:34 AM IST
share
ತಾರತಮ್ಯ ಬಿಟ್ಟು ರಾಜ್ಯದ ಆರು ಕೋಟಿ ಜನತೆಯ ಸರಕಾರದಂತೆ ವರ್ತಿಸಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಆಗ್ರಹ

ಉಡುಪಿ, ಆ.1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೇ ಕೆಲವು ದಿನಗಳ ಅಂತರದಲ್ಲಿ ಮಸೂದ್, ಪ್ರವೀಣ್ ಹಾಗೂ ಫಾಝಿಲ್ ಎಂಬ ಮೂವರು ಯುವಕರ ಅತ್ಯಮೂಲ್ಯ ಜೀವಗಳನ್ನು ದ್ವೇಷದ ರಾಜಕೀಯವು ಹೊಸಕಿ ಹಾಕಿದೆ. ಈ ಕೊಲೆಗಳು ಆ ಯುವಕರ ಕುಟುಂಬಗಳನ್ನು ದುಃಖದ ಮಡುವಿನಲ್ಲಿ ಮುಳಗಿಸಿದ್ದಲ್ಲದೆ ಆ ಕುಟುಂಬಗಳ ಆಧಾರ ಸ್ತಂಭಗಳನ್ನು ಕೆಡವಿಹಾಕಿ ಅತಂತ್ರ ಸ್ಥಿತಿಗೆ ದೂಡಿದೆ. ಇಷ್ಟೇ ಅಲ್ಲ ಸಮಾಜದಲ್ಲಿ ದ್ವೇಷ, ಅಪನಂಬಿಕೆಗಳಿಗೆ ಇಂಧನವನ್ನು ಸುರಿದು ಜನಸಾಮಾನ್ಯರಲ್ಲಿ ಭಯ ಮತ್ತು ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ಈ ಸಮಾಜಘಾತುಕ ಕೃತ್ಯಗಳನ್ನು ಮತ್ತು ಸರಕಾರದ ಭದ್ರತಾಲೋಪಗಳನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಅಧ್ಯಕ್ಷ ಕೋಟ ಇಬ್ರಾಹೀಂ ಸಾಹೇಬ್ ಹೇಳಿದ್ದಾರೆ.

 ಇದೇ ಸಂದರ್ಭದಲ್ಲಿ ರಾಜ್ಯ ಸರಕಾರದ ಪಕ್ಷಪಾತದಿಂದ ಕೂಡಿದ ನಿಲುವೂ ಪ್ರಶ್ನಾರ್ಹ. ರಾಜ್ಯದ ಆರು ಕೋಟಿ ಜನರ ಮುಖ್ಯಮಂತ್ರಿ ಎಂಬುದನ್ನು ಮರೆತು ಕೇವಲ ಒಂದು ವರ್ಗದ ಮುಖ್ಯಮಂತ್ರಿಯಂತೆ ಬಸವರಾಜ ಬೊಮ್ಮಾಯಿ ವರ್ತಿಸುತ್ತಿರುವುದು ರಾಜ್ಯದ ಭವಿಷ್ಯವನ್ನು ಅಂಧಕಾರದತ್ತ ತಳ್ಳುವಂತಿದೆ. ಬೆಳ್ಳಾರೆಯ ಕೊಲೆಗೈಯಲ್ಪಟ್ಟ ಪ್ರವೀಣನ ಮನೆ ಭೇಟಿ ನೀಡಿ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಇದಕ್ಕಿಂತ ಮೊದಲು ಕೊಲೆಯಾದ ತರುಣ ಮಸೂದ್ ಕುಟುಂಬಕ್ಕೆ ಪರಿಹಾರ ಘೋಷಿಸುವುದು ಬಿಡಿ ಆತನ ಮನೆಗೆ ಭೇಟಿ ನೀಡಿ ಕುಟುಂಬಸ್ಥರನ್ನು ಸಂತೈಸು ಪ್ರಯತ್ನನ್ನು ಮಾಡಲಿಲ್ಲ. ಮೃತ ಯುವಕ ಫಾಝಿಲ್ ಕುಟುಂಬಕ್ಕೂ ಯಾವುದೇ ಪರಿಹಾರ ಘೋಷಣೆ ಮಾಡದಿರುವುದು ಖಂಡನೀಯ.

ನಾಡಿನಲ್ಲಿ ಶಾಂತಿ ಸುವ್ಯವಸ್ಥೆ ಖಾತ್ರಿ ಪಡಿಸಬೇಕಾದ ಜವಾಬ್ದಾರಿಯ ಸ್ಥಾನದಲ್ಲಿರುವ ಗೃಹ ಸಚಿವರು, ಬೊಮ್ಮಾಯಿ ಸಂಪುಟದ ಇತರ ಸಚಿವರು, ಆಡಳಿತ ನಡೆಸುತ್ತಿರುವ ಬಿಜೆಪಿ ಕೆಲವು ಪ್ರಮುಖರು ನೀಡುತ್ತಿರುವ ಕೆಲವು ಹೇಳಿಕೆಗಳು ರಾಜ್ಯದ ಶಾಂತಿ ಸುವ್ಯವಸ್ಥೆಗೆ ವಿರುದ್ಧವಾಗಿದ್ದು, ಜನಜೀವನವನ್ನು ಇನ್ನಷ್ಟು ಗೊಂದಲಮಯಗೊಳಿಸಿದೆ. ಆದ್ದರಿಂದ ರಾಜ್ಯದ ಆಡಳಿತದ ಹೊಣೆಹೊತ್ತವರು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸರಕಾರ ಮತ್ತು ಪೋಲಿಸ್ ವ್ಯವಸ್ಥೆ ಜವಾಬ್ದಾರಿಯುತವಾಗಿ ನಡೆದುಕೊಂಡು ಆದಷ್ಟು ಬೇಗ ಕರಾವಳಿಯ ಹಾಗೂ ನಾಡಿನ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿ ಜನಸಾಮಾನ್ಯರಿಗೆ ಸೂಕ್ತ ಭದ್ರತೆಯನ್ನು ನೀಡಿ ವಾತವರಣವನ್ನು ತಿಳಿಗೊಳಿಸಬೇಕು. ಇದೇ ಸಂದರ್ಭದಲ್ಲಿ ಕೊಲೆಗಾರರು ಮತ್ತು ಸಮಾಜದ್ರೋಹಿ ಶಕ್ತಿಗಳ ವಿರುದ್ಧ ತನಿಖೆಯನ್ನು ತೀವ್ರಗೊಳಿಸಿ ತಪ್ಪಿತಸ್ಥರನ್ನು ಕಾರಾಗೃಹಕ್ಕೆ ತಳ್ಳಬೇಕು. ಶಾಂತಿ ಕದಡುವ ಉದ್ರೇಕಕಾರಿ  ಭಾಷಣಗಳು, ಹೇಳಿಕೆಗಳ ಮೂಲಕ ಉದ್ವಿಗ್ನತೆ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳನ್ನು ದ್ವೇಷ ಹರಡಲು ಬಳಸುತ್ತಿರುವವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋಟ ಇಬ್ರಾಹೀಂ ಸಾಹೇಬ್ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X