ಮಸೂದ್, ಫಾಝಿಲ್ ಮನೆಗಳಿಗೆ ಮುಂದಿನ ದಿನಗಳಲ್ಲಿ ಭೇಟಿ ಕೊಡುತ್ತೇನೆ: ಸಿಎಂ ಬೊಮ್ಮಾಯಿ

ಬೆಂಗಳೂರು, ಆ.1: ದ.ಕ. ಜಿಲ್ಲೆಯಲ್ಲಿ ಇತ್ತೀಚೆಗೆ ಪ್ರತ್ಯೇಕ ಪ್ರಕರಣಗಳಲ್ಲಿ ಕೊಲೆಯಾದ ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಮುಹಮ್ಮದ್ ಫಾಝಿಲ್ ಮನೆಗಳಿಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಆರ್.ಟಿ.ನಗರ ನಿವಾಸದ ಬಳಿ ಇಂದು ಬೆಳಗ್ಗೆ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಇಂದು ಎಚ್.ಡಿ.ಕುಮಾರಸ್ವಾಮಿಯವರು ದ.ಕ. ಜಿಲ್ಲೆಯಲ್ಲಿ ಹತ್ಯೆಯಾದ ಮೂವರ ಮನೆಗಳಿಗೂ ಭೇಟಿ ನೀಡುತ್ತಿದ್ದರೆ. ಇದೇವೇಳೆ ಪ್ರವೀಣ್ ಮನೆಗೆ ಭೇಟಿ ನೀಡಿದ್ದ ನೀವು ಮಸೂದ್ ಮತ್ತು ಫಾಝಿಲ್ ಮನೆಗೆ ಭೇಟಿ ನೀಡಿಲ್ಲ ಎಂಬುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿರುವುದರ ಮಾಧ್ಯಮದವರು ಪ್ರಶ್ನಿಸಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದರು. ಮುಂದಿನ ದಿನಗಳಲ್ಲಿ ಖಂಡಿವಾಗಿಯೂ ಅವರ ಮನೆಗಳಿಗೆ ಭೇಟಿ ಕೊಡುತ್ತೇನೆ ಎಂದರು.
ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗ ಹಂತಕರ ಪತ್ತೆಯಾಗಲಿದೆ. ಪ್ರಕರಣ ಇನ್ನೊಂದೆರಡು ದಿನಗಳಲ್ಲಿ ಎನ್.ಐ.ಎ.ಗೆ ವರ್ಗಾವಣೆ ಮಾಡಲಾಗವುದು. ಈಗಾಗಲೇ ಅನೌಪಚಾರಿಕವಾಗಿ ಎನ್.ಐ.ಎ.ಗೆ ತಿಳಿಸಿದ್ದೇವೆ. ಪ್ರಕರಣಕ್ಕೆ ಸಂಬಂಧಿಸಿ ಕೆಲವು ಎನ್.ಐ.ಎ. ಅಧಿಕಾರಿಗಳು ಈಗಾಗಲೇ ಕೇರಳ ಮತ್ತು ಮಂಗಳೂರಿನಲ್ಲಿ ಪ್ರಾಥಮಿಕ ಮಾಹಿತಿ ಪಡೆಯುತ್ತಿದ್ದಾರೆ ಎಂದು ಸಿಎಂ ತಿಳಿಸಿದರು.





