'ಸಿದ್ದರಾಮೋತ್ಸವ'ದಿಂದ ನಮಗೆ ಆಪತ್ತಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು, ಆ.1: 'ಸಿದ್ದರಾಮೋತ್ಸವ'ದಿಂದ ನಮಗೆ ಆಪತ್ತಿಲ್ಲ. ನಾವು ಸಿದ್ದರಾಮ ದೇವರ ಆರಾಧಕರು. ದೇವರ ಉತ್ಸವವನ್ನು ನಿತ್ಯ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಜಿಲ್ಲಾ ಮಟ್ಟದಲ್ಲಿ ಜನೋತ್ಸವ ಆಚರಿಸುವ ಬಗ್ಗೆ ಚರ್ಚೆ ಮಾಡುತ್ತಿದ್ದು, ಎಲ್ಲಿಲ್ಲಿ ಮಾಡಬೇಕೆಂದು ನಿರ್ಧಾರ ಮಾಡಲಾಗುತ್ತಿದೆ.
ಪ್ರಾದೇಶಿಕ ಹಾಗೂ ಜಿಲ್ಲಾ ಮಟ್ಟದ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ವಿವರಗಳನ್ನು 3-4 ದಿನಗಳಲ್ಲಿ ಪಕ್ಷ ಪ್ರಕಟಿಸಲಿದೆ ಎಂದರು.
Next Story





