ಸುರತ್ಕಲ್ | ಫಾಝಿಲ್ ಮನೆಗೆ ಕುಮಾರಸ್ವಾಮಿ ಭೇಟಿ: 5 ಲಕ್ಷ ರೂ. ಪರಿಹಾರ ವಿತರಣೆ

ಮಂಗಳೂರು, ಆ.1: ನಾಲ್ಕು ದಿನಗಳ ಹಿಂದೆ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮುಹಮ್ಮದ್ ಫಾಝಿಲ್ ಅವರ ಮಂಗಳಪೇಟೆಯಲ್ಲಿರುವ ಮನೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿ ಸಂತ್ತಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಇದೇವೇಳೆ ಸಂತ್ರಸ್ತ ಕುಟುಂಬಕ್ಕೆ ಜೆಡಿಎಸ್ ಪಕ್ಷದ ವತಿಯಿಂದ 5 ಲಕ್ಷ ರೂ. ಚೆಕ್ ಅನ್ನು ಕುಮಾರಸ್ವಾಮಿ ಹಸ್ತಾಂತರಿಸಿದರು.
ಈ ಸಂದರ್ಭ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೆಗೌಡ, ಪಕ್ಷದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಮೊದಲಾದವರು ಉಪಸ್ಥಿತರಿದ್ದರು.
Next Story