ಸರಕಾರದ ಮುಖ್ಯ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ನೇಮಕಾತಿ ಆದೇಶ: ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ
ಬೆಂಗಳೂರು, ಆ.1: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ನೇಮಕಾತಿ ಆದೇಶದ ಮಾಡಿದ್ದ ಆರೋಪದಡಿ ಇಲ್ಲಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಷಯ್ ಬಾಹುಬಲಿ ಲಕ್ಕಣ್ಣಗೌಡ ಎಂಬುವವರನ್ನು ಉಪ ತಹಶೀಲ್ದಾರ್ ಹುದ್ದೆಗೆ ಆಯ್ಕೆ ಮಾಡಲಾಗಿದೆ ಎಂದು ನಕಲಿ ನೇಮಕಾತಿ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.
ನಕಲಿ ಆದೇಶ ಹೊರಡಿಸಿದ್ದ ಹಿನ್ನಲೆ ಕಾನೂನು ಕ್ರಮ ಕೈಗೊಳ್ಳಲು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುದರ್ಶನ್ ಅವರಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ಸಂಬಂಧ ಮೊಕದ್ದಮೆ ದಾಖಲಾಗಿದೆ.
ಅಲ್ಲದೆ, ಉಪ ತಹಶೀಲ್ದಾರ್ ಹುದ್ದೆ ನೇಮಕಾತಿ ಮೂಲಕ ಭಡ್ತಿ ನೀಡಲು ಸಾಧ್ಯವಿಲ್ಲ. ಇದು ಪೂರ್ಣ ಪ್ರಮಾಣದ ಮುಂಭಡ್ತಿ ಹುದ್ದೆ. ಆದರೆ ಮುಖ್ಯ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಆದೇಶದ ಪ್ರತಿಯನ್ನು ದುಷ್ಕರ್ಮಿಗಳು ಹೊರಡಿಸಿದ್ದು, ಮುಖ್ಯ ಕಾರ್ಯದರ್ಶಿ ಕಚೇರಿಯಿಂದಲೇ ನಕಲಿ ಆದೇಶ ಪ್ರತಿ ಹೊರಡಿಸಲಾಗಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ.
Next Story





