ಹೊಟೇಲ್‌ಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ: ದ.ಕ.ಜಿಲ್ಲಾಡಳಿತ ಪ್ರಕಟನೆ

ಮಂಗಳೂರು: ಹೋಟೆಲ್ ಮತ್ತು ಉಪಹಾರ ಮಂದಿರಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ. ಅಲ್ಲದೆ ಕಾನೂನಿನಲ್ಲಿ ಇದಕ್ಕೆ ಅವಕಾಶ ಕಲ್ಪಿಸಿಲ್ಲ ಎಂದು ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.
ನ್ಯಾಯಸಮ್ಮತವಲ್ಲದ ಸೇವಾ ಶುಲ್ಕ ವಿಧಿಸುವ ವ್ಯಾಪಾರಿ ಪ್ರವೃತ್ತಿಯನ್ನು ತಡೆಗಟ್ಟುವ ಸಲುವಾಗಿ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡಲು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರದಿಂದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಅದರಂತೆ ಈ ಬಗ್ಗೆ ದಾಖಲಾಗುವ ದೂರುಗಳ ತನಿಖೆಯನ್ನು ಕೈಗೊಳ್ಳಲು ಗ್ರಾಹಕರ ಹಿತರಕ್ಷಣಾ ಕಾಯ್ದೆ 2019ರ ಅನ್ವಯ ರಾಜ್ಯದಲ್ಲಿನ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅಧಿಕಾರವನ್ನು ನೀಡಲಾಗಿದೆ. ಜಿಲ್ಲಾಧಿಕಾರಿಯು ದೂರುಗಳ ವಿಚಾರಣೆ ಕೈಗೊಂಡು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story