ಮಣಿಪಾಲ: ರೈಲು ಹಳಿಯಲ್ಲಿ ಛಿದ್ರಗೊಂಡ ಮೃತದೇಹ ಪತ್ತೆ

ಮಣಿಪಾಲ: ದೊಡ್ಡಣಗುಡ್ಡೆಯ ಆದಿಶಕ್ತಿ ದೇವಸ್ಥಾನದ ಸಮೀಪದ ರೈಲು ಹಳಿಯಲ್ಲಿ ಛಿದ್ರಗೊಂಡ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಮೃತದೇಹವು ಗುರುತಿಸಲಾಗದಷ್ಟು ಛಿದ್ರಗೊಂಡಿದ್ದು, ದೇಹದಲ್ಲಿ ಜನಿವಾರ ಇರುವುದನ್ನು ಗುರುತಿಸಲಾಗಿದೆ. ಈ ವ್ಯಕ್ತಿ ರೈಲು ಢಿಕ್ಕಿ ಹೊಡೆದು ಮೃತಪಟ್ಟಿರಬಹುದೆಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
ಘಟನಾ ಸ್ಥಳದಲ್ಲಿಂದ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಇಲಾಖೆಗೆ ಸಹಕರಿಸಿದರು. ಮೃತನ ವಾರಸು ದಾರರು ಮಣಿಪಾಲ ಪೋಲಿಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಕೋರಲಾಗಿದೆ.
Next Story