ತೋನ್ಸೆ ಮೋಹನದಾಸ ಪೈ ಅಂತ್ಯಕ್ರಿಯೆ

ಉಡುಪಿ: ಮಣಿಪಾಲ ಪೈ ಕುಟುಂಬದ ಹಿರಿಯರಾದ ತೋನ್ಸೆ ಮೋಹನದಾಸ ಪೈ ಅವರ ಅಂತ್ಯಕ್ರಿಯೆ ಪೈ ಕುಟುಂಬದ ಹಿರಿಯರ ಸಮ್ಮುಖ ದಲ್ಲಿ ಸೋಮವಾರ ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ನೆರವೇರಿತು.
ಸಹೋದರರಾದ ನಾರಾಯಣ ಪೈ ಹಾಗೂ ಅಶೋಕ್ ಪೈ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನಗಳು ನಡೆಸಲಾಯಿತು. ಎಂಜಿಎಂ ಕಾಲೇಜಿನ ನೂತನ ರವೀಂದ್ರ ಕಲಾ ಮಂಟಪದಲ್ಲಿ ಬೆಳಗ್ಗೆ ೧೦ರಿಂದ ೧೧ರವರೆಗೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಣಿಪಾಲ ಸಂಸ್ಥೆಯ ಅಧೀನಕ್ಕೊಳಪಟ್ಟ ಶಾಲಾ-ಕಾಲೇಜು ವಿದ್ಯಾಾರ್ಥಿಗಳು, ಶಿಕ್ಷಕರು ಸಹಿತ ಸಾರ್ವಜನಿಕರು ಅಂತಿಮ ದರ್ಶನ ಪಡೆದುಕೊಂಡರು.
ಸಚಿವರಾದ ವಿ.ಸುನಿಲ್ ಕುಮಾರ್, ಎಸ್.ಅಂಗಾರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಯು.ಆರ್.ಸಭಾಪತಿ, ಜಿಲ್ಲಾಾಧಿಕಾರಿ ಕೂರ್ಮಾರಾವ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎ.ರಾಘವೇಂದ್ರ ಕಿಣಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾಾನದ ಅಧ್ಯಕ್ಷ ಡಾ ಎಂ.ಮೋಹನ ಆಳ್ವ, ಮಣಿಪಾಲ ಮೀಡಿಯಾ ನೆಟ್‌ವರ್ಕ್‌ನ ಕಾರ್ಯನಿರ್ವಾಹಕ ಅಧ್ಯಕ್ಷ ಟಿ.ಸತೀಶ್ ಪೈ, ತರಂಗ ವಾರ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ ಸಂಧ್ಯಾ ಪೈ, ಮಣಿಪಾಲ್ ಟೆಕ್ನಾಾಲಜಿಸ್ನ ಕಾರ್ಯ ನಿರ್ವಾಹಕ ನಿರ್ದೇಶಕ ಗೌತಮ್ ಪೈ, ವನಿತಾ ಪೈ, ಡಾ.ಇಂಧುಮತಿ ಪೈ, ಡಾ.ಆಶಾ ಪೈ, ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇನ್‌ನ ರಿಜಿಸ್ಟ್ರಾರ್ ಡಾ.ರಂಜನ್ ಪೈ, ಮಾಹೆ ವಿವಿಯ ಸಹ ಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಸಹಿತ ಹಲವಾರು ಮಂದಿ ಗಣ್ಯರು ಅಂತಿಮ ದರ್ಶನದಲ್ಲಿ ಪಾಲ್ಗೊಂಡರು.
ಡಾ.ಟಿಎಂಎಪೈ ಪ್ರತಿಷ್ಠಾನ ಹಾಗೂ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತ ಮಂಡಳಿಯ ಅಧೀನದ ಶಿಕ್ಷಣ ಸಂಸ್ಥೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿತ್ತು.







