Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹರ್‌ಘರ್ ತಿರಂಗ ಅಭಿಯಾನ, ಉಡುಪಿ ಜಿಲ್ಲಾ...

ಹರ್‌ಘರ್ ತಿರಂಗ ಅಭಿಯಾನ, ಉಡುಪಿ ಜಿಲ್ಲಾ ರಜತ ಮಹೋತ್ಸವ ಯಶಸ್ವಿಗೊಳಿಸಿ: ಉಸ್ತುವಾರಿ ಸಚಿವ ಎಸ್.ಅಂಗಾರ

ವಾರ್ತಾಭಾರತಿವಾರ್ತಾಭಾರತಿ1 Aug 2022 9:23 PM IST
share
ಹರ್‌ಘರ್ ತಿರಂಗ ಅಭಿಯಾನ, ಉಡುಪಿ ಜಿಲ್ಲಾ ರಜತ ಮಹೋತ್ಸವ ಯಶಸ್ವಿಗೊಳಿಸಿ: ಉಸ್ತುವಾರಿ ಸಚಿವ ಎಸ್.ಅಂಗಾರ

ಉಡುಪಿ: ದೇಶದ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಪ್ರತೀ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣೆ, ಜಿಲ್ಲೆಗೆ 25 ವರ್ಷ ತುಂಬಿದ ಸಂದರ್ಭದಲ್ಲಿ ಅಗಿರುವ ಅಭಿವಧ್ದಿ ಕಾರ್ಯಗಳು ಹಾಗೂ ಮುಂದೆ ಆಗಬೇಕಿರುವ ಕಾರ್ಯಗಳ ಕುರಿತ ಅವಲೋಕನ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ರಾಜ್ಯ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.

ಸೋಮವಾರ ಮಣಿಪಾಲದ ಜಿಪಂನ ಡಾ.ವಿ.ಎಸ್.ಆಚಾರ್ಯ ಸಭಾಂಗಣ ದಲ್ಲಿ ಹರ್‌ಘರ್‌ ತಿರಂಗ, ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. 

ಭಾರತ ಸ್ವಾತ್ರಂತ್ರ್ಯೋತ್ಸವದ ಅಮೃತೋತ್ಸವ ಅವಧಿಯುಲ್ಲಿ ಆಗಸ್ಟ್ 13ರಿಂದ 15ರವರೆಗೆ  ಹಗಲು ರಾತ್ರಿಯನ್ನದೇ 3 ದಿನಗಳ ಕಾಲ ಜಿಲ್ಲೆಯಲ್ಲಿ ಪ್ರತಿಯೊಬ್ಬರ ಮನೆಯ ಮೇಲೂ ತ್ರಿವರ್ಣ ಧ್ವಜವನ್ನು  ಹಾರಿಸುವುದ ರೊಂದಿಗೆ ದೇಶದ ಎಲ್ಲಾ ಪ್ರಜೆಗಳಲ್ಲೂ  ರಾಷ್ಟ್ರಪ್ರೇಮ ಹಾಗೂ ರಾಷ್ಟ್ರಭಕ್ತಿಯನ್ನು ಇಮ್ಮಡಿಗೊಳಿಸಲು ಅಭಿಯಾನ ಆಯೋಜಿಸಲಾಗಿದೆ ಎಂದರು.

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಒಟ್ಟು ೨,೭೨,೦೦೦ ಮನೆ, ೧ ಲಕ್ಷಕ್ಕೂ ಹೆಚ್ಚು ಅಂಗಡಿ ಮುಂಗಟ್ಟುಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ೪ಲಕ್ಷಕ್ಕೂ ಅಧಿಕ ಕಟ್ಟಡಗಳಿದ್ದು,  ಪ್ರತಿಯೊಂದು  ಕಟ್ಟಡಗಳ ಮೇಲೆಯೂ ತ್ರಿವರ್ಣಧ್ವಜ ಹಾರಿಸುವ ಹಿನ್ನೆಲೆಯಲ್ಲಿ ಅಗತ್ಯಕ್ಕನುಗುಣವಾಗಿ  ಸಾರ್ವಜನಿಕರಿಗೆ ತ್ರಿವರ್ಣ ಧ್ವಜಗಳು ಲಭ್ಯವಾಗುವಂತೆ ಕ್ರಮವಹಿಸಬೇಕು ಎಂದರು.  

ಜಿಲ್ಲೆಗೆ ೨೫ ವರ್ಷ: ಇದೇ ಆಗಸ್ಟ್ ೨೫ಕ್ಕೆ ಉಡುಪಿ ಜಿಲ್ಲೆ ಘೋಷಣೆಯಾಗಿ ೨೫ ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸುವುದರೊಂದಿಗೆ  ಅಂದಿನ ಉಡುಪಿ  ಇಂದಿನ ಉಡುಪಿಯ  ಪುನಾರಾವಲೋಕನ ಹಾಗೂ ಮುಂಬರುವ ದಿನಗಳಲ್ಲಿ ಆಗಬೇಕಿರುವ  ಕೆಲಸ ಕಾರ್ಯಗಳ  ಕುರಿತ  ಸಾಧಕ ಭಾದಕಗಳು, ಜನಸಾಮಾನ್ಯರ   ಆಶೋತ್ತರ ಗಳನ್ನು ಕ್ರೂಢೀಕರಿಸುವುದರೊಂದಿಗೆ ಜಿಲ್ಲೆಯ ಅಭಿವೃದ್ದಿಗೆ ಭದ್ರ ಬುನಾದಿ ಹಾಕಬೇಕು ಎಂದರು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ  ಸುನಿಲ್ ಕುಮಾರ್ ಮಾತನಾಡಿ, ರಾಷ್ಟ್ರಧ್ವಜವನ್ನು  ೩ ದಿನಗಳ ಅವಧಿಯಲ್ಲಿ ರಾಜ್ಯದಾದ್ಯಂತ ಇರುವ ಕೋಟಿಗೂ ಅಧಿಕ ಮನೆಗಳ ಮೇಲೆ ಹಾರಿಸಿ ದೇಶಪ್ರೇಮ ಮೆರೆಯು ವುದರೊಂದಿಗೆ ತ್ರಿವರ್ಣಧ್ವಜ ಹಾರಿಸುವ ಹರ್‌ಘರ್ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಈ ಬಾರಿಯ ಶ್ರೀಕೃಷ್ಣ ಜನ್ಮಾಷ್ಠಮಿಯ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಉಡುಪಿಯ ರಾಜಾಂಗಣದಲ್ಲಿ ಆಗಸ್ಟ್ ೧೯ರಂದುಆಯೋಜಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ  ಶ್ರೀಕೃಷ್ಣನ ಕುರಿತು ನೃತ್ಯ ರೂಪಕಗಳು,  ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ, ಹುಲಿ ವೇಷದ ಸ್ಪರ್ಧೆ ಆಯೋಜಿಸುವುದರ ಜೊತೆಗೆ ಶ್ರೀಕೃಷ್ಣ ಕುರಿತು ವಿದ್ವಾಂಸರಿಂದ ಉಪನ್ಯಾಸ ಆಯೋಜಿಸಲಾಗುವುದು ಎಂದರು. 

ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಕೆ.ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ ಸಿಇಓ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X