ಡಾ.ಶಿವಯೋಗಿಗಳ ಜನ್ಮದಿನ ವ್ಯಸನ ಮುಕ್ತ ದಿನಾಚರಣೆ
ಉಡುಪಿ : ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಅವರ ಸಹಯೋಗದಲ್ಲಿ ಡಾ.ಮಹಾಂತೇಶ ಶಿವಯೋಗಿಗಳ ಜನ್ಮದಿನ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಮಣಿಪಾಲದ ಜಿಪಂ ಸಭಾಂಗಣದಲ್ಲಿ ಇಂದು ಸರಳವಾಗಿ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಪುಷ್ಪಾರ್ಚನೆ ಮಾಡಿದರು. ರಾಜ್ಯ ಇಂಧನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್‌ಕುಮಾರ್, ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಜಿಲ್ಲಾಧಿಕಾರಿ ಕೂರ್ಮಾರಾವ್, ಜಿಪಂ ಸಿಇಒ ಪ್ರಸನ್ನ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ವೀಣಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Next Story