Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೇಡ ಜಂಗಮ ವೀರಶೈವರು ಪರಿಶಿಷ್ಟರಲ್ಲ:...

ಬೇಡ ಜಂಗಮ ವೀರಶೈವರು ಪರಿಶಿಷ್ಟರಲ್ಲ: ಶಾಸಕ ಎಂ.ಪಿ.ಕುಮಾರಸ್ವಾಮಿ

''ಪ್ರಬಲರು ಎಸ್.ಸಿ- ಎಸ್.ಟಿ ಮೀಸಲಾತಿ ಕೇಳುವುದು ಹೊಸ ರೂಪಾಂತರಿ ಅಟ್ರಾಸಿಟಿ ಪ್ರಕರಣ''

ವಾರ್ತಾಭಾರತಿವಾರ್ತಾಭಾರತಿ1 Aug 2022 10:33 PM IST
share
ಬೇಡ ಜಂಗಮ ವೀರಶೈವರು ಪರಿಶಿಷ್ಟರಲ್ಲ: ಶಾಸಕ ಎಂ.ಪಿ.ಕುಮಾರಸ್ವಾಮಿ

ಬೆಂಗಳೂರು:  'ವೀರಶೈವ ಲಿಂಗಾಯತ ಸಮುದಾಯದ ಗುರು ಸ್ಥಾನದಲ್ಲಿರುವ ಬೇಡ ಜಂಗಮರು ಪರಿಶಿಷ್ಟ ಜಾತಿಗೆ ಸೇರಿದವರಲ್ಲ. ಅವರಿಗೆ ಎಸ್.ಸಿ ಸರ್ಟಿಫಿಕೇಟ್ ಅನ್ನು ರಾಜ್ಯ ಸರ್ಕಾರ ನೀಡಬಾರದು ಎಂದು ಅನುಸೂಚಿತ ಜಾತಿ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ. ಎಂ.ಪಿ.ಕುಮಾರಸ್ವಾಮಿ  ಎಂದು ಹೇಳಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಎಸ್.ಸಿ.ಎಸ್.ಟಿ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವುದು, ಸಮಾಜಿಕವಾಗಿ ಮೇಲುಸ್ತರದಲ್ಲಿರುವ  ಮೇಲ್ವರ್ಗಗಳು ನಮ್ಮನ್ನು ಎಸ್.ಸಿ.ಎಸ್.ಟಿಗೆ ಸೇರಿಸಿ ಎಂದು ಒತ್ತಡ ಹಾಕುವುದು ಪ್ರಬಲರು ದುರ್ಬಲರ ಮೇಲೆ ನಡೆಸುವ ದೌರ್ಜನ್ಯವಷ್ಟೆ ಅಲ್ಲ . ಎಸ್.ಸಿ. - ಎಸ್.ಟಿ ಗಳ ಮೇಲೆ ಎಸಗುವ ಹೊಸ ಮಾದರಿಯ ರೂಪಾಂತರಿ ಅಟ್ರಾಸಿಟಿ ಪ್ರಕರಣವಾಗಿದೆ ಎಂದು ವ್ಯಾಖ್ಯಾನ ಮಾಡಿದ್ದಾರೆ.

ವೀರಶೈವ ಲಿಂಗಾಯತ ಸಮುದಾಯ ಅನಾದಿಕಾಲದಿಂದಲೂ  ಸಮಾಜಕ್ಕೆ ನ್ಯಾಯ ನೀತಿ ಧರ್ಮ ಬೋದಿಸುವುದರ ಜತೆಗೆ ದೀನದಲಿತರ ಮತ್ತು ಬಡವರ ಮಕ್ಕಳಿಗೆ ಉಚಿತ ಅನ್ನ ದಾಸೋಹ ಮತ್ತು ವಿದ್ಯಾಧಾನ ಮಾಡುತ್ತಿರುವ  ಸಮುದಾಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ ಸಮುದಾಯದಲ್ಲಿ ಮೇಲಿನ ಗುರು ಸ್ಥಾನದಲ್ಲಿರುವ  ಜಂಗಮರು ಎನ್ನುವ ಉಪ ಜಾತಿಯ ಕೇಲವು ವ್ಯಕ್ತಿಗಳು  ಎಸ್. ಸಿ ಬೇಡ ಜಂಗಮ ಎಂಬ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಆ ಜನರ ಅನ್ನ ಕಸಿದುಕೊಳ್ಳುತ್ತಿರುವು ಮಹಾಪಾಪವಾಗಿದೆ ಎಂದು ಹೇಳಿದರು.

ವೀರಶೈವ ಲಿಂಗಾಯತ ಸಮುದಾಯದಲ್ಲಿ  ಗುರುಗಳ ಸ್ಥಾದಲ್ಲಿರುವ  ಜಂಗಮರು ಎಸ್.ಸಿ.ಗಳಾಗಲು ಸಾಧ್ಯವೇ. ಕೇಂದ್ರ ಸರ್ಕಾರದ ಪರಿಶಿಷ್ಟ ಜಾತಿಗಳ‌ ಪಟ್ಟಿಯಲ್ಲಿನ 101 ಜಾತಿಗಳ 19ನೇ ಕ್ರಮ ಸಂಖ್ಯೆಯಲ್ಲಿ ಬೇಡ ಜಂಗಮ ಅಥವಾ ಬುಡ್ಗ ಜಂಗಮ ಅಥವಾ ಮೂಲ ಜಂಗಮ್  ಎಂಬ ಹೆಸರಿನ ಜಾತಿಯಿದೆ. ಈ ಜಾತಿಯನ್ನು  ಎಸ್.ಸಿ ಜಾತಿ ಪಟ್ಟಿಗೆ ಸೇರಿಸುವ ಮುನ್ನ  ಕುಲ ಶಾಸ್ತ್ರ, ಸಮಾಜಿಕ ಮತ್ತು ಶೈಕ್ಷಣಿಕ ಹಿನ್ನಲೆಯ ಬಗ್ಗೆ ಸಮಗ್ರ ಅಧ್ಯಯನ ನಡೆಸಲಾಗಿದೆ. 

ಬೇಡ ಜಂಗಮರು ಆಂದ್ರ ಪ್ರದೇಶ ಮೂಲದವರು ಇವರ ಮಾತೃ ಭಾಷೆ ತೆಲುಗು ಆಗಿದ್ದು.  ಮಾಂಸಹಾರಿಗಳು, ಹೊಟ್ಟೆ ಪಾಡಿಗಾಗಿ ವೇಷದಾರಿಗಳಾಗಿ ಊರುರು ಸುತ್ತಿ ಬಿಕ್ಷೆ ಬೇಡುವುದು ಇವರ ಕಾಯಕವಾಗಿದೆ. ಇವರಲ್ಲಿ ವಿದ್ಯಾವಂತರ ಸಂಖ್ಯೆ ಶೇ 1 ಆಗಿದೆ.  ಈ ಜನಾಂಗದ ಗುಣ ಲಕ್ಷಣಗಳಲ್ಲಿ ಶೇ ಒಂದು ಭಾಗನೂ ಹೊಂದಿರದ ವೀರಶೈವ ಲಿಂಗಾಯತ ಜನಾಂಗದವರು ಜಂಗಮ್ ಎಂಬ ಪದವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X