ಭಾರೀ ಮಳೆ; ಸುಳ್ಯ, ಕಡಬ ತಾಲೂಕಿನ ಶಾಲೆಗಳಿಗೆ ಇಂದು ರಜೆ

ಸುಳ್ಯ: ನಿನ್ನೆ ಸಂಜೆಯಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಳ್ಯ ಹಾಗೂ ಕಡಬ ತಾಲೂಕಿನ ಶಾಲೆಗಳಿಗೆ ಇಂದು (ಆ.2) ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಸಂಪಾಜೆ ಕಲ್ಲುಗುಂಡಿ ಪೇಟೆ ಜಲಾವೃತ್ತವಾಗ್ಗಿದ್ದು ಹಲವರನ್ನು ರಾತ್ರಿ ಸ್ಥಳಾಂತರಿಸಲಾಗಿದೆ. ಸುಬ್ರಹ್ಮಣ್ಯ ಪ್ರದೇಶದ ಹಲವು ಕಡೆಗಳಲ್ಲಿಯೂ ಜಲಾವೃತ್ತ ವಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story