Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆರ್ಥಿಕ ಇಲಾಖೆಯ ಆಕ್ಷೇಪದ ನಡುವೆಯೇ...

ಆರ್ಥಿಕ ಇಲಾಖೆಯ ಆಕ್ಷೇಪದ ನಡುವೆಯೇ ಕೆಪಿಸಿಎಲ್‌ನಿಂದ 5 ಸಾವಿರ ಕೋಟಿ ರೂ. ವೆಚ್ಚದಲ್ಲಿ ಪಂಪ್ಡ್ ಸ್ಟೋರೇಜ್ ಘಟಕ

ಜಿ.ಮಹಾಂತೇಶ್ಜಿ.ಮಹಾಂತೇಶ್2 Aug 2022 8:45 AM IST
share
ಆರ್ಥಿಕ ಇಲಾಖೆಯ ಆಕ್ಷೇಪದ ನಡುವೆಯೇ ಕೆಪಿಸಿಎಲ್‌ನಿಂದ 5 ಸಾವಿರ ಕೋಟಿ ರೂ. ವೆಚ್ಚದಲ್ಲಿ ಪಂಪ್ಡ್ ಸ್ಟೋರೇಜ್ ಘಟಕ

ಬೆಂಗಳೂರು, ಆ.2: ಶರಾವತಿ ಮತ್ತು ಬಿಡದಿ ವ್ಯಾಪ್ತಿಯಲ್ಲಿ 2,000 ಮೆಗಾ ವ್ಯಾಟ್ ಪಂಪ್ಡ್ ಸ್ಟೋರೇಜ್ ಘಟಕ ನಿರ್ಮಾಣ ಯೋಜನೆಯನ್ನು  ಪೂರ್ಣಗೊಳಿಸದೆಯೇ  ಅಗತ್ಯವಿಲ್ಲದಿದ್ದರೂ ಕರ್ನಾಟಕ ವಿದ್ಯುತ್ ನಿಗಮವು (ಕೆಪಿಸಿಎಲ್) 1,000 ಮೆಗಾ ವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಘಟಕವನ್ನು 5,000 ಕೋಟಿ ರೂ. ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ಮುಂದಾಗಿರುವುದು ಇದೀಗ ಬಹಿರಂಗವಾಗಿದೆ.

ರಾಜ್ಯದಲ್ಲಿ ಈಗಾಗಲೇ ಹೆಚ್ಚುವರಿ ವಿದ್ಯುತ್ ಉತ್ಪಾದನೆಯಾಗಿದ್ದರೂ 5,000 ಕೋಟಿ ರೂ. ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಒಂದು ಸಾವಿರ ಮೆಗಾ ವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಘಟಕ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಂಡಿರುವುದು ಬಹುದೊಡ್ಡ ಅಕ್ರಮಕ್ಕೆ ದಾರಿಮಾಡಿಕೊಡಲಿದೆ. ಅಲ್ಲದೆ ವಿದ್ಯುತ್‌ಗೆ ಹೆಚ್ಚಿನ ಬೇಡಿಕೆ ಇರದಿದ್ದರೂ ಖಾಸಗಿ ಸಹಭಾಗಿತ್ವದಲ್ಲಿ ಮತ್ತೊಂದು ಪಂಪ್ಡ್ ಸ್ಟೋರೇಜ್ ಘಟಕ ನಿರ್ಮಾಣ ಕೈಗೆತ್ತಿಕೊಂಡರೆ ಎಸ್ಕಾಂಗಳ ನಷ್ಟಕ್ಕೂ ಇದು ದಾರಿಮಾಡಿಕೊಡಲಿದೆ.

ವಿದ್ಯುತ್ ಸರಬರಾಜು ಕಂಪೆನಿ(ಎಸ್ಕಾಂ)ಗಳಿಗೆ ಬಾಕಿ ಇರುವ ಮೊತ್ತವನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಗಳಿಗೆ ಸೂಚನೆ ನೀಡಿರುವ ಬೆನ್ನಲ್ಲೇ ಎಸ್ಕಾಂಗಳ ನಷ್ಟಕ್ಕೆ ದಾರಿಮಾಡಿಕೊಡುವ ಯೋಜನೆಯನ್ನು ಇಂಧನ ಇಲಾಖೆಯು ಕೈಗೆತ್ತಿಕೊಂಡಿರುವುದು ಮುನ್ನೆಲೆಗೆ ಬಂದಿದೆ. ಹೊಸ ಯೋಜನೆ ಕೈಗೆತ್ತಿಕೊಳ್ಳಲು ಸಚಿವ ವಿ.ಸುನೀಲ್‌ಕುಮಾರ್ ಅವರು ಅನುಮೋದಿಸಿದ್ದಾರೆ ಎಂದು ಗೊತ್ತಾಗಿದೆ.

ಈಗಾಗಲೇ ಕೈಗೆತ್ತಿಕೊಂಡಿರುವ ಯೋಜನೆಗಳ ಸಂಬಂಧ ಯೋಜನಾ ವರದಿಯು ಮುಕ್ತಾ ಯಗೊಂಡಿರುವ ಬೆನ್ನಲ್ಲೇ ಮತ್ತೊಂದು ಯೋಜನೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ತರಾತುರಿಯಲ್ಲಿ ಕೈಗೆತ್ತಿಕೊಳ್ಳಲು ಇಂಧನ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆರ್ಥಿಕ ಇಲಾಖೆಗೆ ಈ ಸಂಬಂಧ ಪ್ರಸ್ತಾವ ಸಲ್ಲಿಸಿದ್ದಾರೆ. ಇದರ ಪ್ರತಿಯು "the-file.in'ಗೆ ಲಭ್ಯವಾಗಿದೆ.

ಖಾಸಗಿ ವಲಯವು 5,000 ಕೋಟಿ ರೂ. ವೆಚ್ಚದಲ್ಲಿ ಪಂಪ್ಡ್ ಸ್ಟೋರೇಜ್ ಘಟಕವನ್ನು ಸ್ಥಾಪಿಸುತ್ತಿದ್ದರೂ ರಾಜ್ಯ ಸರಕಾರವು ಸಂಬಂಧಪಟ್ಟ ಖಾಸಗಿ ಪಾಲುದಾರರೊಂದಿಗೆ 25 ವರ್ಷಗಳ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿರಬೇಕಾಗುತ್ತದೆ. ಖಾಸಗಿ ಪಾಲುದಾರರು ಮಾಡಿದ ಹೂಡಿಕೆಯ ಸುಮಾರು 50 ಪ್ರತಿಶತವನ್ನು ಕರ್ನಾಟಕ ಸರಕಾರ/ಎಸ್ಕಾಂಗಳು ಮೊದಲ ವರ್ಷದಲ್ಲಿಯೇ ಪಾವತಿಸಬೇಕಾಗುತ್ತದೆ ಎಂದೂ ಆರ್ಥಿಕ ಇಲಾಖೆಯು ತನ್ನ ಅಭಿಪ್ರಾಯವನ್ನು ತಿಳಿಸಿರುವುದು ಗೊತ್ತಾಗಿದೆ.

ವಿಶೇಷವಾಗಿ ಈ ಘಟಕದ ಮೂಲಕ  ಸೌರ ಮತ್ತು ಗಾಳಿ ವಿದ್ಯುತ್‌ನ್ನು ಗರಿಷ್ಠ ಸಮಯವಲ್ಲದವರೆಗೆ ಸಂಗ್ರಹಿಸುವುದು ಮತ್ತು  ಈ ಸಂಗ್ರಹವಾಗಿರುವ ವಿದ್ಯುತ್‌ನ್ನು ಗರಿಷ್ಠ ಅವಧಿಯಲ್ಲಿ ಬಳಸುವ ಮೂಲ ಉದ್ದೇಶ ಹೊಂದಿದೆ. ಆದರೂ ಕರ್ನಾಟಕದಲ್ಲಿ 2021ರಲ್ಲೇ 14,367 ಮೆಗಾ ವ್ಯಾಟ್ ಸಾಮರ್ಥ್ಯದ ಗರಿಷ್ಠ ಬೇಡಿಕೆಯನ್ನು ಪೂರೈಸಲು ಸಮರ್ಥವಾಗಿದೆ. ಅಲ್ಲದೆ ಪಿಆರ್‌ಡಿಸಿಎಲ್‌ನ ಅಧ್ಯಯನದ ಪ್ರಕಾರ 2024ರವರೆಗೂ ಗರಿಷ್ಠ ಬೇಡಿಕೆಯನ್ನು ಪೂರೈಸಲಿದೆ ಎಂದು ಅಭಿಪ್ರಾಯದಲ್ಲಿ ಆರ್ಥಿಕ ಇಲಾಖೆಯು ವಿವರಿಸಿದೆ.

ವಿದ್ಯುತ್ ಶೇಖರಣಾ ತಂತ್ರಜ್ಞಾನದಲ್ಲಿ ಕ್ಷಿಪ್ರಗತಿಯಲ್ಲಿ ಬದಲಾವಣೆಗಳಾಗುತ್ತಿವೆ ಮತ್ತು ಇಂಧನ ವಲಯದಲ್ಲಿ ದಕ್ಷತೆ ಜೊತೆಗೆ ಕೈಗಾರಿಕೆಗಳು ಮುಕ್ತ ಮಾರುಕಟ್ಟೆಯಿಂದ ನೇರವಾಗಿ ವಿದ್ಯುತ್ ಪಡೆಯುವ ಪ್ರವೃತ್ತಿಯನ್ನು ರೂಢಿಸಿಕೊಂಡಿವೆ. ಹೀಗಾಗಿ ಎಸ್ಕಾಂಗಳು ಸರಬರಾಜು ಮಾಡುವ ವಿದ್ಯುತ್‌ಗೆ ಹೆಚ್ಚಿನ ಬೇಡಿಕೆ ಕಾರ್ಯರೂಪಕ್ಕೆ ಬರುವುದಿಲ್ಲ. ಆದರೂ ಖಾಸಗಿ ಸಹಭಾಗಿತ್ವದಲ್ಲಿ ಮತ್ತೊಂದು ಪಂಪ್ಡ್ ಸ್ಟೋರೇಜ್ ಘಟಕ ನಿರ್ಮಾಣ ಕೈಗೆತ್ತಿಕೊಂಡರೆ ಎಸ್ಕಾಂಗಳ ನಷ್ಟವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದೂ ಆರ್ಥಿಕ ಇಲಾಖೆಯು ಹೇಳಿರುವುದು ತಿಳಿದು ಬಂದಿದೆ.

ಆರ್ಥಿಕ ಇಲಾಖೆ ತಕರಾರು: ಇಂಧನ ಇಲಾಖೆಯು ಸಲ್ಲಿಸಿರುವ ಪ್ರಸ್ತಾವಕ್ಕೆ (FD 491 Exp-1/2021, EN 27 PPT 2021-DATE-21-07-2022) ಆರ್ಥಿಕ ಇಲಾಖೆಯು ತಕರಾರು ಎತ್ತಿದೆ. ಕೆಪಿಸಿಎಲ್ ಈಗಾಗಲೇ 2,000 ಮೆಗಾವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಘಟಕ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಕರ್ನಾಟಕದಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆಯಾಗಿದ್ದರೂ ತಕ್ಷಣವೇ 1,000 ಮೆಗಾ ವ್ಯಾಟ್ ಸಾಮರ್ಥ್ಯದ ಮತ್ತೊಂದು ಪಂಪ್ಡ್ ಸ್ಟೋರೇಜ್ ಘಟಕ ನಿರ್ಮಾಣ ಯೋಜನೆಯನ್ನು ಖಾಸಗಿ ಸಹಭಾಗಿತ್ವದಡಿಯಲ್ಲಿ ಕೈಗೆತ್ತಿಕೊಳ್ಳುವುದು ಅಗತ್ಯವಿಲ್ಲ ಎಂದು ಆರ್ಥಿಕ ಇಲಾಖೆಯು 2022ರ ಜುಲೈ 21ರಂದು ತನ್ನ ಅಭಿಪ್ರಾಯ ನೀಡಿರುವುದು ತಿಳಿದು ಬಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X