ಉಡುಪಿ ನಗರಸಭೆ ಕುಡಿಯುವ ನೀರಿನ ಸಮಗ್ರ ಯೋಜನೆ ಅನುಷ್ಠಾನದ ಕುರಿತು ಸಭೆ

ಉಡುಪಿ, ಆ.2: ಉಡುಪಿ ನಗರಸಭಾ ವ್ಯಾಪ್ತಿಯ ಕುಡಿಯುವ ನೀರಿನ ಸಮಗ್ರ ಯೋಜನೆಯ ಬಗ್ಗೆ ಇಂದು ಮಣಿಪಾಲ ನಿರ್ಮಿತಿ ಕೇಂದ್ರದಲ್ಲಿ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದ ಅಧಿಕಾರಿಗಳೊಂದಿಗೆ ಶಾಸಕ ಕೆ.ರಘುಪತಿ ಭಟ್ ಸಭೆ ನಡೆಸಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಸದಸ್ಯರಾದ ಗಿರೀಶ್ ಅಂಚನ್, ಕಲ್ಪನಾ ಸುಧಾಮ, ವಿಜಯಲಕ್ಷ್ಮಿ ಹಾಗೂ ಕುಡಿಯುವ ನೀರಿನ ಸಮಗ್ರ ಯೋಜನೆಯ ಬಗ್ಗೆ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ದೀಪಾ ಚೊಲಾನ್, ಜಂಟಿ ನಿರ್ದೇಶಕ ಪದ್ಮ ಬಸಂತಪ್ಪ, ಉಪ ವ್ಯವಸ್ಥಾಪಕ ನಿರ್ದೇಶಕ ಜಯಮಾಲಾ ಪಿ., ಉಡುಪಿ ನಗರಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಯಶ್ವಂತ್ ಪ್ರಭು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story