ಶಾಲೆಗಳ ಮಾನ್ಯತೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಬೆಂಗಳೂರು, ಆ.2: ಅನುದಾನರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಆ.12ರವರೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
2022-23ನೇ ಸಾಲಿನಲ್ಲಿ ಅರ್ಜಿ ಸಲ್ಲಿಸದಿರುವ ಶಾಲೆಗಳ ಆಡಳಿತ ಮಂಡಳಿಗಳು ಅಂತಿಮವಾಗಿ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಒಮ್ಮೆ ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡಿದ್ದರೆ ಶುಲ್ಕದೊಂದಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಸೂಚಿಸಿದೆ.
ಮಾನ್ಯತೆಯನ್ನು ಪಡೆಯದ ಶಾಲೆಗೆ ಆರ್‍ಟಿಇ ಶುಲ್ಕ ಮರುಪಾವತಿ ಹಾಗೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ವಿದ್ಯಾರ್ಥಿಯನ್ನು ನಿಯಮಾನುಸಾರ ಹಾಜರುಪಡಿಸಲು ಸಾಧ್ಯವಿಲ್ಲ. ಮಾನ್ಯತೆ ಪಡೆಯದ ಶಾಲೆಗಳನ್ನು ಅನಧಿಕೃತ ಶಾಲೆಗಳು ಎಂದು ಪರಿಗಣಿಸಲಾಗುವುದು ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.
Next Story





