ಭಟ್ಕಳ | ಗುಡ್ಡ ಕುಸಿತ ಅವಘಡ ಸಂಭವಿಸಿದ ಮುಟ್ಟಳ್ಳಿಗೆ ಸಚಿವ ಕೋಟ ಭೇಟಿ

ಭಟ್ಕಳ, ಆ.3: ಮಂಗಳವಾರ ಮುಂಜಾನೆ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಸಾವನ್ನಪ್ಪಿದ ಅವಘಡ ಸಂಭವಿಸಿದ ಭಟ್ಕಳ ತಾಲೂಕಿನ ಮುಟ್ಟಳ್ಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಳೆದ ರಾತ್ರಿ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
ಸಂತ್ರಸ್ತರಿಗೆ ಶೀಘ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಪ್ರಕೃತಿ ವಿಕೋಪ ಸಂಭವಿಸಬಹುದಾದ ಕಡೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಆಲ್ಲದೆ, ತೀವ್ರ ಮಳೆ ಹಾನಿಗೊಳಗಾದ ತಾಲೂಕಿನ ಮುಂಡಳ್ಳಿ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿ ವೀಕ್ಷಿಸಿದರು.
ಶಾಸಕ ಸುನೀಲ್ ನಾಯ್ಕ್ ಸೇರಿದಂತೆ ಮುಖಂಡರು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.






.jpeg)
.jpeg)
.jpeg)
.jpeg)

