Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯ ಅಮೃತ ಮಹೋತ್ಸವದಲ್ಲಿ...

ಸಿದ್ದರಾಮಯ್ಯ ಅಮೃತ ಮಹೋತ್ಸವದಲ್ಲಿ ಲಕ್ಷಕ್ಕೂ ಅಧಿಕ ಮಂದಿ ಭಾಗಿ

ವೇದಿಕೆಗೆ ಆಗಮಿಸಿದ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು

ವಾರ್ತಾಭಾರತಿವಾರ್ತಾಭಾರತಿ3 Aug 2022 1:23 PM IST
share
ಸಿದ್ದರಾಮಯ್ಯ ಅಮೃತ ಮಹೋತ್ಸವದಲ್ಲಿ ಲಕ್ಷಕ್ಕೂ ಅಧಿಕ ಮಂದಿ ಭಾಗಿ

ದಾವಣಗೆರೆ,ಆ. 3: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಮನೂರು ಆರಮನೆ ಮೈದಾನದಲ್ಲಿ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಅಮೃತ ಮಹೋತ್ಸವ  ಕಾರ್ಯಕ್ರಮ ಆರಂಭವಾಗಿದೆ. 

ರಾಜ್ಯದ ಮೂಲೆ ಮೂಲೆಗಳಿಂದಲೂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಆಗಮಿಸುತ್ತಿದ್ದು, ಮಾರ್ಗ ಮಧ್ಯೆ ವಾಹನ ದಟ್ಟಣೆಯಿಂದ​ 4-5 ಕಿ.ಮೀ.ನಿಂದಲೇ ಕಾರ್ಯಕರ್ತರು ನಡೆದು ಕೊಂಡು ಕಾರ್ಯಕ್ರಮ ನಡೆಯುತ್ತಿರುವ ಮೈದಾನಕ್ಕೆ ಆಗಮಸುತ್ತಿದ್ದಾರೆ. 

ವೇದಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಂತೆ ಅಭಿಮಾನಿಗಳು ಜೈಕಾರ ಹಾಕಿದರು. 

ಇನ್ನು ಚಿತ್ರದುರ್ಗದ ಮುರುಘಾ ಮಠದಿಂದ ರಸ್ತೆ ಮಾರ್ಗದ ಮೂಲಕ ದಾವಣಗೆರೆಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ, ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕಾರ್ಯಕ್ರಮದ ಸಿದ್ಧತೆ ಹೇಗಿದೆ? 

ಕುಂದುವಾಡ ಬಳಿಯ ಸುಷಿ ಕನ್ವೆನ್ಷನ್ ಹಾಲ್‍ನಲ್ಲಿ ಅಮೃತ ಮಹೋತ್ಸವಕ್ಕೆ ಕಾರ್ಯಕ್ರಮಕ್ಕಾಗಿ ಸುಮಾರು ಆರು ಲಕ್ಷ ಮೈಸೂರು ಪಾಕ್ ಸಿದ್ಧವಾಗಿದೆ .  ತಯಾರಾದ ಮೈಸೂರ್ ಪಾಕ್‍ಅನ್ನು ಸುರಕ್ಷಿತವಾಗಿ ರಟ್ಟಿನ ಬಾಕ್ಸ್ ನಲ್ಲಿ ಹಾಕಿ ಪ್ಯಾಕ್ ಮಾಡಲಾಗಿದೆ. ಒಟ್ಟು ಎರಡು ಸಾವಿರ ಲೀಟರ್ ತುಪ್ಪ, ಎರಡು ಸಾವಿರ ಲೀಟರ್ ಹಾಲು, ಎರಡು ಸಾವಿರ ಕೆಜಿ ಕಡಲೆಹಿಟ್ಟು 4 ಸಾವಿರ ಕೆಜಿ ಸಕ್ಕರೆ ಸೇರಿದಂತೆ ವಿವಿಧ ಸಾಮಾಗ್ರಿಗಳನ್ನು ಬಳಸಿಕೊಳ್ಳಲಾಗಿದೆ. ಮೈಸೂರು ಪಾಕ್‍ನೊಂದಿಗೆ ಬಿಸಿ ಬೇಳೆಬಾತ್, ಪಲಾವ್, ಮೊಸರು ಬಜ್ಜಿ, ಮೊಸರನ್ನ ಕೊಡಲಾಗುವುದು. ಆಗಸ್ಟ್ 2ರೊಳಗೆ ಮೈಸೂರ್ ಪಾಕ್ ಸಿದ್ಧಪಡಿಸಿ ಬಳಿಕ ಊಟದ ಸಿದ್ಧತೆ ಮಾಡಿಕೊಳ್ಳಲಾಗಿದೆ. 

ಈ ಕಾರ್ಯಕ್ರಮದಲ್ಲಿ ಎರಡು ಸಾವಿರ ಜನರು ಅಡಿಗೆ ಬಾಣಿಸಿಗರು ಹಾಗೂ ಸಹಾಯಕರು ಕೆಲಸ ಮಾಡುತ್ತಿದ್ದಾರೆ. ಮೂರು ಅಡುಗೆ ಕೋಣೆಗಳನ್ನು ನಿರ್ಮಾಣ ಮಾಡಲಾಗಿದೆ. ಒಂದೊಂದು ಕಡೆ 170 ಕೌಂಟರ್ ಗಳಿವೆ. ಮಹಿಳೆಯರಿಗೆ ಪ್ರತ್ಯೇಕವಾಗಿ ಊಟದ ಕೌಂಟರ್ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮದ ದಿನ ಬೆಳಗ್ಗೆ 9 ಗಂಟೆಯಿಂದಲೇ ಊಟದ ವ್ಯವಸ್ಥೆ ಪ್ರಾರಂಭಗೊಂಡಿದೆ. ಸದ್ಯಕ್ಕೆ ಆರು ಲಕ್ಷ ಜನರಿಗೆ ಊಟಕ್ಕೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದ್ದು,  ಕಾರ್ಯಕ್ರಮಕ್ಕೆ ಬರುವ ಜನರನ್ನು ನೋಡಿಕೊಂಡು ಮತ್ತಷ್ಟು ಅಡುಗೆ ಮಾಡಿಕೊಳ್ಳಲು ಸಂಘಟಕರು ತೀರ್ಮಾನಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X