ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆ, ಇ-ಶ್ರಮ್ ಕಾರ್ಡ್ ವಿತರಣೆ

ಉಡುಪಿ, ಆ.3: ಉಡುಪಿ ನಗರಸಭೆ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಸ್ವ ನಿಧಿ) ಯೋಜನೆ ವಿತರಣೆ ಕಾರ್ಯಕ್ರಮ ಇಂದು ಅಜ್ಜರಕಾಡು ಪುರಭವನದಲ್ಲಿ ನಡೆಯಿತು.
ಅದೇ ರೀತಿ ಕಾರ್ಮಿಕ ಇಲಾಖೆ ಉಡುಪಿ ಜಿಲ್ಲೆ, ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿ ಬೆಂಗಳೂರು ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಮತ್ತು ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಹಾಗೂ ಇ-ಶ್ರಮ್ ಯೋಜನೆ ನೊಂದಣಿ ಅಭಿಯಾನ ಹಾಗೂ ಮಾಹಿತಿ ಶಿಬಿರವನ್ನು ಆಯೋಜಿಸಲಾಯಿತು.
ಉಡುಪಿ ಶಾಸಕ ಕೆ.ರಘುಪತಿ ಭಟ್ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ, ಬೀದಿ ಬದಿ ವ್ಯಾಪಾರಿಗಳಿಗೆ ವಿಶೇಷ ಕಿರು ಸಾಲ ಸೌಲಭ್ಯ ಮಂಜೂರಾತಿ ಪತ್ರ ಮತ್ತು ಇ-ಶ್ರಮ್ ಕಾರ್ಡ್ ವಿತರಣೆ ಮಾಡಿದರು. ಅಧ್ಯಕ್ಷತೆಯನ್ನು ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ವಹಿಸಿದ್ದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ಪ್ರಭಾಕರ್ ಪೂಜಾರಿ, ಹರೀಶ್ ಶೆಟ್ಟಿ, ಸವಿತಾ ಹರೀಶ್ ರಾಮ್, ರಜನಿ ಹೆಬ್ಬಾರ್, ಮಾನಸಿ ಪೈ, ಗಿರಿಧರ್ ಆಚಾರ್ಯ, ಅಶೋಕ್ ನಾಯ್ಕ್, ನಗರಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಕುಮಾರ್, ಲೀಡ್ ಡಿಸ್ಟ್ರಿಕ್ ಚೀಫ್ ಮ್ಯಾನೇಜರ್ ಪಿ.ಎಂ ಪಿಂಜಾರ ಉಪಸ್ಥಿತರಿದ್ದರು.