ಉಡುಪಿ ಜಿಲ್ಲೆ ರಜತ ಮಹೋತ್ಸವ ಆಚರಣೆ: ಪೂರ್ವತಯಾರಿ ಸಭೆ

ಉಡುಪಿ : ಉಡುಪಿ ಜಿಲ್ಲೆ ರಚನೆಯಾಗಿ ಆ.25ಕ್ಕೆ 25 ವರ್ಷ ಪೂರ್ಣ ಗೊಳ್ಳುತ್ತಿದ್ದು, ಇದರ ರಜತ ಮಹೋತ್ಸವ ಆಚರಣೆಯ ಪೂರ್ವ ತಯಾರಿಯ ಕುರಿತು ಇಂದು ಉಡುಪಿಯಲ್ಲಿ ಸಭೆ ಜರಗಿತು.
ಸಭೆಯಲ್ಲಿ ಶಾಸಕ ಕೆ.ರಘುಪತಿ ಭಟ್ ರಾಜ್ಯ ಮಟ್ಟದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಕುರಿತು ಚರ್ಚಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ಕೋಶಾಧಿಕಾರಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ನಗರಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.
Next Story





