ಪಟಾಕಿ ಮಾರಾಟ ನಿಷೇಧಿಸಿ ಹೊರಡಿಸಿದ್ದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಸಾಂದರ್ಭಿಕ ಚಿತ್ರ
ಬೆಂಗಳೂರು, ಆ.3: ಬೆಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಪಟಾಕಿ ಮಾರಾಟ ನಿಷೇಧಿಸಿ 2013ರಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ವರ್ತಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಡಿಜಿ ಐಜಿಪಿ ಅವರು ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿದೆ.
ನಗರದ ಚಿಕ್ಕಪೇಟೆ, ಮಾಮೂಲ್ಪೇಟೆ, ಸುಲ್ತಾನ್ ಪೇಟೆ, ಅವಿನ್ಯೂ ರಸ್ತೆ ಹಾಗೂ ಶಿವಾಜಿ ನಗರ ಸೇರಿ ಹಲವು ಕಡೆಗಳಲ್ಲಿ ಪಟಾಕಿ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು. ಈ ಇಕ್ಕಟ್ಟಾದ ರಸ್ತೆಗಳಲ್ಲಿ ಒಂದು ವೇಳೆ ಅಗ್ನಿ ಆಕಸ್ಮಿಕ ಸಂಭವಿಸಿದರೆ ಈ ರಸೆಗಳಿಗೆ ಅಗ್ನಿಶಾಮಕ ವಾಹನಗಳು ಬರಲು ಸಾಧ್ಯವಿಲ್ಲ ಎಂಬ ಕಾರಣದಿಂದಾಗಿ ಮಾರಾಟ ನಿಷೇಧಿಸಲಾಗಿತ್ತು.
Next Story





