Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಟಿ ಟೆಕ್ಕಿಯ ಮೃತದೇಹ ಹೋಟೆಲ್‍ನಲ್ಲಿ...

ಐಟಿ ಟೆಕ್ಕಿಯ ಮೃತದೇಹ ಹೋಟೆಲ್‍ನಲ್ಲಿ ಪತ್ತೆ: ಅತ್ಯಾಚಾರ ಆರೋಪ

ವಾರ್ತಾಭಾರತಿವಾರ್ತಾಭಾರತಿ4 Aug 2022 7:53 AM IST
share
ಐಟಿ ಟೆಕ್ಕಿಯ ಮೃತದೇಹ ಹೋಟೆಲ್‍ನಲ್ಲಿ ಪತ್ತೆ: ಅತ್ಯಾಚಾರ ಆರೋಪ

ನೋಯ್ಡಾ: ಇಲ್ಲಿನ ಸೆಕ್ಟರ್ 70ರ ಹೋಟೆಲ್ ಕೊಠಡಿಯಲ್ಲಿ 26 ವರ್ಷ ವಯಸ್ಸಿನ ಐಟಿ ಮಹಿಳಾ ಟೆಕ್ಕಿಯ ಮೃತದೇಹ ಪತ್ತೆಯಾಗಿದೆ. ಇದು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡುಬಂದಿದೆ. ಆದರೆ ಪುತ್ರಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ತಂದೆ ನೀಡಿರುವ ದೂರಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಹೋಟೆಲ್ ಕೊಠಡಿಯ ಸೀಲಿಂಗ್ ಫ್ಯಾನ್‍ನಲ್ಲಿ ಮಹಿಳೆಯ ಶವ ನೇತಾಡುತ್ತಿತ್ತು.

ಸಾವಿಗೆ ಮುನ್ನ ಮಗಳು ದಾಖಲಿಸಿದ ವೀಡಿಯೊದಲ್ಲಿ ಆಕಾಶ್ ಎಂಬ ವ್ಯಕ್ತಿಯಿಂದ ತನ್ನನ್ನು ರಕ್ಷಿಸುವಂತೆ ಅರ್ಜುನ್ ಎಂಬಾತನಿಗೆ ಕಣ್ಣೀರಿಟ್ಟು ಮೊರೆ ಇಟ್ಟಿದ್ದಾಳೆ ಎಂದು ಮಹಿಳೆಯ ತಂದೆ ಆಪಾದಿಸಿದ್ದಾರೆ. ಆದರೆ ಈ ವೀಡಿಯೊವನ್ನು ಯಾವಾಗ ಹಾಗೂ ಎಲ್ಲಿ ಚಿತ್ರೀಕರಿಸಲಾಗಿದೆ ಎನ್ನುವುದು ಸ್ಪಷ್ಟವಾಗಿಲ್ಲ. ಸೋಮವಾರ ರಾತ್ರಿ ಮಹಿಳೆ ಒಬ್ಬರೇ ಕೊಠಡಿ ಪಡೆದಿದ್ದರು ಎಂದು ಹೆಚ್ಚುವರಿ ಡಿಸಿಪಿ ಅಂಕಿತಾ ಶರ್ಮ ಹೇಳಿದ್ದಾರೆ. 

ಮರುದಿನ ಮಧ್ಯಾಹ್ನ 12 ಗಂಟೆಗೆ ಚೆಕೌಟ್ ಸಮಯದಲ್ಲಿ ಹೋಟೆಲ್ ಸಿಬ್ಬಂದಿ ಆಕೆಯನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಯಾವುದೇ ಪ್ರತಿಕ್ರಿಯೆ ಇರಲಿಲ್ಲ. ಕೆಲ ಕಾಲ ಕಾದು ಬಳಿಕ ಬಾಗಿಲು ಒಡೆದು ನೋಡಿದಾಗ ಶವ ಫ್ಯಾನ್‍ನಲ್ಲಿ ನೇತಾಡುತ್ತಿತ್ತು ಎಂದು ವಿವರಿಸಿದ್ದಾರೆ. ಮಹಿಳೆ ಗಾಝಿಯಾಗಾದ್‍ನಲ್ಲಿ ಪೋಷಕರ ಜತೆ ವಾಸವಿದ್ದರು. ನೋಯ್ಡಾದ ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು.

ದೆಹಲಿಯ ಕನೌತ್ ಪ್ಲೇಸ್‍ನ ಕೆಫೆಯೊಂದರಲ್ಲಿ ಈಕೆಯನ್ನು ಭೇಟಿ ಮಾಡಿದ್ದ ಪೊಲೀಸ್ ಪೇದೆಯೊಬ್ಬರು ಹಾಗೂ ಇತರ ಮೂವರ ಕೈವಾಡದ ಶಂಕೆ ಇದೆ ಎಂದು ತಂದೆ ಆಪಾದಿಸಿದ್ದಾರೆ. 

"ಮಗಳ ಮೇಲೆ ಅತ್ಯಾಚಾರ ನಡೆಸಿ, ಆತ್ಮಹತ್ಯೆಯಂತೆ ಬಿಂಬಿಸಲು ಸೀಲಿಂಗ್ ಫ್ಯಾನ್‍ಗೆ ಶವವನ್ನು ನೇತು ಹಾಕಲಾಗಿದೆ. ಉತ್ತರ ಪ್ರದೇಶದ ಪೊಲೀಸ್ ಒಬ್ಬರ ಕೈವಾಡ ಈ ಕೃತ್ಯದ ಹಿಂದೆ ಇದೆ ಎಂಬ ಶಂಕೆ ನಮ್ಮದು. ಇತರ ಮೂವರು ಇದರಲ್ಲಿ ಷಾಮೀಲಾಗಿದ್ದಾರೆ ಎಂಬ ಗುಮಾನಿ ಇದೆ" ಎಂದು ತಂದೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X